ಚಿತ್ರದುರ್ಗ | ಪ್ರಸ್ತುತ ದಿನಗಳಲ್ಲಿ ಮಕ್ಕಳ ಆರೋಗ್ಯ ಉತ್ತಮವಾಗಿಸುವುದು ಬಹುಮುಖ್ಯ: ಕಸವನಹಳ್ಳಿ ರಮೇಶ್

Date:

ಪ್ರಸ್ತುತ ದಿನಗಳಲ್ಲಿ ಮಕ್ಕಳ ಆರೋಗ್ಯ ಉತ್ತಮವಾಗಿಸುವುದು ಬಹುಮುಖ್ಯವಾಗಿದೆ ಎಂದು ರೈನ್ ಟ್ರಸ್ಟ್ ಅಧ್ಯಕ್ಷ ಕಸವನಹಳ್ಳಿ ರಮೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.

- Advertisement -

ಚಿತ್ರದುರ್ಗದ ತಾಲೂಕಿನ ಮದಕರಿಪುರದ ಜಿಂದಾಲ್ ಜುಬಿಲಿ ಭಾರತೀಯ ಪ್ರೌಢಶಾಲೆಯಲ್ಲಿ ಪ್ಲಾಸ್ಟಿಕ್ ಮುಕ್ತ ಕರ್ನಾಟಕ ಅಂದೋಲನದ ಅಂಗವಾಗಿ ರೈನ್ ಟ್ರಸ್ಟ್ ವತಿಯಿಂದ ಮಕ್ಕಳಿಗಾಗಿ ಆಯೋಜಿಸಿದ್ದ ʼಮಕ್ಕಳು ಹಕ್ಕುಗಳು ಮತ್ತು ಪೋಕ್ಸೊ ಕಾಯ್ದೆʼಯ ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಪ್ಲಾಸ್ಟಿಕ್ ಕಣಗಳು ನೀರಿನ ಮೂಲಕವಲ್ಲದೇ ಸಕ್ಕರೆ, ಉಪ್ಪು, ಹಾಲು ಸೇರಿದಂತೆ ಆಹಾರ ಪದಾರ್ಥಗಳ ಮೂಲಕವೂ ಮನುಷ್ಯನ ಶ್ವಾಸಕೋಶ, ಜಠರ, ಮೆದುಳಿನಲ್ಲಿ ಸೇರುತ್ತಿವೆ. ಇದರಿಂದ ಕ್ಯಾನ್ಸರ್ ಬರುವ ಸಾಧ್ಯತೆಗಳು ಹೆಚ್ಚಿದ್ದು, ಯಾವುದೇ ಕಾರಣಕ್ಕೂ ಹೊರಗಿನ ಹಾಗೂ ಬೇಕರಿ ತಿಂಡಿಗಳನ್ನು ಬಳಸಬಾರದು. ಇವುಗಳಲ್ಲಿ ಹಾನಿಕಾರಕ ಕೃತಕ ಬಣ್ಣ, ಕೃತಕ ವಾಸನೆ ಮತ್ತು ದೀರ್ಘಕಾಲ ಕೆಡದಂತೆ ಅಪಾಯಕಾರಿ ರಾಸಾಯನಿಕಗಳನ್ನು ಬಳಸಿರುತ್ತಾರೆ. ಇಂತಹ ಅಪಾಯಕಾರಿ ಆಹಾರಗಳಿಂದ ದೂರವಿರುವುದು ಉತ್ತಮ. ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿರಲಿ” ಎಂದು ಮಕ್ಕಳಿಗೆ ಸಲಹೆ ನೀಡಿದರು.

ಅಪರಾಧ ಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಂಶುಪಾಲ ಡಾ ನಟರಾಜ್ ಅವರು ಮಕ್ಕಳ ಹಕ್ಕುಗಳು ಮತ್ತು ಪೋಕ್ಸೊ ಕಾಯ್ದೆ ಬಗ್ಗೆ ವಿಶೇಷ ಉಪನ್ಯಾಸ ನೀಡಿ, “ಮಕ್ಕಳು ಮನೆಯಲ್ಲಾಗಲಿ, ಶಾಲೆಯಲ್ಲಾಗಲಿ, ಸಾರ್ವಜನಿಕ ಪ್ರದೇಶಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಮಾಡುವುದಾಗಲಿ, ತಮ್ಮ ಅನುಮತಿಯಿಲ್ಲದೆ ಫೋಟೊ ತೆಗೆಯುವುದಾಗಲಿ ಮಾಡಕೂಡದು. ಹಾಗೊಮ್ಮೆ ಮಾಡಿದ್ದಲ್ಲಿ ಅಲ್ಲಿಯೇ ಪ್ರತಿಭಟಿಸಬೇಕು. ಕಾನೂನಿನ ರಕ್ಷಣೆ ಪಡೆಯಬೇಕು” ಎಂದು ತಿಳಿಸಿದರು.

ಎಂ ಮಂಜುನಾಥ್ ಕಳ್ಳಿಹಟ್ಟಿ ಪ್ರಾಸ್ತಾವಿಕವಾಗಿ ಮಾತಾನಾಡಿ, “ಮಕ್ಕಳಿಗೆ ಅಗತ್ಯ ಮಾಹಿತಿ ಅವಶ್ಯವಿರುತ್ತದೆ. ಇಂತಹ ಜಾಗೃತಿ ಕಾರ್ಯಕ್ರಮಗಳು ಶಾಲೆಗಳಲ್ಲಿ ನಡೆಯಬೇಕು. ಮಕ್ಕಳು ರೋಗದಿಂದ ಬಳಲಾಬಾರದು, ಇಂದಿನ ಮಕ್ಕಳಿಗೆ ಆರೋಗ್ಯ, ಶಿಕ್ಷಣ ಮತ್ತು ರಕ್ಷಣೆ ಬಹುಮುಖ್ಯ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಇಂದಿರಾಗಾಂಧಿ ಭಾರತಕ್ಕಷ್ಟೇ ಅಲ್ಲ ಇಡೀ ವಿಶ್ವಕಂಡ ಧೀಮಂತ ನಾಯಕಿ: ಮಲ್ಲಿಕಾರ್ಜುನ ಎಸ್ ಲೋಣಿ

ಕಾರ್ಯಕ್ರಮದಲ್ಲಿ ಪರಿಸರವಾದಿಗಳಾದ ಡಾ ಹೆಚ್‌ಎಸ್‌ಕೆ ಸ್ವಾಮಿ ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು, ಸ್ಥಳೀಯರಿಗೆ ಉದ್ಯೋಗ ದೊರಕಿಸುವ ಮುಖಾಂತರ ಹಳ್ಳಿಯ ಹಣ ನಗರ ಸೇರದಂತೆ ತಡೆಗಟ್ಟಬೇಕಾದರೆ ಬಟ್ಟೆ ನೇಯುವುದು ಸೇರಿದಂತೆ ಗುಡಿ ಕೈಗಾರಿಕೆಗಳನ್ನು ಪ್ರೋತ್ಸಾಹಿಸುವ ಮೂಲಕ ಸ್ವಾವಂಲಂಬಿಗಳಾಗಬೇಕು ಎಂಬುದನ್ನು ಪ್ರಾತ್ಯಕ್ಷಿಕೆ ಮೂಲಕ ತೋರಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಹೆಚ್ ಎಂ ಜಯಪ್ರಕಾಶ್, ಟಿ ದ್ಯಾಮಣ್ಣ, ಲೋಹಿತ್ ಎಂ ಜೆ, ಸಹ ಶಿಕ್ಷಕ ವೃಂದದವರು ಸೇರಿದಂತೆ ನೂರಾರು ಮಂದಿ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...