ಚಿತ್ರದುರ್ಗ | ಉಕ್ಕಿ ಹರಿಯುತ್ತಿರುವ ವಾಣಿ ವಿಲಾಸ(ಮಾರಿ ಕಣಿವೆ): ರೈತರಲ್ಲಿ ಚಿಮ್ಮಿದ ಉಲ್ಲಾಸ

Date:

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮೈದುಂಬಿ ಹರಿಯುತ್ತಿರುವ ವಾಣಿ ವಿಲಾಸ ಸಾಗರ ಅಣೆಕಟ್ಟೆ(ವಿವಿ ಸಾಗರ)ಯ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಸ್ಥಳೀಯರು ಹಾಗೂ ಸುತ್ತಮುತ್ತಲಿನ ಪ್ರವಾಸಿಗರು ಆಗಮಿಸುತ್ತಿದ್ದಾರೆ.

- Advertisement -

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿರುವ ವಾಣಿ ವಿಲಾಸ ಅಣೆಕಟ್ಟು ರಾಜ್ಯದ ಅತ್ಯಂತ ಹಳೆಯ ಜಲಾಶಯಗಳಲ್ಲಿ ಒಂದಾಗಿದ್ದು, ಶುಕ್ರವಾರ ಸಂಜೆಯಿಂದಲೂ ಮೈದುಂಬಿ ಹರಿಯುತ್ತಿದೆ. ಇದರಿಂದ ಸುತ್ತಲಿನ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಈ ಅದ್ಭುತ ದೃಶ್ಯವನ್ನು ಕಣ್ತುಂಬಿಕೊಳ್ಳಲು ಬರುತ್ತಿರುವ ನೂರಾರು ಪ್ರವಾಸಿಗರು ಉತ್ಸುಕರಾಗಿದ್ದಾರೆ, ಫೋಟೋಗಳನ್ನು ಸೆರೆ ಹಿಡಿಯುವಲ್ಲಿ ಮಗ್ನರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಮಾರಿ ಕಣಿವೆ ಎಂದೂ ಕರೆಯಲ್ಪಡುವ ವಾಣಿ ವಿಲಾಸ ಸಾಗರ ಅಣೆಕಟ್ಟನ್ನು 20ನೇ ಶತಮಾನದಲ್ಲಿ ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಯಿತು. ಇದರಿಂದಾಗಿ ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳ ಕೆಲವು ಭಾಗಗಳಿಗೆ ನೀರಾವರಿ ಮತ್ತು ಕುಡಿಯುವ ನೀರಿನ ನಿರ್ಣಾಯಕ ಮೂಲವಾಗಿ ಉಳಿದಿದೆ.

“ಅಣೆಕಟ್ಟು ತನ್ನ ಗರಿಷ್ಠ ಸಂಗ್ರಹ ಸಾಮರ್ಥ್ಯ 885 ಮೀಟರ್ ತಲುಪಿದೆ. ಹಾಗಾಗಿ ಹೆಚ್ಚುವರಿ ನೀರನ್ನು ಕೆಳಕ್ಕೆ ಹರಿಸಲು ಎಲ್ಲ ಗೇಟ್‌ಗಳನ್ನು ತೆರೆಯಲಾಗಿದೆ” ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisements

ಮಾರಿ ಕಣಿವೆ ಜಲಾಶಯವನ್ನು ನೋಡಲು ಬಂದಿದ್ದ ಪ್ರವಾಸಿಗರೊಬ್ಬರು ನೀರಿನ ಸೆಳೆತಕ್ಕೆ ಸಲುಕಿ ಕೊಚ್ಚಿಹೋಗುತ್ತಿದ್ದರು. ಕೂಡಲೇ ಇದನ್ನು ಗಮನಿಸಿದ ಪೊಲೀಸ್ ಸಿಬ್ಬಂದಿ ಮತ್ತು ಸ್ಥಳೀಯ ಈಜುಗಾರರು ಪ್ರವಾಸಿಗನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

“ನಿರ್ಬಂಧಿತ ಪ್ರದೇಶವನ್ನು ಪ್ರವೇಶಿಸಿದ ವ್ಯಕ್ತಿಯೊಬ್ಬರು ಫೋಟೋ ತೆಗೆಯಲು ಮುಂದಾದಾಗ ನೀರಿನ ರಭಸಕ್ಕೆ ಸಿಲುಕಿ, ಕಾಲು ಜಾರಿದ್ದಾರೆ. ಇದನ್ನು ಕಂಡ ಪೊಲೀಸ್ ಸಿಬ್ಬಂದಿ ಮತ್ತು ಸ್ಥಳೀಯ ಈಜುಗಾರರು ಕೂಡಲೇ ಕಾರ್ಯಪ್ರವೃತ್ತರಾಗಿ ನೀರಿನೊಂದಿಗೆ ಸ್ವಲ್ಪಹೊತ್ತು ಸೆಣಸಾಣಿದ ಬಳಿಕ ವ್ಯಕ್ತಿಯೊಬ್ಬರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಅಪಾಯದಿಂದ ಪಾರಾಗಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಅಂದಿನಿಂದ ಪೊಲೀಸರು ಮತ್ತು ಕಂದಾಯ ಅಧಿಕಾರಿಗಳು ಅಣೆಕಟ್ಟಿನ ಸುತ್ತಲೂ ಕಟ್ಟೆಚ್ಚರ ವಹಿಸಿದ್ದು, ಜಾಗರೂಕತೆಯನ್ನು ಹೆಚ್ಚಿಸಲಾಗಿದೆ. ಪ್ರವಾಸಿಗರು ನೀರಿನ ಹತ್ತಿರ ಹೋಗದಂತೆ ತಡೆಯಲು ಬ್ಯಾರಿಕೇಡ್‌ಗಳು ಮತ್ತು ಎಚ್ಚರಿಕೆ ಫಲಕಗಳನ್ನು ಹಾಕಲಾಗಿದೆ. ಕೊಚ್ಚಿಹೋಗುತ್ತಿದ್ದ ವ್ಯಕ್ತಿಯ ಘಟನೆಯಿಂದ ಸಾರ್ವಜನಿಕರರಲ್ಲಿ ಮನವಿ ಮಾಡಿದ ಪೊಲೀಸರು, ಜಲಾಶಯ ತುಂಬಿ ಹರಿಯುವ ಭಾಗಗಳಿಗೆ ಪ್ರವೇಶಿಸದಂತೆ ಮತ್ತು ಅಂತಹ ಜಾಗಗಳಲ್ಲಿ ನಿಂತುಕೊಳ್ಳದಂತೆ ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ದುರುಳರ ಕಾಟಕ್ಕೆ ಅಪ್ರಾಪ್ತೆ ಬಲಿ: ಕಿಡ್ನ್ಯಾಪ್, ಪೋಕ್ಸೊ ಕೇಸ್‌ನಡಿ ಆರೋಪಿಗಳ ಬಂಧನ

ತುಂಬಿ ಹರಿಯುತ್ತಿರುವ ಅಣೆಕಟ್ಟಿನ ದೃಶ್ಯವು ನಿವಾಸಿಗಳು ಮತ್ತು ಪ್ರವಾಸಿಗರಿಗೆ ಒಂದು ಆಕರ್ಷಣೆಯಾಗಿದೆ. ಆದರೆ ಅಧಿಕಾರಿಗಳು ನೀರಿನ ಒಳಹರಿವನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ನಿರ್ಬಂಧಿತ ಪ್ರದೇಶಕ್ಕೆ ಹೋಗದೆ ಸುರಕ್ಷತೆ ಕಾಪಾಡಿಕೊಳ್ಳುವಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ಅಲ್ಲದೆ ಅಣೆಕಟ್ಟೆಯ ಸೌಂದರ್ಯವನ್ನು ದೂರದಿಂದಲೇ ನೋಡಿ ಆನಂದಿಸುವಂತೆ ಸಲಹೆ ನೀಡುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...