ಚಿತ್ರದುರ್ಗ | ಗೊಲ್ಲಹಳ್ಳಿ ಗ್ರಾಮದಲ್ಲಿ ಮೂಲಸೌಕರ್ಯ ಕೊರತೆ; ಅಪರ ಜಿಲ್ಲಾಧಿಕಾರಿಗೆ ಮನವಿ

Date:

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ಎಸ್‌ಸಿ ಕಾಲೋನಿಗೆ ಮೂಲಸೌಕರ್ಯ ಕೊರತೆಯಾಗಿದ್ದು, ಇಲ್ಲಿನ ನಿವಾಸಿಗಳ ಬದುಕು ಹೈರಾಣಾಗಿದೆ. ಹಾಗಾಗಿ ಶೀಘ್ರವೇ ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಆದಿಕರ್ನಾಟಕ ಜನಾಂಗದವರು ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

“ಬಾಳಿ ಬದುಕಿದ ಮನೆ ಅಕ್ಕಪಕ್ಕದ ಖಾಲಿ ನಿವೇಶನ ಜಾಗಗಳನ್ನು ರಾಷ್ಟ್ರೀಯ ಹೆದ್ದಾರಿಗೆ ಬಿಟ್ಟುಕೊಟ್ಟು ಈಗ ಬಹುತೇಕ ಮೂಲ ಸೌಕರ್ಯಗಳಿಲ್ಲದ ಜಾಗಕ್ಕೆ ಬಂದು ಅತಂತ್ರರಾಗಿದ್ದೇವೆ. ಇರುವುದನ್ನು ಬಿಟ್ಟುಕೊಟ್ಟು ಇಲ್ಲದಿರುವುದನ್ನು ಹುಡುಕುವಂತಾಗಿದೆ ನಮ್ಮ ಬದುಕು. ಹಾಗಾಗಿ ನಮಗೆ ಚರಂಡಿ, ರಸ್ತೆ, ನೀರು, ವಿದ್ಯುತ್ ಸೇರಿದಂತೆ ಇತರೆ ಮೂಲ ಸೌಕರ್ಯಗಳನ್ನು ಶೀಘ್ರವೇ ಕಲ್ಪಿಸಿ” ಎಂದು ಗ್ರಾಮಸ್ಥರು ಅವಲತ್ತುಕೊಂಡಿದ್ದಾರೆ.

“ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ರಸ್ತೆ ಅಗಲೀಕರಣಕ್ಕಾಗಿ ಮನೆ, ಖಾಲಿ ನಿವೇಶನಗಳನ್ನು ಬಿಟ್ಟುಕೊಟ್ಟು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದೇವೆ. ಬದಲಿಯಾಗಿ ನಿವೇಶನಕ್ಕೆ ಗೋಮಾಳದಲ್ಲಿ ಮೂರು ಎಕರೆ ಜಮೀನು ಮಂಜೂರಾಗಿದ್ದು, ಈವರೆಗೂ ಹಕ್ಕುಪತ್ರಗಳನ್ನು ನೀಡಿಲ್ಲ. ಶಾಶ್ವತ ಹಕ್ಕುಪತ್ರ, ಖಾತೆಯಂತಹ ದಾಖಲಾತಿಗಳು ಇಲ್ಲದೆ ಬೇರೆ ಬೇರೆ ಸವಲತ್ತುಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ವಿದ್ಯುತ್ ಸಂಪರ್ಕವಿಲ್ಲದೆ ಕತ್ತಲೆಯಲ್ಲಿ ಜೀವಿಸುತ್ತಿದ್ದೇವೆ. ರಾತ್ರಿಯಾದರೆ ಮಕ್ಕಳು, ಮುದುಕರು, ಮಹಿಳೆಯರು, ಪುರುಷರು ಬೆಳಕಿಲ್ಲದೆ ಹೊರಬರಲು ಹೆದರುವ ಸ್ಥಿತಿ ಉಂಟಾಗಿದೆ. ತಾತ್ಕಾಲಿಕ ಶೆಡ್‍ಗಳನ್ನು ನಿರ್ಮಿಸಿಕೊಂಡು ವಾಸಮಾಡುವಂತಾಗಿದೆ. ಕೂಡಲೇ ವಿದ್ಯುತ್ ಸೇರಿದಂತೆ ಇತರ ವ್ಯವಸ್ಥೆಯಾಗಬೇಕು” ಎಂದು ಗೊಲ್ಲಹಳ್ಳಿಯ ಎಸ್‌ಸಿ ಕಾಲೋನಿ ನಿವಾಸಿಗಳು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ದೇಶಾದ್ಯಂತ ಮುಸ್ಲಿಂ ಅಲ್ಪಸಂಖ್ಯಾತರ ಮೇಲೆ ದಾಳಿ; ಕ್ರಮಕ್ಕೆ ಆಗ್ರಹ

ಈ ವೇಳೆ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ ಟಿ ಶಿವಕುಮಾರ್, ರಾಜ್ಯ ಸಮಿತಿ ಸದಸ್ಯ ನಿಸಾರ್, ಗೊಲ್ಲಹಳ್ಳಿ ನಿವಾಸಿಗಳಾದ ರಂಗಮ್ಮ, ಮಂಜಮ್ಮ, ಯಶೋಧಮ್ಮ, ಗುರುಸಿದ್ದಮ್ಮ, ನಿರ್ಮಲ, ಜಯಣ್ಣ, ರಂಗಸ್ವಾಮಿ, ಹಿಮಂತರಾಜು, ಹರೀಶ, ತಿಪ್ಪಣ್ಣ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ: ರೈತ ಮುಖಂಡ ಚಾಮರಸ ಮಾಲೀ ಪಾಟೀಲ್

"ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ, ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಹಗರಣಗಳ...

ಚಿಕ್ಕನಾಯಕನಹಳ್ಳಿ | ವೆಲ್ಡಿಂಗ್ ಮಾಲೀಕರ-ಕೆಲಸಗಾರರ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆ

ಚಿಕ್ಕನಾಯಕನಹಳ್ಳಿ ಪಟ್ಟಣದ ಮತಿಘಟ್ಟ ಗೇಟ್ ಬಳಿಯಿರುವ ವೀರಭದ್ರೇಶ್ವರ ಇಂಜಿನಿಯರಿಂಗ್ ವರ್ಕ್ಸ್ ಆವರಣದಲ್ಲಿ...

ಶಿವಮೊಗ್ಗ | ವ್ಯಾಪಕ ಮಳೆ ಹಿನ್ನೆಲೆ: ಜು.16ರಂದು ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ, ತೀರ್ಥಹಳ್ಳಿ ತಾಲೂಕಿನಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ...

ಕಲಬುರಗಿ | ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಸಾವು; ಕುಟುಂಬಸ್ಥರಿಂದ ಪ್ರತಿಭಟನೆ

ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೋರ್ವರು ಮೃತಪಟ್ಟಿದ್ದು, ವೈದ್ಯರು ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾರೆಂದು...