ಚಿತ್ರದುರ್ಗ | ಕುಡಿಯುವ ನೀರಿನ ಅಪವ್ಯಯ, ಆನಧಿಕೃತ ದುರ್ಬಳಕೆ ತಡೆಗಟ್ಟಿ; ತಾ.ಪಂ ಇಒ ಶಿವಪ್ರಕಾಶ್

Date:

ಗ್ರಾಮಗಳಲ್ಲಿ ಕುಡಿಯುವನೀರಿನ ಅಪವ್ಯಯ ಹಾಗೂ ಆನಧಿಕೃತ ದುರ್ಬಳಕೆ ತಡೆಗಟ್ಟುವಂತೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾ.ಪಂ. ಇಒ ಶಿವಪ್ರಕಾಶ್, ಎಸ್ ಸೂಚನೆ ನೀಡಿದರು.

ಹೊಳಲ್ಕೆರೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕುಡಿಯುವ ನೀರಿನ ಸರಬರಾಜು ಕುರಿತು ಜರುಗಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಪಿಡಿಒಗಳು ದಿನದ 24ಗಂಟೆಯಲ್ಲಿಯೂ ಕರ್ತವ್ಯದಲ್ಲಿ ಇರಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ತೊಂದರೆಯಾಗದಂತೆ ನೀರು ನಿರ್ವಹಣೆ ಮಾಡಬೇಕು. ಕೊಳವೆ ಬಾವಿಗಳ ಅಂತರ್ಜಲ ಮಟ್ಟ ಕುಸಿದಿರುವುದರಿಂದ ಹೆಚ್ಚಿನ ಪೈಪ್‌ಗಳನ್ನು ಕೊಳವೆ ಬಾವಿಗಳಿಗೆ ಅಳವಡಿಸಿ ನೀರು ಪೂರೈಕೆಗೆ ಕ್ರಮಕೈಗೊಳ್ಳಬೇಕು ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕುಡಿಯುವ ನೀರಿನ ತೊಂದರೆಯಾಗದಂತೆ ನೀರು ನಿರ್ವಹಣೆ ಮಾಡಲು ತಾಲ್ಲೂಕು ಆಡಳಿತ ಮತ್ತು ಜಿಲ್ಲಾಡಳಿತ ತಮ್ಮ ಜೊತೆಗೆ ಸದಾ ಇರುತ್ತದೆ. ಯಾವುದೇ ರೀತಿಯ ಕರ್ತವ್ಯ ನಿರ್ಲಕ್ಷ್ಯತೆ ಕಂಡು ಬಂದಲ್ಲಿ ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಇಓ ಶಿವಪ್ರಕಾಶ್‌ ಎಚ್ಚರಿಸಿದರು.

ಹೊಳಲ್ಕೆರೆ ವ್ಯಾಪ್ತಿಯಲ್ಲಿ 17ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಖಾಸಗಿಯವರ ಬೋರ್ ವೆಲ್‌ಗಳನ್ನು ಗ್ರಾಮ ಪಂಚಾಯಿತಿಯಿಂದ ಬಾಡಿಗೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ವೈ.ನೀಲಕಂಠ ಸೇರಿದಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಪಿಡಿಓಗಳು ಭಾಗವಹಿಸಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...

ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ

ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ...

ಕೋಲಾರ | ಇವಿಎಂ ಮೆಷಿನ್ ಸಾಗಿಸುತ್ತಿದ್ದ ವಾಹನದ ಟೈರ್ ಬ್ಲಾಸ್ಟ್: ಪೊಲೀಸ್ ಬಂದೋಬಸ್ತ್

ಮುಳಬಾಗಿಲಿನಿಂದ ಕೋಲಾರದ ಸ್ಟ್ರಾಂಗ್‌ ರೂಮ್‌ಗೆ ಇವಿಎಂ ಮೆಷಿನ್‌ಗಳನ್ನು ಸಾಗಾಟ ಮಾಡುತ್ತಿದ್ದ ಕ್ಯಾಂಟರ್...

ರಾಯಚೂರು | ಅರೆಬೆಂದ ಊಟ ಸೇವಿಸಿ ವಸತಿ ನಿಲಯದ ವಿದ್ಯಾರ್ಥಿನಿಯರು ಅಸ್ವಸ್ಥ

ಅಂಬೇಡ್ಕರ್ ವಸತಿ ನಿಲಯವೊಂದರಲ್ಲಿ ಅರೆಬೆಂದ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ...