ಚಿತ್ರದುರ್ಗ | ಮೊಳಕಾಲ್ಮೂರು ಶಾಸಕರು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ: ಮಾಜಿ ಶಾಸಕ ತಿಪ್ಪೇಸ್ವಾಮಿ ಆರೋಪ

Date:

Advertisements

ರಾಜ್ಯದ ಅತಿ ಹಿಂದುಳಿದ ಮೊಳಕಾಲ್ಮೂರು ಕ್ಷೇತ್ರದಲ್ಲಿ ಮರಳು ಮಾಫಿಯಾ, ಭೂ ಕಬಳಿಕೆ, ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಬೇಕಿದ್ದ ಶಾಸಕರಾದ ಎನ್‌ ವೈ ಗೋಪಾಲಕೃಷ್ಣ ಯಾವುದಕ್ಕೂ ಸ್ಪಂದಿಸುತ್ತಿಲ್ಲ ಎಂದು ಮಾಜಿ ಶಾಸಕ ನೇರ್ಲಗುಂಟೆ ತಿಪ್ಪೇಸ್ವಾಮಿ ಆರೋಪಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಶಾಸಕರು ಜನರ ಸಮಸ್ಯೆಗಳಿಗೆ ಗಮನ ಹರಿಸುತ್ತಿಲ್ಲ. ಬದಲಾಗಿ ಕೇವಲ ಶಾಸಕರ ಆಪ್ತರಿಗೆ, ಟೆಂಡ‌ರ್‌ದಾರರ ಜೊತೆ ಸೇರಿಕೊಂಡು ಹಣ ಮಾಡುವ ಉದ್ದೇಶದಿಂದ ಮಾತ್ರ ಶಾಸಕರಾಗಿದ್ದಾರೆಯೇ ಹೊರತು ಕ್ಷೇತ್ರದ ಜನರ ಸ್ಪಂದನೆಗಲ್ಲ. ಕ್ಷೇತ್ರ ಉದ್ದಾರ ಮಾಡಲು ಅಲ್ಲ ಎಂದು ಮಾಜಿ ಶಾಸಕ ದೂರಿದರು.

“ಕ್ಷೇತ್ರದ ಜನರು ಗುಳೆ ಹೋಗುವಂತಹ ಪರಿಸ್ಥಿತಿ ಇದೆ, ರೈತರು ಸಂಕಷ್ಟದಲ್ಲಿದ್ದಾರೆ. ರೈತರ ಬೆಳೆಗಳನ್ನು ಸಮೀಕ್ಷೆ ಮಾಡಿಸಿ, ಬೆಳೆ ನಷ್ಟಕ್ಕೆ ಪರಿಹಾರ ಒದಗಿಸಬೇಕಿತ್ತು. ಆದರೆ ರಾಜ್ಯ ಸರ್ಕಾರ ಪರಿಹಾರ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಇನ್ನೂ ಗ್ಯಾರಂಟಿ ಯೋಜನೆಗಳ ಪೂರ್ವದಲ್ಲಿ ಅನುದಾನ ಒದಗಿಸುತ್ತೇವೆ. ರಾಜ್ಯದ ಅಭಿವೃದ್ಧಿಗೆ ಕಂಕಣ ಬದ್ದರಾಗಿದ್ದೇವೆ ಎನ್ನುವ ಇವರುಗಳು, ಎರಡು ವರ್ಷದಲ್ಲಿ ಕ್ಷೇತ್ರದಲ್ಲಿ ಯಾವುದೇ ಜನಪರ ಯೋಜನೆಗಳ ಕಾರ್ಯಕ್ರಮ ಮಾಡಿಲ್ಲ” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ? ಚಿಕ್ಕಮಗಳೂರು | ಪ್ರೇಮಿಗಳನ್ನು ಒಂದುಗೂಡಿಸಿದ ಭೀಮ್ ಆರ್ಮಿ ಸಂಘಟನೆ

“ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ಮೊಳಕಾಲ್ಮೂರು ಕ್ಷೇತ್ರಕ್ಕೆ ವರ್ಗಾವಣೆ ಮಾಡಿಸಿಕೊಳ್ಳುವುದು ಏಕೆ? ಚಿತ್ರದುರ್ಗ ಜಿಲ್ಲೆಯಲ್ಲಿ ದಕ್ಷ ಅಧಿಕಾರಿಗಳಿಲ್ಲವೇ? ಇದರ ಹಿಂದಿನ ಉದ್ದೇಶವಾದರೂ ಏನು? ಕ್ಷೇತ್ರದ ವ್ಯಾಪ್ತಿಯಲ್ಲಿ ಮರಳು ದಂಧೆ ಹೇರಳವಾಗಿ ನಡೆಯುತ್ತಿದೆ. ಇನ್ನೂ ಭೂಮಿಯನ್ನು ಅಕ್ರಮವಾಗಿ ಕಬಳಿಸಿದವರ ಬಗ್ಗೆ ಇದುವರೆಗೆ ಕ್ರಮ ಜರುಗಿಸಿಲ್ಲ. ತಹಶೀಲ್ದಾರ್ ಹಾಗೂ ಮೇಲಿನ ಅಧಿಕಾರಿಗಳು ಕೂಡ ಇವರ ಕಪಿ ಮುಷ್ಠಿಯಲ್ಲಿ ಇದ್ದಾರೆಯೇ ಎಂಬುದು ಅನುಮಾನ ಕ್ಷೇತ್ರದ ಜನರಲ್ಲಿ ಕಾಡುತ್ತಿದೆ ಎಂದು ಮಾಜಿ ಶಾಸಕ ನೇರ್ಲಗುಂಟೆ ತಿಪ್ಪೇಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

Download Eedina App Android / iOS

X