ಚಿತ್ರದುರ್ಗ | ಆಟೋ ಚಾಲಕರ ನಿಗಮ ಮಂಡಳಿ ರಚನೆಗೆ ಒತ್ತಾಯ

Date:

ಹೊಸದಾಗಿ ಬರುವಂತಹ ಆಟೋಗಳಿಗೆ ಆರ್‌ಟಿಒ ಇಲಾಖೆ ಪರವಾನಗಿ(ಪರ್ಮಿಟ್) ನೀಡಬಾರದು. ಆಟೋ ಚಾಲಕರಿಗಾಗಿಯೇ ಆಟೋ ಚಾಲಕರ ನಿಗಮ ಮಂಡಳಿ ರಚನೆಯಾಗಬೇಕು ಎಂದು ಆಗ್ರಹಿಸಿ ಆಟೋ ಚಾಲಕರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಮತ್ತು ಪ್ರಾದೇಶಿಕ ಕಚೇರಿ ಮುಂದೆ ಪ್ರತಿಭಟನೆಯನ್ನು ನಡೆಸಿದರು.

- Advertisement -

ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಿಂದ ವಾಸವಿ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಸಾಗಿದ, ದಾರಿಯುದ್ದಕ್ಕೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಪರವಾನಗಿ ಇಲ್ಲದಿರುವ ಹೊರ ಪರವಾನಗಿ ಹೊಂದಿರುವ ಆಟೋಗಳನ್ನು ಹಿಡಿದು ಹಾಕಬೇಕು. ಆಟೋ ಚಾಲಕರ ಸಂಘಟನೆಗಳು ನಿಗದಿ ಪಡಿಸಿರುವ ಸ್ಥಳಗಳಿಗೆ ಆಟೋ ನಿಲ್ದಾಣಗಳನ್ನು ಜಿಲ್ಲಾ ಆಡಳಿತ ಈ ಕೂಡಲೇ ನಿರ್ಮಿಸಿಕೊಡಬೇಕು. ಹಳ್ಳಿಗಳಿಗೆ ಸೀಟು ಹೊಡೆಯುವ ಆಪೇ ಆಟೋಗಳನ್ನು ಈ ಕೂಡಲೇ ನಗರದಿಂದ ಬಹಿಷ್ಕರಿಸಬೇಕು, ರಾಜ್ಯಸರ್ಕಾರದಿಂದ ಬರುವ ಆಶ್ರಯ ಮನೆ ಯೋಜನೆಯಡಿಯಲ್ಲಿ ನಿರ್ಗತಿಕ ಆಟೋಚಾಲಕರಿಗೆ ಕಡ್ಡಾಯವಾಗಿ ಆಶ್ರಯ ಮನೆ ನೀಡಬೇಕು. ನಗರಸಾರಿಗೆ ಬಸ್ಸುಗಳಿಗೆ ನಿಗಧಿತ ಸಮಯ, ಸ್ಥಳ ಕಡ್ಡಾಯವಾಗಿ ಕೂಡಲೇ ನಿಗಧಿಪಡಿಸಬೇಕು” ಎಂದು ಒತ್ತಾಯಿಸಿದರು

“ಕಳೆದ 20 ವರ್ಷಗಳಿಂದ ಹಲವು ಆಟೋ ಸಂಘಟನೆಗಳು ಹೋರಾಟ ಮಾಡುತ್ತಾ ಮನವಿ ಸಲ್ಲಿಸಿದ್ದರೂ ಕೂಡ ಈ ಹಿಂದೆ ಇದ್ದ ಅಧಿಕಾರಿಗಳು ಬೇಡಿಕೆಗಳನ್ನು ಈಡೇರಿಸಿಲ್ಲ. ಹಾಗಾಗಿ ತಾವು ಮುಂದಿನ 15 ದಿನಗಳೊಳಗಾಗಿ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಜಿಲ್ಲಾಧಿಕಾರಿಗೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವ್ಯವಸಾಯಗಾರರ ಪರಿವರ್ತನಾ ಕೈಗಾರಿಕಾ, ವ್ಯಾಪಾರೋದ್ಯಮ ಸಹಕಾರ ಸಂಘದಲ್ಲಿಅಕ್ರಮ: ತನಿಖೆಗೆ ಆಗ್ರಹ

“ಒಂದು ವೇಳೆ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆಯನ್ನು ನೀಡಿದರು.

ಈ ವೇಳೆ ಆಟೋ ಚಾಲಕ ಸಂಘಟನೆ ಒಕ್ಕೂಟದ ಬಹುತೇಕ ಕಾರ್ಯಕರ್ತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...