ಚಿತ್ರದುರ್ಗ | ಮತದಾರರಿಗೆ ಆಮಿಷ; ಬಿಜೆಪಿ ಅಭ್ಯರ್ಥಿ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ

Date:

ಮೊಳಕಾಲ್ಮೂರಿನಲ್ಲಿ ಇತ್ತೀಚೆಗೆ ನಡೆದ ಬಿಜೆಪಿಯ ಸಭೆಯಲ್ಲಿ ಮೋರ್ಚಾ ಅಧ್ಯಕ್ಷ ತಿಪ್ಪೇಸ್ವಾಮಿ ಅವರು ಮಾತನಾಡುತ್ತ, “ನಮ್ಮ ಕ್ಷೇತ್ರದಲ್ಲಿ ಹಣ ಇಲ್ಲದಿದ್ದರೆ ಚುನಾವಣೆ ನಡೆಯುವುದಿಲ್ಲ, ಪ್ರತಿ ಪಕ್ಷದವರು ಮತದಾರರಿಗೆ ₹500 ನೀಡಿದರೆ, ನಾವು ಅದಕ್ಕಿಂತ ಹೆಚ್ಚಾಗಿ ನೀಡಬೇಕಿದೆ” ಎಂದಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಅಗಿದ್ದು, ಈ ಬಗ್ಗೆ ಚುನಾವಣೆ ಆಯೋಗ ಕ್ರಮಕೈಗೊಳ್ಳಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಸಂಯೋಜಕ ಶಿವುಯಾದವ್ ಒತ್ತಾಯಿಸಿದ್ದಾರೆ.

- Advertisement -

ಬಿಜೆಪಿಯವರ ಮಾತು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು, “ವಿರೋಧ ಪಕ್ಷದವರು ನೀಡಿದಕ್ಕಿಂತ ಹೆಚ್ಚಿನ ಹಣವನ್ನು ನಮ್ಮ ಕ್ಷೇತ್ರದಲ್ಲಿ ನೀಡಬೇಕು” ಎಂದು ತಿಳಿಸಿದ್ದಾರೆ. ಇದರ ಬಗ್ಗೆ ಚುನಾವಣಾ ಆಯೋಗ ಕ್ರಮ ಕೈಗೊಂಡು, ಹೀಗೆ ಮಾತಾಡಿದವರು ಹಾಗೂ ಬಿಜೆಪಿ ಅಭ್ಯರ್ಥಿ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈವರೆಗೂ ಚುನಾವಣಾ ಆಯೋಗ ಏನು ಕ್ರಮ ಕೈಗೊಂಡಿಲ್ಲ. ಇದು ಚುನಾವಣಾ ಆಯೋಗವನ್ನು ತಲುಪಿಲ್ಲವೇ ಅಥವಾ ಚುನಾವಣಾ ಆಯೋಗ ಬಿಜೆಪಿ ಪರವಾಗಿ ಕೆಲಸವನ್ನು ಮಾಡುತ್ತಿದೆಯಾ? ಎಂಬ ಅನುಮಾನ ಮೂಡಿಸುವಂತಿದೆ” ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಬಂಗಾರಪ್ಪ ಸೋಲಿಗೆ ನ್ಯಾಯ ಕಂಡುಕೊಳ್ಳಬೇಕಿದೆ: ಶಾಸಕ ಬೇಳೂರು ಗೋಪಾಲಕೃಷ್ಣ

“ಚುನಾವಣೆಯನ್ನು ಗೆಲ್ಲಲೇಬೇಕೆಂಬ ಹಠದಲ್ಲಿರುವ ಬಿಜೆಪಿ ವಾಮಮಾರ್ಗದಲ್ಲಿ ಗೆಲುವನ್ನು ಸಾಧಿಸಲು ಹೂರಟಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ಇದರ ಬಗ್ಗೆ ಚುನಾವಣಾ ಆಯೋಗ ಗಮನ ನೀಡಬೇಕಿದೆ. ಬಿಜೆಪಿ ಪದಾಧಿಕಾರಿಗಳ ಮೇಲೆ ನಿಗಾವನ್ನು ಇರಿಸಲು ಕಣ್ಣಾವಲು ಸಮಿತಿ ರಚಿಸಬೇಕು. ವಿಡಿಯೋದಲ್ಲಿ ಮಾತನಾಡಿರುವ ತಿಪ್ಪೇಸ್ವಾಮಿ ಮತ್ತು ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಇದರ ಬಗ್ಗೆ ಕೂಲಂಕುಷವಾಗಿ ತನಿಖೆಯಾಗಬೇಕು” ಎಂದು ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...