ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದ್ದು, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗಿಡ್ಡಾಪುರ ಬಳಿ ಸಂಭವಿಸಿದೆ.
ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಸಮೀಪದ ಗರಣಿ ಕ್ರಾಸ್ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಎದುರಿಗೆ ಬಂದ ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮರಾ ಅಳವಡಿಕೆ
ಬಸ್ ಪಲ್ಟಿಯಾಗುತ್ತಿದ್ದಂತೆ ಸ್ಥಳೀಯರೆಲ್ಲರೂ ಸೇರಿ ಬಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಚಳ್ಳಕೆರೆ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಸಂಬಂಧ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.