ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಪಿ. ಮಹದೇವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡೇಹುಡೆ ಗ್ರಾಮದ ನಿವೇಶನ ರಹಿತ ದಲಿತ ಕುಟುಂಬಗಳ ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಿ, ಇಂದು ಮೋಟಾರ್ ಪಂಪ್ ಸೆಟ್ ಅಳವಡಿಸಲಾಗಿದೆ.
ಕಡೇಹುಡೆ ಗ್ರಾಮದ ಸುಮಾರು 90 ದಲಿತ ಕುಟುಂಬಗಳಿಗೆ ನಿವೇಶನ, ಹಕ್ಕುಪತ್ರ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಅಕ್ಟೋಬರ್ 28ರಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಹಲವು ವರ್ಷಗಳಿಂದ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿದ್ದ ಕುಟುಂಬಗಳ ಮನವಿಗೆ ಸ್ಪಂದಿಸಿ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಮೋಟಾರ್ ಪಂಪ್ ಸೆಟ್ ಅಳವಡಿಸಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ.

ಈ ಕಾರ್ಯಕ್ಕೆ ಸ್ಪಂದಿಸಿ ಸಹಕರಿಸಿದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಅಧಿಕಾರಿಗಳಿಗೆ ಕಡೇಹುಡೆ ಗ್ರಾಮದ ಜನರು ಕೃತಜ್ಞತೆ ಸಲ್ಲಿಸಿದ್ದಾರೆ. ಇದೇ ಸಂದರ್ಭದಲ್ಲಿ ರೇಷನ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಯಾವುದೇ ಅರ್ಹ ಕುಟುಂಬ ನಿವೇಶನದ ಹಕ್ಕಿನಿಂದ ವಂಚಿತವಾಗಬಾರದು. ಗ್ರಾಮದ ಎಲ್ಲಾ ಅರ್ಹ ಕುಟುಂಬಗಳಿಗೂ ನಿವೇಶನ, ಹಕ್ಕುಪತ್ರ ಮತ್ತು ವಸತಿ ಸೌಲಭ್ಯ ದೊರೆಯುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.



