ಚಿತ್ರದುರ್ಗ | ಸರ್ಕಾರಿ ಶಾಲೆಗಳ ಉಳಿವಿಗೆ ಪಾಲಕರು ಕೈ ಜೋಡಿಸಿ: ಕಲ್ಲೇಶ್ ರಾಜ್ ಪಟೇಲ್ ಮನವಿ

Date:

ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಉತ್ತಮ ಅವಕಾಶ ಕಲ್ಪಿಸಿದೆ. ಸರ್ಕಾರಿ ಶಾಲೆಗಳ ಉಳಿವಿಗೆ ಪಾಲಕರು ಕೈ ಜೋಡಿಸಬೇಕು ಎಂದು ಕೆಪಿಸಿಸಿ ಕ್ಷೇತ್ರ ಉಸ್ತುವಾರಿ ಕಲ್ಲೇಶ್ ರಾಜ್ ಪಟೇಲ್ ಮನವಿ ಮಾಡಿದರು.

ಜಗಳೂರು ಪಟ್ಟಣದ ಭುವನೇಶ್ವರಿ ವೃತ್ತ ಸಮೀಪದ ಅಂಗನವಾಡಿ ಕೇಂದ್ರದಲ್ಲಿ ಶಾಲಾ ಕಲಿಕಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ನೂತನ ಶಾಸಕ ಬಿ.ದೇವೇಂದ್ರಪ್ಪ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, “ಅಧಿಕಾರಿಗಳು ಮತ್ತು ಇಲಾಖೆ ಸಿಬ್ಬಂದಿ ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಬೇಕು. ಏನೇ ಸಮಸ್ಯೆ ಇದ್ದರು ನೇರವಾಗಿ ನನ್ನನ್ನು ಭೇಟಿ ಮಾಡಿ” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಶಾಲಾ ಮಕ್ಕಳ ಕೈಯಲ್ಲಿ ಇಡೀ ದೇಶದ ಭವಿಷ್ಯ ಅಡಗಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಬಿಸಿಯೂಟ, ಕರ್ನಾಟಕ ದರ್ಶನ, ಎಸ್ಸಿ/ಎಸ್ಟಿ ವಿದ್ಯಾರ್ಥಿಗಳಿಗೆ ಅಗತ್ಯ ನೆರವು ಸೇರಿದಂತೆ ಶಿಕ್ಷಣಕ್ಕಾಗಿ ಹಲವಾರು ಅವಕಾಶಗಳನ್ನು ಸರ್ಕಾರ ಜಾರಿಗೊಳಿಸಿದೆ” ಎಂದರು.

“ಸರ್ಕಾರ ನೀಡುವ ಈ ಪ್ರತಿಯೊಂದು ಯೋಜನೆಯನ್ನು ಪೋಷಕರು ಹಾಗೂ ವಿದ್ಯಾರ್ಥಿಗಳು ಸದ್ಭಳಕೆ ಮಾಡಿಕೊಳ್ಳಬೇಕು. ಪಾಲಕರು ತಮ್ಮ ಮಕ್ಕಳನ್ನ ಕನ್ನಡ ಶಾಲೆಗೆ ಸೇರಿಸಬೇಕು” ಎಂದು ತಿಳಿಸಿದರು.

“ಅಂಗನವಾಡಿಗಳಲ್ಲಿ ಕಾರ್ಯಕರ್ತೆಯರು ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಬಗ್ಗೆ ಹೆಚ್ಚು ಒತ್ತು ನೀಡಬೇಕು. ಮಕ್ಕಳಿಗಾಗಿ ಇಲಾಖೆಯಿಂದ ನೀಡುವಂತಹ ಪೌಷ್ಟಿಕ ಆಹಾರ-ಮೊಟ್ಟೆ ಬಿಸಿಯೂಟ ಸಮರ್ಪಕವಾಗಿ ನೀಡಬೇಕು. ಮಗುವಿನ ಸರ್ವೋತ್ತಮ ಬೆಳವಣಿಗೆಗೆ ಮೊದಲ ಹಂತದ ಶಿಕ್ಷಣ ಬಹುಮುಖ್ಯವಾಗಿದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ದಿ ಯೋಜನಾ ಅಧಿಕಾರಿ ಬೀರೇಂದ್ರ ಕುಮಾರ್, ವಲಯ ಮೇಲ್ವಚಾರಕಿ ಶಾಂತಮ್ಮ ಪಟ್ಟಣ ಪಂಚಾಯಿತಿ ಸದಸ್ಯ ಷಕೀಲ್ ಅಹಮದ್ ಸೇರಿದಂತೆ ಇಲಾಖೆ ಸಿಬ್ಬಂದಿ ಭಾಗಿಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ ಪ್ರಗತಿಪರ ಸಂಘಟನೆಗಳ ಒತ್ತಾಯ

ಸರ್ಕಾರ, ನಿರ್ಲಕ್ಷ್ಯ ಧೋರಣೆ ಬಿಟ್ಟು ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ...

ಕಲಬುರಗಿ | ಸಿಮೆಂಟ್‌ ಕಾರ್ಖಾನೆಯಲ್ಲಿ ಕಾರ್ಮಿಕ ಸಾವು; 2 ತಿಂಗಳಲ್ಲಿ 4ನೇ ದುರಂತ

ಸಿಮೆಂಟ್‌ ಕಾರ್ಖಾನೆಯಲ್ಲಿ ಬೃಹತ್ ಟ್ಯಾಂಕರ್ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ,...

ಬೀದರ್‌ | ವಿದ್ಯುತ್‌ ಸ್ಪರ್ಶ: ಸ್ಥಳದಲ್ಲೇ ವ್ಯಕ್ತಿ ಸಾವು

ವಿದ್ಯುತ್‌ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಸವಕಲ್ಯಾಣ ತಾಲೂಕಿನ ಲಾಡವಂತಿ...

ವಿಜಯಪುರ | ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆ ಅವ್ಯವಸ್ಥೆ ಸರಿಪಡಿಸುವಂತೆ ಡಿಎಸ್‌ಎಸ್‌ ಮನವಿ 

ವಿಜಯಪುರ ಜಿಲ್ಲೆಯ ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆಯ ಅವ್ಯವಸ್ಥೆಗೆ ಕಾರಣರಾಗಿರುವ ಅಧಿಕಾರಿಗಳ...