ಚಿತ್ರದುರ್ಗ | ಶಿಕ್ಷಕರಿಗೆ ʼಗುರುವಂದನೆʼ, ‘ಉಚಿತ ಆರೋಗ್ಯ ತಪಾಸಣಾ ಶಿಬಿರ’

Date:

ಪ್ರಸ್ತುತ ದಿನಗಳಲ್ಲಿ ಶಿಕ್ಷಕ ವೃತ್ತಿ ಸವಾಲಿನಿಂದ ಕೂಡಿದ್ದು, ಹಲವಾರು ಕಾರ್ಯಭಾರವನ್ನು ಶಿಕ್ಷಕರು ನಿರ್ವಹಿಸಬೇಕಾಗಿದೆ. ಈ ಹಿನ್ನಲೆಯಲ್ಲಿ ಪ್ರಸ್ತುತ ದಿನಮಾನಗಳಲ್ಲಿ ಶಿಕ್ಷಕರು ಹಲವು ಕಾರ್ಯ ನಿರ್ವಹಿಸುತ್ತಿರುವುದರಿಂದ ಪ್ರತಿಯೊಬ್ಬ ಶಿಕ್ಷಕರೂ ಆರೋಗ್ಯದ ಕಡೆ ಗಮನಹರಿಸಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಜತೆಗೆ ಮಾನಸಿಕ ಒತ್ತಡ ಕಡಿಮೆ ಮಾಡಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಶಿಕ್ಷಣಾಧಿಕಾರಿ ಕೆ ಎಸ್‌ ಸುರೇಶ್‌ ಸಲಹೆ ನೀಡಿದರು.

- Advertisement -

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೊಸಹಳ್ಳಿಯಲ್ಲಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ, ಪ್ರಾಥಮಿಕ ಶಿಕ್ಷಕರ ಸಂಘ ಮತ್ತು ಸರ್ಕಾರಿ ನೌಕರರ ಸಂಘಗಳ ಸಹಯೋಗದೊಂದಿಗೆ ಆಯೋಜಿಸಿದ್ದ ಶಿಕ್ಷಕರಿಗೆ ‘ಉಚಿತ ಆರೋಗ್ಯ ತಪಾಸಣಾ ಶಿಬಿರ’ ಹಾಗೂ ʼಗುರುವಂದನೆʼ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕ ಮಾರುತಿ ಭಂಡಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತಳಕು ಹೋಬಳಿಯ ಎಂಟು ಕ್ಲಸ್ಟರ್‌ಗಳಾದ ಗೌರಸಮುದ್ರ, ದೊಡ್ಡ ಉಳ್ಳಾರ್ತಿ, ಘಟಪರ್ತಿ, ದೇವರೆಡ್ಡಿಹಳ್ಳಿ, ತಳಕು, ಬಂಜಗೆರೆ, ರೇಣುಕಾಪುರ ವಿಭಾಗದ 250ಕ್ಕೂ ಹೆಚ್ಚು ಶಿಕ್ಷಕರು ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಆರೋಗ್ಯ ತಪಾಸಣಾ ಪ್ರಯೋಜನ ಪಡೆದುಕೊಂಡರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಇಂಗ್ಲಿಷ್‌ ಜ್ಞಾನದಿಂದ ಗ್ರಾಮೀಣ ವಿದ್ಯಾರ್ಥಿಗಳು ವಂಚಿತರಾಗಬಾರದು: ಪ್ರೊ. ಬಿ ಈಶ್ವರಪ್ಪ

ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹ ಸಂಯೋಜಕ ಜಿ ಟಿ ಮಂಜುನಾಥ ಸ್ವಾಮಿ, ಇಲಾಖೆ ಅಧೀಕ್ಷಕಿಯರಾದ ವಾಣಿ, ಇಂಪನಾ, ರೇಖಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಸಣ್ಣ ಸೂರವ್ವ, ಶಿಕ್ಷಕರಾದ ಹನುಮಂತರಾಯ, ಶ್ರೀಕಾಂತ್, ಮಹಾಲಿಂಗಪ್ಪ, ತಿಪ್ಪೇಸ್ವಾಮಿ, ಈರಣ್ಣ, ಸಿಆರ್ಪಿ ತಿಪ್ಪೇಸ್ವಾಮಿ, ಮಾರಣ್ಣ, ವಿಷ್ಣುವರ್ಧನ್, ಶಿವಣ್ಣ, ರಾಜಣ್ಣ, ಸುರೇಶ್, ತಿಪ್ಪೇಸ್ವಾಮಿ, ಚಿಟ್ಟಿ ಬಾಬು ಸೇರಿದಂತೆ ಶಿಕ್ಷಕರು, ಹಳೆಯ ವಿದ್ಯಾರ್ಥಿಗಳು, ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...