ಚಿತ್ರದುರ್ಗ | ಶಿಕ್ಷಣ ಇಲಾಖೆ ಕಚೇರಿಯಲ್ಲಿ ‘ಎಣ್ಣೆ ಪಾರ್ಟಿ’; ಐವರು ಅಮಾನತು

Date:

ಚಿತ್ರದುರ್ಗದ ಸರ್ಕಾರಿ ಕಚೇರಿಯೊಂದರಲ್ಲಿ ಕಚೇರಿ ಅಧಿಕಾರಿಗಳೇ, ಔತಣಕೂಟಕ್ಕಾಗಿ ಮದ್ಯದ ವ್ಯವಸ್ಥೆ (ಎಣ್ಣೆ ಪಾರ್ಟಿ) ಏರ್ಪಡಿಸಿ ಸೇವನೆ ಮಾಡಿದ ಘಟನೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಘಟನೆ ಹಿನ್ನೆಲೆಯಲ್ಲಿ ಐವರು ನೌಕರರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.

- Advertisement -

ಮಕ್ಕಳಿಗೆ ಪಾಠ ಹೇಳಿಕೊಡುವ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಈ ಘಟನೆ ನಡೆದಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ. ಶಿಕ್ಷಣ ಇಲಾಖೆ ನೌಕರರಿಂದ ಚಿತ್ರದುರ್ಗ ಡಿಡಿಪಿಐ ಕಚೇರಿಯಲ್ಲೇ ‘ಎಣ್ಣೆ ಪಾರ್ಟಿ’ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿರುವ ಹಿರಿಯ ಅಧಿಕಾರಿಗಳು, ಕಚೇರಿಯ ವಾಹನ ಶೆಡ್ ನಲ್ಲಿ ತಯಾರಿ ನಡೆದಿತ್ತು, ಅಲ್ಲೇ ವಿಡಿಯೋ ಮಾಡಲಾಗಿದೆ.‌ ಆನಂತರ ಪಾರ್ಟಿಯನ್ನು ಹೊರಕ್ಕೆ ವರ್ಗಾಯಿಸಲಾಗಿದೆ ಎಂದು ಸಮಜಾಯಿಷಿ ನೀಡಿದ್ದಾರೆ.‌ ಆದರೂ ಅದು ಕಚೇರಿ ಒಳಾಂಗಣದಂತೆ ದೃಶ್ಯದಲ್ಲಿ ಕಂಡುಬರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕಚೇರಿಯ ಸಿಬ್ಬಂದಿಯೊಬ್ಬರು ಹೊಸ ಕಾರು ಖರೀದಿಸಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಡಿಡಿಪಿಐ ಕಚೇರಿಯಲ್ಲೇ 20 ಲೀಟರ್‌ನ ವಾಟರ್ ಕ್ಯಾನ್‌ಗೆ ನೌಕರರೊಬ್ಬರು ಮದ್ಯವನ್ನು ಬೆರೆಸುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಅಲ್ಲದೇ ಒಬ್ಬರು ಅಲ್ಲಿಯೇ ಅದರ ರುಚಿ ಪರೀಕ್ಷಿಸಿರುವ ದೃಶ್ಯ, ಕಂಡು ಬಂದಿದೆ. ಇದನ್ನು ಅಲ್ಲಿಯೇ ಇದ್ದ ನೌಕರರೊಬ್ಬರು ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು.‌

ಇದನ್ನೂ ಓದಿ: ಚಿತ್ರದುರ್ಗ | ಸ್ವಚ್ಛತೆ ಕೊರತೆ ಅನೈರ್ಮಲ್ಯ; ಕ್ರಮ ಕೈಗೊಳ್ಳದ ಗ್ರಾ. ಪಂ. ಅಧಿಕಾರಿಗಳ ವರ್ಗಾವಣೆಗೆ ಆಗ್ರಹ

ಭವಿಷ್ಯದ ಮಕ್ಕಳನ್ನು ರೂಪಿಸುವ ಹೊಣೆಗಾರಿಕೆ ಇರುವ ಶಿಕ್ಷಣ ಇಲಾಖೆ ಸಿಬ್ಬಂದಿ ಸಮಾಜಕ್ಕೆ ಮಾದರಿಯಾಗಬೇಕು. ಆದರೆ ನೌಕರರು ಸರ್ಕಾರಿ ಕಚೇರಿಯಲ್ಲಿ ಮದ್ಯ ಉಪಯೋಗಿಸಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಮತ್ತು ಚರ್ಚೆಗೆ ಗ್ರಾಸವಾಗಿದೆ. ಈ ದೃಶ್ಯ ವೈರಲ್ ಆಗುತ್ತಿದ್ದಂತೆ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳ ಗಮನಕ್ಕೆ ಬಂದಿತ್ತು. ತಕ್ಷಣ ಕ್ರಮ ಕೈಗೊಂಡಿರುವ ಇಲಾಖೆ, ಐವರು ನೌಕರರನ್ನು ಅಮಾನತುಗೊಳಿಸಿದೆ.

ಇಲಾಖೆ ಉಪನಿರ್ದೇಶಕ ಮಂಜುನಾಥ್ ಅವರು ಶಿಸ್ತುಕ್ರಮದಡಿಯಲ್ಲಿ ರವಿಕುಮಾರ್, ಸುನಿಲ್, ಗಣೇಶ್, ಸ್ವಾಮಿ ಹಾಗೂ ತಿಪ್ಪೇಸ್ವಾಮಿ ಎಂಬವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...