ಪ್ರಸ್ತುತ ದಿನಗಳಲ್ಲಿ ಶಿಕ್ಷಕ ವೃತ್ತಿ ಸವಾಲಿನಿಂದ ಕೂಡಿದ್ದು, ಹಲವಾರು ಕಾರ್ಯಭಾರವನ್ನು ಶಿಕ್ಷಕರು ನಿರ್ವಹಿಸಬೇಕಾಗಿದೆ. ಈ ಹಿನ್ನಲೆಯಲ್ಲಿ ಪ್ರಸ್ತುತ ದಿನಮಾನಗಳಲ್ಲಿ ಶಿಕ್ಷಕರು ಹಲವು ಕಾರ್ಯ ನಿರ್ವಹಿಸುತ್ತಿರುವುದರಿಂದ ಪ್ರತಿಯೊಬ್ಬ ಶಿಕ್ಷಕರೂ ಆರೋಗ್ಯದ ಕಡೆ ಗಮನಹರಿಸಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಜತೆಗೆ ಮಾನಸಿಕ ಒತ್ತಡ ಕಡಿಮೆ ಮಾಡಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ಸಲಹೆ ನೀಡಿದರು.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೊಸಹಳ್ಳಿಯಲ್ಲಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ, ಪ್ರಾಥಮಿಕ ಶಿಕ್ಷಕರ ಸಂಘ ಮತ್ತು ಸರ್ಕಾರಿ ನೌಕರರ ಸಂಘಗಳ ಸಹಯೋಗದೊಂದಿಗೆ ಆಯೋಜಿಸಿದ್ದ ಶಿಕ್ಷಕರಿಗೆ ‘ಉಚಿತ ಆರೋಗ್ಯ ತಪಾಸಣಾ ಶಿಬಿರ’ ಹಾಗೂ ʼಗುರುವಂದನೆʼ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕ ಮಾರುತಿ ಭಂಡಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತಳಕು ಹೋಬಳಿಯ ಎಂಟು ಕ್ಲಸ್ಟರ್‌ಗಳಾದ ಗೌರಸಮುದ್ರ, ದೊಡ್ಡ ಉಳ್ಳಾರ್ತಿ, ಘಟಪರ್ತಿ, ದೇವರೆಡ್ಡಿಹಳ್ಳಿ, ತಳಕು, ಬಂಜಗೆರೆ, ರೇಣುಕಾಪುರ ವಿಭಾಗದ 250ಕ್ಕೂ ಹೆಚ್ಚು ಶಿಕ್ಷಕರು ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಆರೋಗ್ಯ ತಪಾಸಣಾ ಪ್ರಯೋಜನ ಪಡೆದುಕೊಂಡರು.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಇಂಗ್ಲಿಷ್ ಜ್ಞಾನದಿಂದ ಗ್ರಾಮೀಣ ವಿದ್ಯಾರ್ಥಿಗಳು ವಂಚಿತರಾಗಬಾರದು: ಪ್ರೊ. ಬಿ ಈಶ್ವರಪ್ಪ
ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹ ಸಂಯೋಜಕ ಜಿ ಟಿ ಮಂಜುನಾಥ ಸ್ವಾಮಿ, ಇಲಾಖೆ ಅಧೀಕ್ಷಕಿಯರಾದ ವಾಣಿ, ಇಂಪನಾ, ರೇಖಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಸಣ್ಣ ಸೂರವ್ವ, ಶಿಕ್ಷಕರಾದ ಹನುಮಂತರಾಯ, ಶ್ರೀಕಾಂತ್, ಮಹಾಲಿಂಗಪ್ಪ, ತಿಪ್ಪೇಸ್ವಾಮಿ, ಈರಣ್ಣ, ಸಿಆರ್ಪಿ ತಿಪ್ಪೇಸ್ವಾಮಿ, ಮಾರಣ್ಣ, ವಿಷ್ಣುವರ್ಧನ್, ಶಿವಣ್ಣ, ರಾಜಣ್ಣ, ಸುರೇಶ್, ತಿಪ್ಪೇಸ್ವಾಮಿ, ಚಿಟ್ಟಿ ಬಾಬು ಸೇರಿದಂತೆ ಶಿಕ್ಷಕರು, ಹಳೆಯ ವಿದ್ಯಾರ್ಥಿಗಳು, ಸಾರ್ವಜನಿಕರು ಇದ್ದರು.