ಮಠ ಮತ್ತು ಎಸ್‌ಜೆಎಂ ಶಿಕ್ಷಣ ಸಂಸ್ಥೆಗಳ ದೈನಂದಿನ ವ್ಯವಹಾರಗಳ ಮೇಲ್ವಿಚಾರಣೆ ಮಾಡಲು ರಚಿಸಲಾದ ತಾತ್ಕಾಲಿಕ ಆಡಳಿತ ಸಮಿತಿಯು ಮುರುಘಾ ಮಠದ ಉಸ್ತುವಾರಿಯಾಗಿ ಬಸವಪ್ರಭು ಸ್ವಾಮೀಜಿ ಅವರನ್ನು ಆಯ್ಕೆ ಮಾಡಿದೆ.
ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣು ವಿರುದ್ಧದ ಪೋಸ್ಕೋ ಪ್ರಕರಣ ಇತ್ಯರ್ಥ ಆಗುವವರೆಗೂ ತಾತ್ಕಾಲಿಕ ಆಡಳಿತ ಸಮಿತಿಯನ್ನು ರಚಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಇದರಂತೆಯೇ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿಯು ಭಾನುವಾರ (ಮೇ 28) ಸಭೆ ನಡೆಸಿತ್ತು. ಸಭೆಯಲ್ಲಿ ಬಸವಪ್ರಭು ಸ್ವಾಮೀಜಿ ಅವರನ್ನು ಮಠದ ಉಸ್ತುವಾರಿಯಾಗಿ ಆಯ್ಕೆ ಮಾಡಿದ್ದಾರೆ.
ಸಭೆಯಲ್ಲಿ ಶಾಸಕ ಕೆ ಸಿ ವೀರೇಂದ್ರ, ಹನುಮಲಿ ಷಣ್ಮುಖಪ್ಪ ಸೇರಿದಂತೆ ಲಿಂಗಾಯತ ಸಮಾಜದ ಪ್ರಮುಖರು ಪಾಲ್ಗೊಂಡಿದ್ದರು.
ಈ ಸುದ್ದಿ ಓದಿದ್ದೀರಾ? ಸಚಿವರಿಗೆ ಖಾತೆ ಹಂಚಿದ ಸಿದ್ದರಾಮಯ್ಯ; ಯಾರಿಗೆ ಯಾವ ಖಾತೆ? ಇಲ್ಲಿದೆ ಮಾಹಿತಿ