ಚಿತ್ರದುರ್ಗ | ಜಿಲ್ಲಾಸ್ಪತ್ರೆಯಲ್ಲಿ ಮಂಗಗಳ ಕಾಟ, ರೋಗಿಗಳು ಹೈರಾಣು

Date:

ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಮಾನ್ಯವಾಗಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ, ಔಷಧಗಳ ಕೊರತೆ ಅಥವಾ ಚಿಕಿತ್ಸೆ ಸರಿ ಇಲ್ಲವೆಂಬ ದೂರುಗಳು ಕೇಳಿಬರುತ್ತವೆ. ಆದರೆ, ಚಿತ್ರದುರ್ಗದ ಜಿಲ್ಲಾಸ್ಪತ್ರೆಯೊಳಗೆ ಮಂಗಗಳ ಕಾಟ ಹೆಚ್ಚಾಗಿದ್ದು ರೋಗಿಗಳು ಹೈರಾಣಾಗಿದ್ದಾರೆ.

- Advertisement -

ಐತಿಹಾಸಿಕ ಕಲ್ಲಿನ ಕೋಟೆ, ನಲ್ಲಿಕಾಯಿ ಸಿದ್ದಪ್ಪನ ಬೆಟ್ಟ, ಚಂದ್ರವಳ್ಳಿ, ಆಡುಮಲ್ಲೇಶ್ವರ ಕಿರು ಮೃಗಾಲಯ ಆವರಣ ಸಾಮಾನ್ಯವಾಗಿ ಕೋತಿಗಳಿಗೆ ಆಶ್ರಯ ತಾಣಗಳಾಗಿವೆ. ಆಹಾರ, ನೀರು ಸಿಗದ ಸಂದರ್ಭದಲ್ಲಿ ಇವು ನಗರಕ್ಕೆ ಬರುತ್ತವೆ. ಈ ವೇಳೆ ಮನೆಗಳಿಗೆ, ದೇಗುಲಗಳಿಗೆ, ಶಾಲಾ-ಕಾಲೇಜುಗಳ ಬಳಿಯ ಕ್ಯಾಂಟೀನ್‌ಗಳಿಗೆ ನುಗ್ಗುತ್ತಿದ್ದವು. ಆದರೆ, ಕೆಲ ದಿನಗಳಿಂದ ಈ ಮಂಗಗಳು ಜಿಲ್ಲಾಸ್ಪತ್ರೆಗೆ ದಾಂಗುಡಿ ಇಡುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಿಟಕಿ ಮೂಲಕ ಜಿಗಿದು ರೋಗಿಗಳು ಇರುವ ವಾರ್ಡ್‌ಗಳಲ್ಲಿ ಕಾಣುವ ಆಹಾರದ ಪೊಟ್ಟಣಗಳನ್ನು ಹಾಸಿಗೆಯಿಂದ ಹಾಸಿಗೆಗೆ ಹಾರಿ ತೆಗೆದುಕೊಳ್ಳುತ್ತವೆ. ಇದರಿಂದ ರೋಗಿಗಳು ಆತಂಕಕ್ಕೊಳಗಾಗಿದ್ದಾರೆ. ಮಂಗಗಳು ಕಚ್ಚಿದರೆ ಎಂಬ ಭಯ ಇವರನ್ನು ಕಾಡುತ್ತಿದೆ.

ಡ್ರಿಪ್ ಹಾಕಿಸಿಕೊಂಡು ಚಿಕಿತ್ಸೆ ಪಡೆಯುತ್ತಿರುವವ ಬಳಿ ಬಂದು ನೀರಿನ ಬಾಟಲಿ ಎಂದು ಭಾವಿಸಿ ಮಂಗಗಳು ಅಲುಗಾಡಿಸುತ್ತಿದ್ದು, ರೋಗಿಗಳು ಆತಂಕಗೊಂಡಿದ್ದಾರೆ. ಆಸ್ಪತ್ರೆಯಲ್ಲಿ ರೋಗಿಗಳಿಗೆ ಭದ್ರತೆ ಇಲ್ಲ ಎನ್ನುತ್ತಿದ್ದಾರೆ ರೋಗಿಗಳ ಸಂಬಂಧಿಕರು.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ, ನಿರಂತರವಾಗಿ ಈ ರೀತಿಯ ಸಮಸ್ಯೆ ಇಲ್ಲ. ಕಳೆದೆರಡು ದಿನಗಳ ಹಿಂದೆ ಮಂಗ ನುಗ್ಗಿ ಬ್ರೆಡ್ ತೆಗೆದುಕೊಂಡು ಹೋಗಿದೆ. ಒಳಗೆ ನುಗ್ಗದಂತೆ ತಡೆಯಲು ಕಿಟಕಿಗಳಿಗೆ ಮೆಶ್ ಹಾಕಿಸಲು ಕ್ರಮ ವಹಿಸಲಾಗುವುದು. ಹೆಚ್ಚಿನ ತೊಂದರೆಯಾದಲ್ಲಿ ಕಾಡಿಗೆ ಕಳುಹಿಸಲು ಅರಣ್ಯ ಇಲಾಖೆ, ನಗರಸಭೆ ಅಧಿಕಾರಿಗಳನ್ನು ಸಂಪರ್ಕಿಸಲಾಗುವುದು ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...