ಚಿತ್ರದುರ್ಗ | ತೀವ್ರವಾಗುತ್ತಿರುವ ಬಿಸಿಲು; ತರಕಾರಿ ಬೆಲೆ ಗ್ರಾಹಕರ ಜೇಬಿಗೆ ಕತ್ತರಿ

Date:

Advertisements

ದಿನದಿಂದ ದಿನಕ್ಕೆ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದರೆ ಇತ್ತ ತಾಪಮಾನದ ಜತೆಗೆ ಸೊಪ್ಪು, ತರಕಾರಿ ಬೆಲೆ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿವೆ.

ಮಳೆ ಕೊರತೆಯಿಂದಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಸೊಪ್ಪು, ತರಕಾರಿ ಬೆಳೆಯುವ ಪ್ರಮಾಣವೂ ಕಡಿಮೆಯಾಗುತ್ತಿದೆ. ಬೆಳೆದವರಿಗೆ ಸರಿಯಾದ ಇಳುವರಿ ಸಿಗದ ಕಾರಣ, ಮಾರುಕಟ್ಟೆಗೆ ಪೂರೈಕೆಯಾಗುತ್ತಿರುವ ಪ್ರಮಾಣದಲ್ಲೂ ವ್ಯತ್ಯಯ ಉಂಟಾಗಿದೆ. ಪರಿಣಾಮವಾಗಿ ತರಕಾರಿ ಮತ್ತು ಸೊಪ್ಪಿನ ಬೆಲೆ ಹೆಚ್ಚಾಗಿದೆ ಎನ್ನುತ್ತಿದ್ದಾರೆ ವ್ಯಾಪಾರಿಗಳು.

ಕಳೆದ ಕೆಲ ದಿನಗಳ ಹಿಂದೆ ಕೆಲವು ಭಾಗಗಳಲ್ಲಿ ಮಳೆಯಾಗಿದ್ದರೂ ಬಿಸಿಲಿನ ತೀವ್ರತೆ ಕಡಿಮೆಯಾಗಿಲ್ಲ. ಕೊಳವೆ ಬಾವಿಗಳು ಸರಣಿಯೋಪಾದಿಯಲ್ಲಿ ಸ್ಥಗಿತವಾಗುತ್ತಿವೆ. ಇದರಿಂದ ನೀರಿನ ಕೊರತೆ ಮುಂದುವರಿದಿದೆ. ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ತರಕಾರಿ ಪೂರೈಕೆಯಾಗುತ್ತಿಲ್ಲ. ಬೇಡಿಕೆ ಹೆಚ್ಚಾದ ಕಾರಣ ಸಹಜವಾಗಿ ಕೆಲ ತರಕಾರಿಗಳ ಬೆಲೆಯಲ್ಲಿ ಏರಿಕೆಯಾಗಿದೆ.

Advertisements

ಚಿತ್ರದುರ್ಗ ನಗರದ ಸಂತೆಹೊಂಡ, ಖಾಸಗಿ ಬಸ್‌ ನಿಲ್ದಾಣ ಸಮೀಪದ ಸಂತೆ ಮಾರುಕಟ್ಟೆ, ತ್ಯಾಗರಾಜ ಬೀದಿಯ ಸಣ್ಣ ಮಾರುಕಟ್ಟೆಯಲ್ಲಿ ಹೆಚ್ಚಿನ ತರಕಾರಿ, ಸೊಪ್ಪು ಮಾರಾಟ ಮಾಡಲಾಗುತ್ತದೆ. ಇದರ ಜತೆ ಜೋಗಿಮಟ್ಟಿ ರಸ್ತೆ, ಚಳ್ಳಕೆರೆ ಟೋಲ್‌ ಗೇಟ್‌, ತಿಪ್ಪಜ್ಜಿ ಸರ್ಕಲ್‌, ತುರವನೂರು ರಸ್ತೆಯ ಬ್ಯಾಂಕ್‌ ಕಾಲೊನಿ, ಮೇದೆಹಳ್ಳಿ ರಸ್ತೆ, ದಾರುಕ ಬಡಾವಣೆ, ಐಯುಡಿಪಿ ಲೇಔಟ್‌, ಹೊಳಲ್ಕೆರೆ ರಸ್ತೆ, ಭೀಮಸಮುದ್ರ ರಸ್ತೆ, ಕೆಎಸ್‌ಆರ್‌ಟಿಸಿ ಬಡಾವಣೆ, ಚಿಕ್ಕಪೇಟೆ, ಬುರುಜನಹಟ್ಟಿ, ಜೆಸಿಆರ್‌ ವೃತ್ತ, ಉಮಾಪತಿ ಕಲ್ಯಾಣ ಮಂಟಪ ಸಮೀಪ, ಹಳೆ ವೈಶಾಲಿ ಮುಂಭಾಗ ಹೀಗೆ ಪ್ರತಿ ಬಡಾವಣೆಗಳಲ್ಲಿ ಹೆಜ್ಜೆಗೊಬ್ಬರು ತರಕಾರಿ ಮಾರಾಟಗಾರರಿದ್ದಾರೆ.

ಮಧ್ಯರಾತ್ರಿಯಿಂದಲೇ ಜಿಲ್ಲೆಯ ಗ್ರಾಮೀಣ ಪ್ರದೇಶ, ಬೆಂಗಳೂರು, ತುಮಕೂರು, ದಾವಣಗೆರೆ, ಬಳ್ಳಾರಿ ಸೇರಿ ವಿವಿಧ ಭಾಗಗಳಿಂದ ತರಕಾರಿ ಚಿತ್ರದುರ್ಗ ಮಾರುಕಟ್ಟೆಗೆ ಬರುತ್ತಿತ್ತು. ಆದರೆ, ಕೆಲ ತಿಂಗಳಿನಿಂದ ಕೋಲಾರ, ಬೆಂಗಳೂರು, ಆಂಧ್ರಪ್ರದೇಶ, ಬೆಳಗಾವಿಯಿಂದ ಮಾತ್ರ ಬರುತ್ತಿದೆ. ಸ್ಥಳೀಯವಾಗಿ ಬದನೆಕಾಯಿ ಬಿಟ್ಟರೆ ಬೇರೆ ಯಾವುದೇ ತರಕಾರಿ ಬರುತ್ತಿಲ್ಲ ಎನ್ನುತ್ತಾರೆ ತರಕಾರಿ ವ್ಯಾಪಾರಿಗಳು.

ಚಿಕ್ಕಬಳ್ಳಾಪುರ, ಕೋಲಾರ, ಕುಣಿಗಲ್, ತುಮಕೂರು ಮತ್ತು ತಮಿಳುನಾಡಿನಿಂದ ಮಾರುಕಟ್ಟೆಗೆ ಬರುತ್ತಿದ್ದ ಬೀನ್ಸ್‌ ಪ್ರಮಾಣ ಕಡಿಮೆಯಾಗಿದೆ. ಇದರಿಂದ ಬೆಲೆಯೂ ಹೆಚ್ಚಾಗಿದೆ. ಗ್ರಾಹಕರಿಗೆ ಮತ್ತು ಮದುವೆ ಮತ್ತಿತರ ಸಮಾರಂಭ ಆಯೋಜಿಸುವವರಿಗೆ ಸ್ವಲ್ಪ ತೊಂದರೆಯಾಗಿದೆ. ಮತ್ತೊಂದೆಡೆ ಸಮರ್ಪಕ ಇಳುವರಿ ಕಾರಣ ರೈತರಿಗೂ ಲಾಭವಾಗುತ್ತಿಲ್ಲ ಎನ್ನುತ್ತಾರೆ ವ್ಯಾಪಾರಿಗಳು.‌

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X