ಚಿತ್ರದುರ್ಗ | ಲೋಕಸಭಾ ಚುನಾವಣೆ; ಮಾಂಗಲ್ಯ ಧಾರಣೆ ಬಳಿಕ ಮತಗಟ್ಟೆಗೆ ಬಂದು ಮತ ಚಲಾಯಿಸಿದ ದಂಪತಿ

Date:

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಚುನಾವಣೆ ಹಾಗೂ ಮತದಾನ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಮತದಾನದ ಮೂಲಕ ಉತ್ತಮ ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ. ಆದರೆ ಬಹುತೇಕರು ಮತದಾನದಿಂದ ದೂರ ಉಳಿಯಲು ಕಾರಣ ಹುಡುಕುವ ಸ್ಥಿತಿಗೆ ಬಂದಿದ್ದಾರೆ. ಚುನಾವಣೆಗೆ ಸಿಗುವ ರಜೆ ಮೋಜು, ಮಸ್ತಿಗೆ, ಪ್ರವಾಸಕ್ಕೆ ಬಳಕೆ ಆಗುತ್ತಿದೆ.

- Advertisement -

ಇದಕ್ಕೆ ಅಪವಾದ ಎನ್ನುವಂತೆ ಇಲ್ಲೊಂದು ಘಟನೆ ನಡೆದಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ಮೊದಲನೇ ಹಂತದ ಚುನಾವಣೆ ಏಪ್ರಿಲ್‌ 26ರಂದೇ ಮದುವೆ ಇದ್ದರೂ, ಮಾಂಗಲ್ಯ ಧಾರಣೆ ಬಳಿಕ ಮದುವೆ ಮಂಟಪದಿಂದ ಸೀದಾ ಮತಗಟ್ಟೆಗೆ ಬಂದು ಮತದಾನ ಮಾಡುವ ಮೂಲಕ ಎರಡು ಜೋಡಿಗಳು  ತಮ್ಮ ಪ್ರಜಾಸತ್ತಾತ್ಮಕ ಜವಾಬ್ದಾರಿ ಮೆರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ಚಿತ್ರದುರ್ಗ ತಾಲ್ಲೂಕಿನ ಭೀಮಸಮುದ್ರ ಗ್ರಾಮದಲ್ಲಿ ಇಂದು ದಾಂಪತ್ಯಕ್ಕೆ ಪಾದಾರ್ಪಣೆ ಮಾಡಿದ ರಂಗಸ್ವಾಮಿ ಹಾಗೂ ಅಂಬಿಕಾ ಭೀಮಸಮುದ್ರದ ಮತಗಟ್ಟೆ ಸಂಖ್ಯೆ 268ಕ್ಕೆ ಆಗಮಿಸಿ ಮತದಾನ ಮಾಡಿದ್ದಾರೆ. ಇವರಿಬ್ಬರು ಮತದಾನಕ್ಕೆ ಆಗಮಿಸಿದ್ದನ್ನು ಕಂಡು ಮತದಾನ ಕೇಂದ್ರದ ಸಿಬ್ಬಂದಿ ಮತ್ತು ಮತದಾರರು ಖುಷಿಯಾಗಿದ್ದು, ಮತದಾನದ ನಂತರ ಇಬ್ಬರಿಗೂ ಶುಭಾಶಯ ಕೋರಿದರು.

ಇಬ್ಬರೂ ಒಂದೇ ಗ್ರಾಮದವರಾಗಿದ್ದು, ಒಂದೇ ಮತಗಟ್ಟೆಯಲ್ಲಿ ಮತದಾನ ಮಾಡಿರುವುದು ವಿಶೇಷವಾಗಿದೆ. ಇನ್ನೂ ಚಿತ್ರದುರ್ಗ ತಾಲೂಕಿನ ಸಿರಿಗೆರೆ ಸಮೀಪದ ವಿಜಾಪುರದಲ್ಲಿ ಇಂದು ಮದುವೆಯಾದ ಅರುಣ್ ಮತ್ತು ಕಾವ್ಯಾ ಕೂಡಾ ವಿಜಾಪುರದ ಮತಗಟ್ಟೆಯಲ್ಲಿ ಮತ ಚಲಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಂಸದ, ಮಾಜಿ ಕೇಂದ್ರ ಸಚಿವ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ

ಮಾಂಗಲ್ಯಸೂತ್ರ ಧಾರಣೆಯ ಬಳಿಕ ವಿಜಾಪುರದ ಮತಗಟ್ಟೆ ಸಂಖ್ಯೆ 13ಕ್ಕೆ ತೆರಳಿ ಸರತಿ ಸಾಲಿನಲ್ಲಿ ನಿಂತು ಇಬ್ಬರೂ ತಮ್ಮ ಮತ ಚಲಾಯಿಸಿದ್ದಾರೆ.

ಇಲ್ಲಿಯೂ ಅರುಣ್ ಮತ್ತು ಕಾವ್ಯಾ ಇಬ್ಬರೂ ವಿಜಾಪುರ ಗ್ರಾಮದವರಾಗಿದ್ದು, ಒಂದೇ ಮತಗಟ್ಟೆಯಲ್ಲಿ ಮತ ಚಲಾಯಿಸಿರುವುದು ವಿಶೇಷವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕರ್ತವ್ಯಲೋಪ ಆರೋಪದಡಿ ಡಿಎಚ್‌ಒ ಡಾ. ರಾಜಕುಮಾರ್ ಯರಗಲ್ ಅಮಾನತು

ಕರ್ತವ್ಯಲೋಪ, ಆಡಳಿತಾತ್ಮಕ ನಿರ್ಲಕ್ಷ್ಯ ಹಾಗೂ ಇಲಾಖೆಯ ಸೂಚನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸಿದ ಆರೋಪದ...

ಅ.15ರಿಂದ ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಗತಿ ಆರಂಭ

ಬಾಗಲಕೋಟೆ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ...

ರಾಯಚೂರು | ಅನಧಿಕೃತ ವಿದ್ಯುತ್ ಬಳಕೆ; ಜೆಸ್ಕಾಂನಿಂದ ₹18.95 ಲಕ್ಷ ದಂಡ

ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ...