ಚಿತ್ರದುರ್ಗ‌ | ಭಾವೈಕ್ಯತೆಯ ಮೊಹರಂ; ಸಾರ್ವಜನಿಕರಿಗೆ ತಿನಿಸು, ಪಾನೀಯ ವಿತರಣೆ

Date:

ಹಿಂದೂ-ಮುಸಲ್ಮಾನರು ಕೂಡಿಕೊಂಡು ಭಾವೈಕ್ಯತೆಯ ಸಂಕೇತವಾಗಿ ಆಚರಿಸುವ ಮೊಹರಂ ಮೆರವಣಿಗೆ ಚಿತ್ರದುರ್ಗ ನಗರದಲ್ಲಿ ಬುಧವಾರ ಜರುಗಿತು.

- Advertisement -

ದುಃಖ, ಬಲಿದಾನ, ಶೋಕದ ದಿನವನ್ನಾಗಿ ಆಚರಿಸುವ ಮೊಹರಂ ಹಬ್ಬದಲ್ಲಿ ದೇಹಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳುವ ಸಂಪ್ರದಾಯ ಕೆಲವೆಡೆ ಈಗಲೂ ಇದೆ. ಅದಕ್ಕಾಗಿಯೇ ಮೊಹರಂ ಹಬ್ಬಕ್ಕೆ ತನ್ನದೇ ಆದ ಮಹತ್ವವಿದೆ. ಒಂಬತ್ತು ದಿನಗಳ ಕಾಲ ಆಚರಿಸುವ ಮೊಹರಂ ಹಬ್ಬದ ಕೊನೆ ಹತ್ತನೆಯ ದಿನವೇ ಪಂಜ ಮೆರವಣಿಗೆ ಹೊರಡುತ್ತದೆ. ಪೀರ್, ಅಲಿ ದೇವರು ಸೇರಿದಂತೆ ಇನ್ನಿತರ ದೇವರುಗಳನ್ನು ವಿಶೇಷವಾಗಿ ಅಲಂಕರಿಸಿ ಮೆರವಣಿಗೆಯನ್ನು ಮಾಡಲಾಗುತ್ತದೆ. ಹಬ್ಬದ ವಿಶೇಷವಾಗಿ ಸಾರ್ವಜನಿಕರಿಗೆ ತಿನಿಸು ಮತ್ತು ಪಾನೀಯಗಳನ್ನು ವಿತರಿಸಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಉಪವಾಸ ಆಚರಿಸುವ ಸಂಕಲ್ಪ ಮಾಡುವುದು ಹಬ್ಬದ ವಿಶೇಷ. ಚೇಳುಗುಡ್ಡ, ಬುರುಜನಹಟ್ಟಿ, ಮಠದ ಕುರುಬರಹಟ್ಟಿಯಿಂದ ಮೆರವಣಿಗೆ ಮೂಲಕ ಬಂದ ಪಂಜಗಳು ಸೈಯದ್ ನಾ ಹಜರತ್ ಇಮಾಂ ಹಸನ್ ಸೈಯದಾನಾ, ಹಜರತ್ ಇಮಾಂ ಹುಸೇನ್ ಅಶೋರಖಾನ್‌ ಇವರುಗಳ ದರ್ಗಾ ಬಳಿ ತೆರಳಿ ಪೂಜೆ ಸಲ್ಲಿಸಿದವು. ಗಾಂಧಿವೃತ್ತದಿಂದ ಹಿಡಿದು ದೊಡ್ಡಪೇಟೆಯವರೆಗೆ ರಸ್ತೆಯ ಎರಡೂ ಬದಿಯಲ್ಲಿ ಹಿಂದೂ-ಮುಸಲ್ಮಾನರು ಜಮಾಯಿಸಿ ಮೆರವಣಿಗೆ ವೀಕ್ಷಿಸಿದರು.

ಮೆರವಣಿಗೆಯುದ್ದಕ್ಕೂ ಅಲ್ಲಲ್ಲಿ ಗುಂಪು ಗುಂಪಾಗಿ ಜಮಾಯಿಸಿದ್ದ ಯುವಕರು ಡೊಳ್ಳು, ತಮಟೆಗಳನ್ನು ಬಾರಿಸಿ ಕುಣಿದು ಕುಪ್ಪಳಿಸಿ ಮೊಹರಂ ಆಚರಿಸಿದರು.

ಬೃಹತ್ ಹಾರಗಳು, ಹೂವು ಮತ್ತು ಸುನೇರಿಗಳಿಂದ ಅಲಂಕರಿಸಿದ್ದ ಪಂಜಗಳ ಮೇಲೆ ಜನ ಮಂಡಕ್ಕಿ ತೂರಿ ಭಕ್ತಿ ಸಮರ್ಪಿಸುತ್ತಿದ್ದರೆ, ಇನ್ನು ಕೆಲವರು ಕೆಳಗೆ ಬಿದ್ದ ಮಂಡಕ್ಕಿಗಳನ್ನು ಆಯ್ದುಕೊಳ್ಳುತ್ತಿದ್ದಿದ್ದು ಮೊಹರಂ ಹಬ್ಬದ ವಿಶೇಷವಾಗಿತ್ತು.

ಈ ಸುದ್ದಿ ಓದಿದ್ದೀರಾ? ‌ಬೆಳಗಾವಿ | ನಮ್ಮ ಧರ್ಮ ನಮ್ಮೊಂದಿಗೆ, ನಮ್ಮ ಪ್ರೀತಿ ಎಲ್ಲರೊಂದಿಗೆ: ಮುಹಮ್ಮದ್ ಕುಂಞಿ

ಚಿತ್ರದುರ್ಗ ನಗರದ ಮುಸ್ಲಿಂ ಹಿರಿಯರೊಬ್ಬರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, ಕೆಲವು ವರ್ಷಗಳ ಹಿಂದೆ ಇದೇ ರೀತಿಯಾಗಿ ಎಲ್ಲರೂ ಒಟ್ಟಾಗಿ ಸೇರಿ ಮೊಹರಂ ಆಚರಿಸುತ್ತಿದ್ದೆವು. ಇತ್ತೀಚೆಗೆ ಅದಕ್ಕೆ ಸ್ವಲ್ಪ ಅಡೆತಡೆ ಉಂಟಾಗಿತ್ತು.‌ ಈಗ ಮತ್ತೆ ಎಲ್ಲ ಬಾಂಧವರು ಸೇರಿ ಮೊಹರಂ ಆಚರಿಸುತ್ತಿರುವುದು ಸಂತಸವನ್ನು ಇಮ್ಮಡಿಗೊಳಿಸಿದೆ” ಎಂದು ಪ್ರತಿಕ್ರಿಯಿಸಿದರು.

ಮೊಹರಂ ಹಬ್ಬದ ಪ್ರಯುಕ್ತ ದೊಡ್ಡಪೇಟೆ ಹಾಗೂ ಗಾಂಧಿ ವೃತ್ತದಲ್ಲಿ ಪೊಲೀಸ್ ಭದ್ರತೆ ಏರ್ಪಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...