ಕೋಟೆನಾಡು ಚಿತ್ರದುರ್ಗದಲ್ಲಿ ಭಾನುವಾರ ನಡೆದ ಗಣೇಶ ವಿಸರ್ಜನಾ ಶೋಭಾಯಾತ್ರೆ ಮೆರವಣಿಗೆಯಲ್ಲಿ ಮಹಾತ್ಮಾ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಭಾವಚಿತ್ರ ಪ್ರದರ್ಶನ ಮಾಡಲಾಗಿದ್ದು, ರಾಜ್ಯಾದ್ಯಂತ ವಿರೋಧ-ಆಕ್ರೋಶ ವ್ಯಕ್ತವಾಗಿದೆ.
ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆ ಮತ್ತು ಶೋಭಾಯಾತ್ರೆ ನಡೆದಿದೆ. ಮೆರವಣಿಗೆಯಲ್ಲಿ ಕೆಲವರು ಸಾವರ್ಕರ್ ಮತ್ತು ನಾಥೂರಾಮ್ ಗೋಡ್ಸೆ ಚಿತ್ರ ಪ್ರದರ್ಶಿಸಿದ್ದಾರೆ. ಕೆಲವರು ಕೋಮು ಘರ್ಷಣೆಯಲ್ಲಿ ಹತ್ಯೆಯಾದ ಶರತ್ ಮಡಿವಾಳ್, ಶಿವಮೊಗ್ಗದ ಮೃತ ಹರ್ಷನ ಭಾವಚಿತ್ರ ಪ್ರದರ್ಶಿಸಿದ್ದಾರೆ. ನಾಥೂರಾಮ್ ಗೋಡ್ಸೆ ಭಾವಚಿತ್ರ ತೋರಿದ್ದರ ವಿರುದ್ಧ ಸಾಮಾಜಿಕ ಕಾರ್ಯಕರ್ತರು, ಚಿಂತಕರು ಕಿಡಿಕಾರಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಬಹುಜನರ ಅಸ್ಮಿತೆಯ ಸಂಭ್ರಮವೇ ಮಹಿಷಾ ಬೌದ್ದ ದಸರಾ: ಡಾ. ಕೃಷ್ಣಮೂರ್ತಿ ಚಮರಂ
ಶೋಭಾಯಾತ್ರೆಯಲ್ಲಿ ಕೇಂದ್ರ ಸಚಿವ ನಾರಾಯಣಸ್ವಾಮಿ, ಶಾಸಕ ಕೆ.ಸಿ.ವೀರೇಂದ್ರ ಸೇರಿದಂತೆ ಸಾವಿರಾರು ಹಿಂದೂ ಕಾರ್ಯಕರ್ತರು ಹಾಗೂ ಹಲವು ಮಠಾಧೀಶರು ಇದ್ದರು.