ಚಿತ್ರದುರ್ಗ | ʼವಿರೋಧ ಪಕ್ಷದವರು ನೀಡಿದಕ್ಕಿಂತ ಹೆಚ್ಚಿನ ಹಣವನ್ನು ನಮ್ಮ ಕ್ಷೇತ್ರದಲ್ಲಿ ನೀಡಬೇಕುʼ ವಿಡಿಯೋ ವೈರಲ್‌, ಕ್ರಮಕ್ಕೆ ಒತ್ತಾಯ

Date:

ವಿರೋಧ ಪಕ್ಷದವರು ನೀಡಿದಕ್ಕಿಂತ ಹೆಚ್ಚಿನ ಹಣವನ್ನು ನಮ್ಮ ಕ್ಷೇತ್ರದಲ್ಲಿ ನೀಡಬೇಕು, ಇದರ ಬಗ್ಗೆ ಅಜ್ಜ ತಿಳಿಸಿದ್ದಾರೆ ಎಂಬ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದ್ದು, ಇದರ ಬಗ್ಗೆ ಚುನಾವಣಾ ಆಯೋಗ ಕ್ರಮವನ್ನು ಕೈಗೊಂಡು, ಕಣ್ಗಾವಲು ಸಮಿತಿ ರಚಿಸಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಸಂಯೋಜಕ ಶಿವುಯಾದವ್ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

- Advertisement -

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊಳಕಾಲ್ಮೂರಿನಲ್ಲಿ ಇತ್ತೀಚೆಗೆ ನಡೆದ ಬಿಜೆಪಿಯ ಸಭೆಯಲ್ಲಿ ಮೋರ್ಚಾ ಅಧ್ಯಕ್ಷ್ಯ ತಿಪ್ಪೇಸ್ವಾಮಿ ಸಭೆಯಲ್ಲಿ ಈ ಮಾತುಗಳನ್ನು ಆಡಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಹಣ ಇಲ್ಲದಿದ್ದರೆ ನಡೆಯುವುದಿಲ್ಲ ವಿರೋಧ ಪಕ್ಷದವರು 500 ರೂ. ನೀಡಿದರೆ ನಾವು ಅದಕ್ಕಿಂತ ಹೆಚ್ಚಾಗಿ ನೀಡಬೇಕಿದೆ. ವಿರೋಧ ಪಕ್ಷದವರು ಏನು ನೀಡದಿದ್ದರೂ ಸಹಾ ನಾವುಗಳು 100 ರೂ.ಗಳನ್ನಾದರೂ ನೀಡಬೇಕಿದೆ ಎಂದು ಅಜ್ಜ ಹೇಳಿದ್ದಾರೆ ಎಂಬ ಮಾಹಿತಿ ನೀಡುವ ವಿಡಿಯೋ ಇತ್ತಿಚೆಗೆ ಎಲ್ಲಾ ಕಡೆ ವೈರಲ್ ಆಗಿದೆ. ಈಬಗ್ಗೆ ಇದುವರೆಗೂ ಸಹಾ ಚುನಾವಣಾ ಆಯೋಗ ಏನು ಕ್ರಮ ಕೈಗೊಂಡಿಲ್ಲ, ಇದು ಚುನಾವಣಾ ಆಯೋಗವನ್ನು ತಲುಪಿಲ್ಲವೇ ಅಥವಾ ಚುನಾವಣಾ ಆಯೋಗ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆಯೇ? ಎಂಬ ಅನುಮಾನ ಮೂಡಿಸುವಂತಿದೆ ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಚುನಾವಣೆಯನ್ನು ಗೆಲ್ಲಲೇಬೇಕು ಎಂಬ ಹಠದಲ್ಲಿರುವ ಬಿಜೆಪಿ ವಾಮ ಮಾರ್ಗದಲ್ಲಿ ಗೆಲುವನ್ನು ಸಾಧಿಸಲು ಹೊರಟಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ಇದರ ಬಗ್ಗೆ ಚುನಾವಣಾ ಆಯೋಗ ಗಮನ ನೀಡಬೇಕಿದೆ. ಬಿಜೆಪಿ ಪದಾಧಿಕಾರಿಗಳ ಮೇಲೆ ನಿಗಾ ಇರಿಸಲು ಕಣ್ಗಾವಲು ಸಮಿತಿ ರಚಿಸಬೇಕು, ವೀಡಿಯೋದಲ್ಲಿ ಮಾತನಾಡಿರುವ ತಿಪ್ಪೇಸ್ವಾಮಿ ಮತ್ತು ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರ ಮೇಲೆ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಬೇಕು, ಇದರ ಬಗ್ಗೆ ಕೂಲಂಕಷವಾಗಿ ತನಿಖೆಯಾಗಬೇಕು ಎಂದು ಒತ್ತಾಯಿಸಿದ ಅವರು, ಇಲ್ಲಿಗೆ ಎಲೆಕ್ಟೋರಲ್ ಬಾಂಡ್‌ನಿಂದ ಬಂದ ಹಣ ಇಲ್ಲಿಗೆ ಬರುವ ನಿರೀಕ್ಷೆ ಇದೆ. ಈ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಎಚ್ಚೆತ್ತುಕೊಳ್ಳಬೇಕಿದೆ ಎಂದು ಶಿವುಯಾದವ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸೈಯದ್ ವಲಿ ಖಾದ್ರಿ ರವೀಶ್ ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...