ಚಿತ್ರದುರ್ಗ | ಮೂಲಸೌಕರ್ಯ ಪೂರೈಕೆಗೆ ಅಲೆಮಾರಿ, ಅರೆಅಲೆಮಾರಿ ಒಕ್ಕೂಟ ಆಗ್ರಹ

Date:

ಅಲೆಮಾರಿ, ಅರೆಅಲೆಮಾರಿ ಸಮುದಾಯಗಳಿಗೆ ಭೂಮಿ, ವಸತಿ ಹಾಗೂ ಮೂಲ ಸೌಲಭ್ಯ ನೀಡಬೇಕೆಂದು ಅಲೆಮಾರಿ, ಅರೆಅಲೆಮಾರಿ ಒಕ್ಕೂಟದ (ಎಸ್‌ಸಿ/ಎಸ್‌ಟಿ) ಮುಖಂಡರು ಆಗ್ರಹಿಸಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಒಕ್ಕೂಟದ ಮುಖಂಡರು, “ಜಿಲ್ಲೆಯಲ್ಲಿ ಅಲೆಮಾರಿ, ಅರೆಅಲೆಮಾರಿ ಸಮುದಾಯಗಳಲ್ಲಿ ಸುಮಾರು 50,000ಕ್ಕೂ ಹೆಚ್ಚು ಜನಸಂಖ್ಯೆ ಇದ್ದು, ನಾಗರಿಕ ಮೂಲಭೂತ ಸೌಲಭ್ಯಗಳಿಂದ ವಂಚಿತ ಸಮುದಾಯವಾಗಿದೆ. ಭಿಕ್ಷೆ ಬೇಡಿ ಜೀವನ ನಡೆಸುವ ಅಲೆಮಾರಿಗಳಿಗೆ ಭೂಮಿ, ವಸತಿ, ಶಿಕ್ಷಣ, ಸಾಮಾಜಿಕ ಸ್ಥಾನಮಾನ, ರಾಜಕೀಯ ವ್ಯವಸ್ಥೆ ಸೇರಿದಂತೆ ಯಾವುದೇ ಸ್ಥನಮಾನಗಳು ಇಲ್ಲದಂತಾಗಿದೆ. ಅಲೆಮಾರಿಗಳು ಊರಿಂದ ಊರಿಗೆ ಅಲೆದು ಭಿಕ್ಷೆ ಬೇಡಿ ಕಲೆಗಳನ್ನು ಪ್ರದರ್ಶನ ಮಾಡಿ ಜೀವನವನ್ನು ನಡೆಸಿಕೊಂಡು ಬಂದ ಈ ನೆಲದ ಸಮುದಾಯವಾಗಿದ್ದು, ಇಂದು ಸರ್ಕಾರಿ ಸೌಲಭ್ಯಗಳು ಸೇರಿದಂತೆ ನಾಗರಿಕ ಮೂಲ ಸೌಲಭ್ಯಗಳಿಂದ ವಂಚಿತವಾಗಿರುವ ಬಹುದೊಡ್ಡ ಸಮುದಾಯವಾಗಿದೆ” ಎಂದು ಮಾಹಿತಿ ನೀಡಿದರು.

“ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು 50,000 ಹೆಚ್ಚು ಜನಸಂಖ್ಯೆ ಹೊಂದಿರುವ ಅಲೆಮಾರಿಗಳಾದ ಸುಡಗಾಡು ಸಿದ್ದ, ಬುಡ್ಗಜಂಗಮ, ಸಿಳ್ಳೆಕ್ಯಾತ, ಚನ್ನದಾಸ, ಹಂದಿಜೋಗಿ, ಕೊರಚ, ಕೊರಮ ಸಮುದಾಯಗಳು ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದು, ಇಂತಹ ಸಮುದಾಯಗಳು ಸರ್ಕಾರದ ಯಾವುದೇ ಸೌಲಭ್ಯಗಳಿಲ್ಲದೆ, ಬಟ್ಟೆಯಿಂದ ನಿರ್ಮಾಣ ಮಾಡಿಕೊಂಡಿರುವ ಟೆಂಟ್‌ಗಳಲ್ಲಿ ವಾಸವಿದ್ದು, ಸರ್ಕಾರ ಅಲೆಮಾರಿ ಸಮುದಾಯಗಳ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಬೇಡಿಕೆಗಳನ್ನು ಜಾರಿ ಮಾಡಬೇಕಾದ ಆದ್ಯ ಕರ್ತವ್ಯವಾಗಿದೆ” ಎಂದು ಒತ್ತಾಯಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಅಲೆಮಾರಿ ಜನಾಂಗಕ್ಕಾಗಿ ಸ್ಥಾಪನೆಯಾಗಿರುವ ನಿಗಮಕ್ಕೆ ಪ್ರತಿವರ್ಷ ₹500 ಕೋಟಿ ರೂಪಾಯಿ ನೀಡಬೇಕು. ಅಲೆಮಾರಿ ಜನಾಂಗಕ್ಕೆ ಭೂಮಿ, ವಸತಿ, ವ್ಯವಸ್ಥೆಯನ್ನು ಖಾಯಂಗೊಳಿಸಬೇಕು. ಅಲೆಮಾರಿಗಳು ವ್ಯಾಪಾರ ನಡೆಸಲು ಸರ್ಕಾರದಿಂದ ಸರ್ಕಾರಿ ಸೌಲಭ್ಯಗಳನ್ನು ನೀಡಬೇಕು. ಸರ್ಕಾರದ ನಿಗಮಗಳಿಗೆ ಅಲೆಮಾರಿ ಜನಾಂಗದವರಿಗೆ ಆದ್ಯತೆ ನೀಡಬೇಕು. ಇತರೆ ಸರ್ಕಾರಿ ಸೌಲಭ್ಯಗಳು ಸೇರಿದಂತೆ ಈ ಸಮುದಾಯಗಳ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಅಕ್ಕಮಹಾದೇವಿ ವಿವಿಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಆಚರಣೆ

ವಿಮುಕ್ತಿ ವಿದ್ಯಾಸಂಸ್ಥೆ ನಿರ್ದೇಶಕ ಆರ್ ವಿಶ್ವಸಾಗರ್, ಸುಡಗಾಡು ಸಿದ್ದರು ಜನಾಂಗದ ಜಿಲ್ಲಾಧ್ಯಕ್ಷ ಕೃಷ್ಣಪ್ಪ, ಅಲೆಮಾರಿ ಸಂಘಟನೆ ಜಿಲ್ಲಾಧ್ಯಕ್ಷ ನಾಗರಾಜು, ಸಿಳ್ಳೆಕ್ಯಾತ ಮುಖಂಡರು, ಅಧ್ಯಕ್ಷರು ಮಾರಿಕಾಂಬ ಕೃಷ್ಣಪ್ಪ, ಚನ್ನದಾಸ ಜನಾಂಗ ಜಿಲ್ಲಾಧ್ಯಕ್ಷ ರಂಗಪ್ಪ ಸೇರಿದಂತೆ ಬಹುತೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...

ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ

ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ...

ಕೋಲಾರ | ಇವಿಎಂ ಮೆಷಿನ್ ಸಾಗಿಸುತ್ತಿದ್ದ ವಾಹನದ ಟೈರ್ ಬ್ಲಾಸ್ಟ್: ಪೊಲೀಸ್ ಬಂದೋಬಸ್ತ್

ಮುಳಬಾಗಿಲಿನಿಂದ ಕೋಲಾರದ ಸ್ಟ್ರಾಂಗ್‌ ರೂಮ್‌ಗೆ ಇವಿಎಂ ಮೆಷಿನ್‌ಗಳನ್ನು ಸಾಗಾಟ ಮಾಡುತ್ತಿದ್ದ ಕ್ಯಾಂಟರ್...