ಚಿತ್ರದುರ್ಗ | ನೀರಿನ ಘಟಕಗಳ ಕಾಮಗಾರಿ ಹಣ ದುರ್ಬಳಕೆ; ಅಧಿಕಾರಿಗಳ ಅಮಾನತು

Date:

Advertisements

ಚಿತ್ರದುರ್ಗದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಮೂಡಲಗಿರಿಯಪ್ಪ ಹಾಗೂ ಯೋಜನಾ ಅಭಿಯಂತರ ಸತೀಶ್ ಕಲ್ಲಟ್ಟಿ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಡಿಎಂಎಫ್ ಯೋಜನೆ ಅಡಿಯಲ್ಲಿ ನಿರ್ಮಿಸುತ್ತಿರುವ 12 ಲಕ್ಷ ರೂ. ಮೊತ್ತದ ಶುದ್ಧ ಕುಡಿಯುವ ನೀರಿನ ಘಟಕಗಳ ಕಾಮಗಾರಿ ಪೂರ್ಣಗೊಳಿಸದೆ ಕಾಮಗಾರಿ ಹಣವನ್ನು ದುರ್ಬಳಕೆ ಮಾಡಿಕೊಂಡ ಹಿನ್ನೆಲೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ನಿರ್ಮಿತಿ ಕೇಂದ್ರದ ಸಹಾಯಕ ಯೋಜನಾ ವ್ಯವಸ್ಥಾಪಕ ಎಂ ಜೆ ಮಲ್ಲಿಕಾರ್ಜುನ್ ಅವರು ಮೂಡಲಗಿರಿಯಪ್ಪ ಅವರು ನಿರ್ಮಿತಿ ಕೇದ್ರದಲ್ಲಿ ನಡೆಸಿದ ಅವ್ಯವಹಾರ ನಡೆಸಿದ್ದು, ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಕ್ರಮಕ್ಕಾಗಿ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ಸಂಬಂಧ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಮತ್ತು ಉಪ ವಿಭಾಗಾಧಿಕಾರಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಜಂಟಿಯಾಗಿ ಸ್ಥಳ ಪರಿಶೀಲಿಸಿ ವರದಿ ನೀಡುವಂತೆ ತಿಳಿಸಿದ್ದರು.

Advertisements

ಸ್ಥಳ ಪರಿಶೀಲನೆ ನಡೆಸಿ ವರದಿ ಕೊಟ್ಟ ಬಳಿಕ ಅಕ್ರಮ‌ ನಡೆಸಿರುವುದು ಸಾಬೀತಾಗಿದೆ. ಈ ಕಾರಣದಿಂದ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಕ್ರಿಮಿನಲ್ ಪ್ರಕರಣದಡಿ ಎಫ್‌ಐಆರ್ ದಾಖಲಾಗಿತ್ತು. ಇದರ ಅನ್ವಯ ಜಿಲ್ಲಾಧಿಕಾರಿ ಮತ್ತು ನಿರ್ಮಿತಿ ಕೇಂದ್ರದ ಅಧ್ಯಕ್ಷರು, ಇವರಿಬ್ಬರು ತನಿಖೆಗೆ ಅಡ್ಡಿ ಪಡಿಸುವ, ಸಂಭವ ಇರುವ ಕಾರಣದಿಂದ ವಜಾ ಮಾಡಿ ಅದೇಶಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಚಿರತೆ ಸೆರೆಗೆ ಬೋನಿನಲ್ಲಿಟ್ಟಿದ್ದ ಮೇಕೆಯನ್ನೆ ಕದ್ದ ಕಳ್ಳರು

ಮೂಡಲಗಿರಿಯಪ್ಪ ಕೆ ಜಿ ಮತ್ತು ಸತೀಶ್ ಕಲ್ಲಟ್ಟಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿರುವ ಹಿನ್ನೆಲೆ ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಅವರನ್ನು ಕೂಡಲೇ ಸೇವೆಯಿಂದ ವಿಮುಕ್ತಿಗೊಳಿಸಿ ಆದೇಶಿಸಲಾಗಿದೆ.

ಚಿತ್ರದುರ್ಗ ನಿರ್ಮಿತಿ ಕೇಂದ್ರದ ಕೆಲ ಅಧಿಕಾರಿಗಳ ವಿರುದ್ದ ಹಲವು ದೂರುಗಳಿದ್ದು, ಪ್ರಕರಣಗಳು ತನಿಖೆಯ ಹಂತದಲ್ಲಿವೆ ಎನ್ನಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X