ಚಿತ್ರದುರ್ಗ | ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಆಗ್ರಹ

Date:

ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಭದ್ರಾ ಮೇಲ್ದಂಡೆ ಯೋಜನೆಯನ್ನು ನಿರ್ವಹಿಸಲು ಮತ್ತು ಅನುಷ್ಠಾನಕ್ಕೆ ತರಲು ಚಿತ್ರದುರ್ಗದ ಪ್ರಧಾನ ಕಛೇರಿಗೆ ಮುಖ್ಯ ಇಂಜಿನಿಯರ್ ಮತ್ತು ಹಿರಿಯ ಅಧಿಕಾರಿಗಳನ್ನು ನೇಮಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ಪ್ರತಿಭಟನೆ ನಡೆಸಿ ಕಾರ್ಯಕರ್ತರು, ಮೊಳಕಾಲ್ಮೂರು ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಭದ್ರಾ ಮೇಲ್ದಂಡ ಪ್ರಧಾನ ಕಛೇರಿಯಲ್ಲಿ ಮುಖ್ಯ ಇಂಜಿನಿಯರ್ ಹುದ್ದೆ ಖಾಲಿಯಿದೆ. ತಕ್ಷಣ ಖಾಲಿ ಹುದ್ದೆ ಭರ್ತಿ ಮಾಡಬೇಕು. ಕಾಮಗಾರಿಗಳು ನಡೆಯುವುದು ವಿಳಂಬವಾಗಿದ್ದು, ಕಾಮಗಾರಿ ತ್ವರಿತವಾಗಿ ನಡೆಯಬೇಕಾದರೆ ಖಾಲಿ ಇರುವ ಹುದ್ದೆಗಳನ್ನು ತುಂಬ ಬೇಕು. ಕಾಮಗಾರಿಗಳಿಗೆ ಹೆಚ್ಚು ಹಣ ಬಿಡುಗಡೆ ಮಾಡಿ ತ್ವರಿತವಾಗಿ ಜಿಲ್ಲೆಯ ಜನರಿಗೆ ನಿರ್ಧಿಷ್ಟ ಅವಧಿಯೊಳಗೆ ನೀರು ಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಬೇಡರಹಳ್ಳಿ ಬಸವರೆಡ್ಡಿ, “ವಿವಿಧ ಬೇಡಿಕೆಗಳೊಂದಿಗೆ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯಿಸುತ್ತಿದ್ದೇವೆ. ಸರ್ಕಾರ ರೈತ ಸಂಘದ ಬೇಡಿಕೆಗಳನ್ನು ಪರಿಗಣಿಸಿ ಶೀಘ್ರವೇ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರತಿಭಟನೆಯನ್ನು ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರತಿಭಟನಾಕಾರರ ಹಕ್ಕೊತ್ತಾಯಗಳು

  1. ಮುಖ್ಯ ಇಂಜಿನಿಯರ್ ಅವರನ್ನು ತಕ್ಷಣ ನೇಮಿಸಬೇಕು.
  2. ರೈತರ ಜಮೀನಿನ ಪರಿಹಾರ ಕೋಟಾದಲ್ಲಿ ಭ್ರಷ್ಟಾಚಾರವಾಗುತ್ತಿದ್ದು, ಇದನ್ನು ತಡೆಯಬೇಕು.
  3. ಭದ್ರಾ ಮೇಲ್ದಂಡೆ ಯೋಜನೆಗೆ ಜಮೀನು ನೀಡಿರುವ ರೈತರಿಗೆ ತಕ್ಷಣವೇ ಪರಿಹಾರ ಬಿಡುಗಡೆ ಮಾಡಬೇಕು.
  4. ಪರಿಹಾರದ ಮೊತ್ತವನ್ನು ರೈತರ ಬ್ಯಾಂಕ್‌ ಖಾತೆಗೆ ನೇರವಾಗಿ ಪಾವತಿಸಬೇಕು.
  5. ಈ ಹಿಂದೆ ಜಮೀನು ನೀಡಿದ್ದ ರೈತರಿಗೆ ಇನ್ನೂ ಪರಿಹಾರ ದೊರೆತಿಲ್ಲ. ಅವರಿಗೂ ಕೂಡಲೇ ಪರಿಹಾರ ಪಾವತಿಸಬೇಕು.
  6. ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲೂಕುಗಳ ರೈತರು ಬರದಿಂದ ತತ್ತರಿಸಿದ್ದಾರೆ. ಅವರಿಗೆ ನೆರವಾಗಲು ಈ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕು.

ಪ್ರತಿಭಟನೆಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ರವಿಕುಮಾರ್, ಕಾರ್ಯದರ್ಶಿ ಮಹಾಂತೇಶ್, ಕಾರ್ಯದರ್ಶಿ ಎಸ್ ಮಂಜುನಾಥ್, ಕಾರ್ಯಧ್ಯಕ್ಷ ಎಸ್ ಟಿ ಚಂದ್ರಣ್ ಪಾಪಣ್ಣ,ಈರೇಶಿ, ಮಂಜಣ್ಣ, ಬೋರಯ್ಯ ಇತರ ಸದಸ್ಯರು ಮತ್ತು ರೈತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಅನ್ಯಾಯ; ಚೆಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಚೆಂಬು ಹಿಡಿದುಕೊಂಡು...

ಉಡುಪಿ | ಮತದಾನ ಬಹಿಷ್ಕಾರ ಹಿಂಪಡೆದ ಕಟ್ಟಿಂಗೇರಿ ಮತದಾರರು

ರಸ್ತೆಯ ಅವ್ಯವಸ್ಥೆ ಖಂಡಿಸಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದ ಮತದಾರರ ಮನವೊಲಿಸುವಲ್ಲಿ ಮಾಜಿ...

ಕಲಬುರಗಿ | ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿತ್ತು: ಮಾಲೀಕಯ್ಯ ಗುತ್ತೇದಾರ

2018ರಲ್ಲಿ ಕಾರಣಾಂತರಗಳಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರ್ಪಡೆಯಾದೆ. ಪಕ್ಷದಲ್ಲಿ...

ದಕ್ಷಿಣ ಕನ್ನಡ | ಎನ್‌ಡಿಎ ಹೀನಾಯ ಸೋಲು, ‘ಇಂಡಿಯಾ’ ಒಕ್ಕೂಟಕ್ಕೆ ಬಹುಮತ ಖಚಿತ: ಎಂ ವೀರಪ್ಪ ಮೊಯಿಲಿ

ಬೆಲೆ ಏರಿಕೆ, ಆರ್ಥಿಕ ಅಸಮಾನತೆ ನಿರುದ್ಯೋಗದಿಂದ ಕೇಂದ್ರ ಸರ್ಕಾರದ ವಿರುದ್ಧ ಜನರ...