ಚಿತ್ರದುರ್ಗ | ನೆಲದ ಕಾನೂನನ್ನು ಅತ್ಯಂತ ಘನತೆ, ಗೌರವದಿಂದ ಪಾಲಿಸಿ: ನ್ಯಾಯಾಧೀಶೆ ಪ್ರಿಯಾಂಕಾ

Date:

Advertisements

ಕಾನೂನನ್ನು ನಾವು ಗೌರವಿಸಿದರೆ, ಕಾನೂನು ನಮ್ಮನ್ನು ಗೌರವಿಸುತ್ತದೆ. ನೆಲದ ಕಾನೂನನ್ನು ಅತ್ಯಂತ ಘನತೆ ಗೌರವದಿಂದ ನೋಡಿಕೊಳ್ಳಬೇಕು ಹಾಗೂ ಪಾಲಿಸಬೇಕು ಎಂದು ನ್ಯಾಯಾಧೀಶರಾದ ಪ್ರಿಯಾಂಕಾ ಟಿ.ಕೆ. ಕರೆ ನೀಡಿದರು.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ಮದರ್ ಡ್ರೀಮ್ಸ್ ಸಂಸ್ಥೆ (ರಿ) ಇವರ ಸಂಯುಕ್ತಾಶ್ರಯದಲ್ಲಿ ನೇರ್ಲಹಳ್ಳಿ ಗ್ರಾಮ ಪಂಚಾಯತ್ ಆವರಣದಲ್ಲಿ ಆಯೋಜಿಸಿದ್ದ ‘ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾನೂನು ಜಾಗೃತಿ ಶಿಬಿರ ಹಾಗೂ ಹಿರಿಯ ನಾಗರಿಕರ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

“ಭಾರತ ದೇಶವು ಅತ್ಯಂತ ಪವಿತ್ರವಾದ ದೇಶ. ಇಂತಹ ದೇಶದಲ್ಲಿ ಹುಟ್ಟಿದ ನಾವೆಲ್ಲ ಧನ್ಯರು. ಹಾಗಾಗಿ ಈ ನೆಲದ ಕಾನೂನನ್ನು ಅತ್ಯಂತ ಘನತೆ ಗೌರವದಿಂದ ನೋಡಿಕೊಳ್ಳಬೇಕು ಹಾಗೂ ಪಾಲಿಸಬೇಕು. ಕಾನೂನಿನ ಕಾರಣದಿಂದಾಗಿ ಇಂದು ನಾವೆಲ್ಲರೂ ನೆಮ್ಮದಿಯಿಂದ ಜೀವಿಸುತ್ತಿದ್ದೇವೆ” ಎಂದು ಅಭಿಪ್ರಾಯಪಟ್ಟರು.

Advertisements
1002163564

ಕಾನೂನಿನ ಮೇಲೆ ದೇಶದ ಪ್ರಗತಿ ಮತ್ತು ಭವಿಷ್ಯ ನಿಂತಿರುತ್ತದೆ, ಕಾನೂನುಗಳು ಒಂದು ದೇಶದ ಆಧಾರಸ್ತಂಭವಿದ್ದಂತೆ. ಆದ್ದರಿಂದ ಕಾನೂನುಗಳಿಗೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯವಾಗಬೇಕು, ಹಾಗೆ ಹಿರಿಯರನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಳ್ಳಬೇಕು. ಹಿರಿಯರು ನಮಗೆ ಮಾರ್ಗದರ್ಶಕರಾಗಿ, ಪೋಷಕರಾಗಿ ನಮ್ಮೆಲ್ಲರ ಬಾಳಿಗೆ ದಾರಿದೀಪವಿದ್ದಂತೆ. ಅವರನ್ನು ಘನತೆ,ಗೌರವದಿಂದ ಕಾಣಬೇಕು” ಎಂದು ತಿಳಿ ಹೇಳಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸವನ್ನು ನೀಡಿದ ರಾಜಶೇಖರ ನಾಯಕ ಮಾತನಾಡಿ, “ಕಾನೂನು ಸೇವಾ ಪ್ರಾಧಿಕಾರದಿಂದ ಸಾರ್ವಜನಿಕರಿಗೆ ಅನೇಕ ಕಾನೂನಿನ ಸೌಲಭ್ಯಗಳಿವೆ, ಅವುಗಳನ್ನು ಪಡೆದುಕೊಳ್ಳಬೇಕು. ಕಾನೂನು ಸೇವಾ ಸಮಿತಿಯು 12 ಜನ ಸದಸ್ಯರನ್ನು ಒಳಗೊಂಡಿದ್ದು, ಯಾವುದೇ ಪ್ರಕರಣಗಳನ್ನು ಯಾವುದೇ ಶುಲ್ಕವಿಲ್ಲದೆ ಉಚಿತವಾಗಿ ಪರಿಹರಿಸಿಕೊಳ್ಳುವ ವ್ಯವಸ್ಥೆ ಇದೆ, ಇದನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು. ಇದರ ಜೊತೆಗೆ ಕಾನೂನಿನ ಬಗ್ಗೆ ಅಪಾರವಾದ ಕಾಳಜಿ ಮತ್ತು ಜ್ಞಾನ ಎಲ್ಲರೂ ಬೆಳೆಸಿಕೊಳ್ಳಬೇಕು” ಎಂದರು.

ಕಾರ್ಯಕ್ರಮದಲ್ಲಿ ವೃತ್ತ ನಿರೀಕ್ಷಕರಾದ ವಸಂತ್ ವಿ ಅಸೋದೆ ಅವರು ಮಾತನಾಡಿ, “ವಾಹನ ಚಾಲಕರು ನಿಯಮಗಳನ್ನು ಮೀರಬಾರದು. ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕು ಹಾಗೂ ಇತ್ತೀಚಿನ ದಿನಗಳಲ್ಲಿ ವಾಹನದ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿವೆ, ಅದಕ್ಕೆ ನೇರ ಕಾರಣ ನಿಯಮಗಳನ್ನು ಮೀರುವುದು ಮತ್ತು ನಮ್ಮ ಸ್ವಯಂಕೃತ ಅಪರಾಧಗಳಿಂದ. ಹಾಗಾಗಿ ವಾಹನ ಚಲಾಯಿಸುವಾಗ ಅತ್ಯಂತ ಎಚ್ಚರಿಕೆಯಿಂದ, ನಿಯಮಗಳನ್ನು ಮೀರಿದಂತೆ ಚಲಾಯಿಸಬೇಕು. ನಮ್ಮನ್ನು ನಂಬಿ ಕುಟುಂಬಗಳು ಬದುಕುತ್ತಿವೆ. ಆ ಕುಟುಂಬಗಳನ್ನು ರಕ್ಷಣೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯನ್ನು ತಾಲ್ಲೂಕು ಅಧ್ಯಕ್ಷರಾದ ಮರಿಸ್ವಾಮಿಯವರು ಬೋಧಿಸಿದರು.

ಕಾರ್ಯಕ್ರಮದಲ್ಲಿ ಆಯೋಜಕರಾದ ಎಸ್ ಪರಮೇಶ್, ಮದರ್ ಡ್ರೀಮ್ ಸಂಸ್ಥೆ (ರಿ)ಕಾರ್ಯದರ್ಶಿಗಳಾದ ಡಿ ಮಹಾಂತೇಶ್, ಉಪ ತಹಸೀಲ್ದಾರ್ ಮಹಾಂತೇಶ್, ಪಶು ಸಹಾಯಕ ನಿರ್ದೇಶಕರಾದ ರಂಗಪ್ಪ, ಸಿ ಡಿ ಪಿ ಓ ನವೀನ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಸಯ್ಯದ್ ನಾಸಿರ್ ಉದ್ದೀನ್, ವಕೀಲರ ಸಂಘದ ಅಧ್ಯಕ್ಷರಾದ ಆರ್ ಆನಂದ್, ವಕೀಲರ ಸಂಘದ ಉಪಾಧ್ಯಕ್ಷರಾದ ಜಿ ಮಂಜುನಾಥ್, ಕುಮಾರಪ್ಪ ಎಲ್ ಪಾಪಯ್ಯ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪಾಪಣ್ಣ, ಪಿಡಿಒ ಅಬ್ದುಲ್ ಮಾಲಿಕ್, ಹಿರಿಯ ನಾಗರಿಕರಾದ ಜಗಲೂರಯ್ಯ ಗಂಗಮ್ಮ, ಮೋನಿಕಾ, ಪದ್ಮಾವತಿ ಮೊದಲಾದವರು ಹಾಜರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

Download Eedina App Android / iOS

X