ಚಿತ್ರದುರ್ಗ | ಒಳಮೀಸಲಾತಿ ಅನುಷ್ಠಾನಕ್ಕೆ ಒತ್ತಾಯಿಸಿ ಅ.3ರಂದು ಪಾದಯಾತ್ರೆ

Date:

ಒಳಮೀಸಲಾತಿಯನ್ನು ಜಾರಿಗೊಳಿಸಲು ರಾಜ್ಯಗಳಿಗೆ ವಿವೇಚನಾಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶದಂತೆ ಒಳಮೀಸಲಾತಿಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಹಿರಿಯೂರು ಘಟಕ ಅಕ್ಟೋಬರ್ 3ರಂದು ತಾಲೂಕಿನ ಪಟ್ರೆಹಳ್ಳಿಯಿಂದ ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಹಮ್ಮಿಕೊಂಡಿದೆ.

- Advertisement -

ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದ ಸರ್ಕಿಟ್ ಹೌಸ್‌ನಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ರಾಜ್ಯ ಘಟಕದ ಮುಖಂಡ ರಾಮಚಂದ್ರ ಮಾತನಾಡಿ, “ಸುಪ್ರೀಂ ಕೋರ್ಟ್ ರಾಜ್ಯಗಳಿಗೆ ಒಳಮೀಸಲಾತಿ ಅನುಷ್ಠಾನಗೊಳಿಸುವ ವಿವೇಚನಾ ಅಧಿಕಾರವಿದೆಯೆಂದು ನೀಡಿರುವ ಮಹತ್ವದ ತೀರ್ಪು ಸ್ವಾಗತಾರ್ಹ. ಈ ತೀರ್ಪು, ಆದೇಶ ಹೊರಬಿದ್ದು ತಿಂಗಳುಗಳೇ ಕಳೆದರೂ ರಾಜ್ಯ ಸರ್ಕಾರ ಈ ಬಗ್ಗೆ ಮೌನವನ್ನು ಪ್ರದರ್ಶಿಸುತ್ತಿದೆ. ಇದನ್ನು ಜಾರಿಗೊಳಿಸಬೇಕಾಗಿದ್ದ ರಾಜ್ಯ ಸರ್ಕಾರ ಕುಂಟುನೆಪ ಹೇಳುತ್ತಿದೆ. ಯಾವುದೇ ನೆಪಗಳನ್ನು ಹೇಳದೆ ಈ ಕೂಡಲೇ ರಾಜ್ಯದಲ್ಲಿ ಒಳಮೀಸಲಾತಿ ಅನುಷ್ಠಾನಕ್ಕೆ ತರಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

“ಜಿಲ್ಲೆಯಲ್ಲಿರುವ ದಲಿತ ಸಂಘಟನೆಗಳು ಪ್ರತಿ ಊರು ಕೇರಿಗಳಲ್ಲಿ, ಹಟ್ಟಿಗಳಲ್ಲಿ ನೆಲೆಸಿರುವ ದಲಿತ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿವೆ.‌ ಎಲ್ಲ ತಾಲೂಕುಗಳಿಂದ ಸಾವಿರಾರು ಜನರು ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಮತ್ತು ಎಚ್ಚರಿಕೆ ನೀಡುವ ಸಲುವಾಗಿ ಈ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ದಲಿತರಿಗೆ ಬಹಿಷ್ಕಾರ ಪ್ರಕರಣ; ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಇದೇ ವೇಳೆ ಸಭೆಯಲ್ಲಿ ತಾಲೂಕುಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ನಿಯೋಜಿಸಲಾಯಿತು.

ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಮುಖಂಡರಾದ ಮೊಹಮ್ಮದ್ ಮೊಹಿಸಿನ್, ರಾಘವೇಂದ್ರ ವೈ, ಮುಜಾಯಿದ್, ಗೋವಿಂದಪ್ಪ, ತಿಪ್ಪೇಸ್ವಾಮಿ, ಓಂಕಾರಪ್ಪ, ಸುರೇಶ್, ಪ್ರವೀಣ್, ಚಿದಾನಂದ್, ಇದಾಯತ್, ಅಕ್ಬರ್ ಅಲಿ, ಮಹಿಳಾ ಮುಖಂಡರಾದ ಲಕ್ಷ್ಮೀದೇವಿ, ಶಶಿಕಲಾ, ರೇಖಾ, ರತ್ನಮ್ಮ, ಕರಿಯಮ್ಮ, ಶಾರದಮ್ಮ, ಹಾಗೂ ಇತರ ಕಾರ್ಯಕರ್ತರು, ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....