ಚಿತ್ರದುರ್ಗ | ದಲಿತ ಮಹಿಳೆಯ ಮೇಲೆ ಅಮಾನುಷ ಹಲ್ಲೆ: ತಪ್ಪಿತಸ್ತನನ್ನು ಬಂಧಿಸದ ಇಲಾಖೆ, ಸಂತ್ರಸ್ತರ ವಿರುದ್ಧ ಪ್ರತಿದೂರು

Date:

ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಮಹಿಳೆಯ ಮೇಲೆ ಹಲ್ಲೆ ನಡೆಸಿರುವದರ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲ್ಲೆಗೊಳಗಾದ ಮಹಿಳೆ ದಲಿತ ಸಮುದಾಯಕ್ಕೆ ಸೇರಿದವರು ಎನ್ನಲಾಗಿದ್ದು, ಹಲ್ಲೆ ನಡೆಸಿದಾತ ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯೊಂದರ ವೈದ್ಯರ ವಾಹನ ಚಾಲಕ, ಮೇಲ್ಜಾತಿಗೆ ಸೇರಿದವನು ಎಂದು ತಿಳಿದುಬಂದಿದೆ. ಕ್ರಮ ಕೈಗೊಳ್ಳದ ಪೊಲೀಸರ ಕಾರ್ಯವೈಖರಿ ಪ್ರಶ್ನಿಸಿ, ಪ್ರತಿಭಟಿಸಿದ ಮಹಿಳೆ, ಕುಟುಂಬಸ್ಥರು ಹಾಗೂ ದಲಿತ ಮುಖಂಡರ ಮೇಲೆಯೇ ಪ್ರತಿದೂರು ದಾಖಲಾಗಿದೆ.‌

- Advertisement -

ಈ ಘಟನೆ ಚಿತ್ರದುರ್ಗ ನಗರದಲ್ಲಿ ಮೂರು ದಿನಗಳ ಹಿಂದೆ ನಡೆದಿದೆ ಎಂದು ಹೇಳಲಾಗುತ್ತಿದೆ. ಚಿತ್ರದುರ್ಗದ ಪಿವಿಎಸ್ ಆಸ್ಪತ್ರೆಯ ವೈದ್ಯರ ಚಾಲಕ ಮಂಜುನಾಥ್ ಎನ್ನಲಾಗಿದೆ. ದಲಿತ ಸಮುದಾಯಕ್ಕೆ ಸೇರಿದ ದೇವದಾಸಿ ಮಹಿಳೆಯ ಮೇಲೆ ಹಲ್ಲೆ ಮಾಡಿರುವ ವಿಡಿಯೋ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಹಲ್ಲೆಗೊಳಗಾದ ಮಹಿಳೆ ಚಿತ್ರದುರ್ಗ ಹತ್ತಿರದ ಸಿದ್ದಾಪುರ ಗ್ರಾಮದ ಅಂಜಿನಮ್ಮ ಎನ್ನಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಘಟನೆ ನಡೆದು ಎರಡು ದಿನ ಕಳೆದಿದ್ದರೂ ಈವರೆಗೆ ಹಲ್ಲೆ ಮಾಡಿರುವ ವ್ಯಕ್ತಿಯ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು, ದಲಿತ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರು ಆಕ್ರೋಶ ವ್ಯಕ್ತಪಡಿಸಿ “ಹೆಣ್ಣು ಮಕ್ಕಳು, ಮಹಿಳೆಯರ ಮೇಲೆ ದೌರ್ಜನ್ಯ ಮಾಡುವ ಹಕ್ಕು ಯಾರಿಗೂ ಇಲ್ಲ. ಒಬ್ಬ ಮಹಿಳೆ ಎನ್ನುವುದನ್ನೂ ನೋಡದೆ. ವಿನಾಕಾರಣ ಹಲ್ಲೆ ಮಾಡುವುದು ಕಾನೂನು ಅಪರಾಧ. ಆ ವ್ಯಕ್ತಿಗೆ ಕಾನೂನು ಪ್ರಕಾರ ಆದಷ್ಟು ಬೇಗ ಶಿಕ್ಷೆಯಾಗಲಿ. ಪೊಲೀಸರು ಶೀಘ್ರ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.‌

ಈ ಬಗ್ಗೆ ಚಿತ್ರದುರ್ಗದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಪೊಲೀಸ್ ವಿಭಾಗದಲ್ಲಿ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.‌ ಆದರೆ ಆರೋಪಿಯನ್ನು ಈವರೆಗೂ ಬಂಧಿಸಿಲ್ಲವೆಂದು ಆಕ್ರೋಶ ವ್ಯಕ್ತವಾಗಿದೆ.‌

ಈ ಕುರಿತು ದಲಿತ ಮುಖಂಡ ಕರುನಾಡ ಸಮರಸೇನೆ ಅಧ್ಯಕ್ಷ ಶಿವಕುಮಾರ್ ಮಾತನಾಡಿ, “ದಲಿತ ಸಮುದಾಯದ ಹೆಣ್ಣು ಮಗಳ ಮೇಲೆ ಹಲ್ಲೆ ಮಾಡಿದ ವ್ಯಕ್ತಿಯ ಮೇಲೆ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ವಿಭಾಗದ ಪೊಲೀಸರು ಸುವೋ ಮೋಟೋ ಕೇಸ್ ದಾಖಲು ಮಾಡಿಕೊಳ್ಳಬೇಕಿತ್ತು. ಆದರೆ ದೂರು ನೀಡುವ ತನಕ ಕ್ರಮ ಕೈಗೊಂಡಿಲ್ಲ. ಆರೋಪಿಯನ್ನು ನೆಪ ಮಾತ್ರಕ್ಕೆ ಕರೆಸಿ ವಿಚಾರಿಸಿ ವಾಪಸ್ ಕಳುಹಿಸಿದ್ದಾರೆ. ಆರೋಪಿಯನ್ನು ಬಂಧಿಸಿಲ್ಲ.‌ ಈ ಕುರಿತು ಆರೋಪಿಯನ್ನು ಬಂಧಿಸಲು ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟಿಸಿದ ಕುಟುಂಬಸ್ಥರು ಮತ್ತು ನಮ್ಮ ಮೇಲೆ ಪ್ರತಿದೂರು ದಾಖಲಿಸಿದ್ದಾರೆ. ಹೀಗಿದ್ದಾಗ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಪೊಲೀಸ್ ವಿಭಾಗ ಏಕೆ ಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಕಾಲಮಿತಿಯಲ್ಲಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲು ಗೃಹ ಸಚಿವರ ಸೂಚನೆ

“ಅಲ್ಲದೆ ಹಲ್ಲೆಗೊಳಗಾದ ಸಂತ್ರಸ್ತ ಮಹಿಳೆಯನ್ನು ವಿಚಾರಣೆ ಮಾಡುವಾಗ ಮಹಿಳಾ ಸಿಬ್ಬಂದಿಯೊಂದಿಗೆ ವಿಚಾರಣೆ ಮಾಡಿಲ್ಲ. ಎಸ್‌ಸಿ/ಎಸ್‌ಟಿ ವಿಭಾಗದ ಪುರುಷ ಉಪನಿರೀಕ್ಷಕರೇ ಈ ವಿಚಾರಣೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಅಲ್ಲದೆ ಕುಟುಂಬಸ್ಥರು ಮತ್ತು ಮಹಿಳೆಯ ಮೇಲೆ ಪ್ರತಿ ದೂರು ದಾಖಲಿಸಿದ್ದಾರೆ. ಹಲ್ಲೆಗೊಳಗಾದ ನೊಂದ ದಲಿತರ ಮೇಲೆಯೇ ಪ್ರತಿದೂರು ದಾಖಲಿಸಿದರೆ ಮುಂದಿನ ದಿನಗಳಲ್ಲಿ ಯಾರು ಪೊಲೀಸ್ ಇಲಾಖೆಯ ಮೇಲೆ ವಿಶ್ವಾಸವಿಟ್ಟು ದೂರು ದಾಖಲಿಸಲು ಮುಂದೆ ಬರುತ್ತಾರೆ. ಈ ಕುರಿತು ಆರೋಪಿಯನ್ನು ಬಂಧಿಸಿ, ಕರ್ತವ್ಯಲೋಪ ಎಸಗಿದ ಪೊಲೀಸ್ ಅಧಿಕಾರಿಗಳ‌ ಮೇಲೆ ಚಿತ್ರದುರ್ಗ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ನಗರದ ಮುಖ್ಯರಸ್ತೆಯ ಡಾ. ಬಿಆರ್ ಅಂಬೇಡ್ಕರ್ ಪ್ರತಿಮೆ ಮುಂದೆ ದಲಿತ ಸಂಘಟನೆಗಳೊಂದಿಗೆ ಪ್ರತಿಭಟನೆ ಮಾಡಲಾಗುತ್ತದೆ” ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...