ಚಿತ್ರದುರ್ಗ | ಪಿಎಸ್‌ಐ ಪರಶುರಾಮ್‌ ಸಾವು ಪ್ರಕರಣ; ಸೂಕ್ತ ತನಿಖೆಗೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಆಗ್ರಹ

Date:

ಕಾರಟಗಿ ಪಿಎಸ್‌ಐ ಪರಶುರಾಮ್‌ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ಆಗ್ರಹಿಸಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ತಹಶೀಲ್ದಾರ್‌ ಮೂಲಕ ಗೃಹಸಚಿವ ಜಿ ಪರಮೇಶ್ವರ್‌ ಅವರಿಗೆ ಮನವಿ ಸಲ್ಲಿಸಿದರು.

- Advertisement -

ಸಂಘಟನೆಯ ಮುಖಂಡರು ಮಾತನಾಡಿ, “ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಪರಶುರಾಮ್‌ ಅವರಿಗೆ ವಿನಾಕಾರಣ ವರ್ಗಾವಣೆಗಳನ್ನು ಮಾಡಿದ್ದು ಮತ್ತು ನಿಯೋಜಿತ ಠಾಣೆಯ ಕರ್ತವ್ಯದಲ್ಲಿ ಮುಂದುವರೆಯಲು ಸ್ಥಳೀಯ ಶಾಸಕರು ಮತ್ತು ಅವನ ಬೆಂಬಲಿಗರು 30 ಲಕ್ಷ ರೂಪಾಯಿಗಳಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪಗಳು ಕೇಳಿಬಂದಿವೆ. ಇದರಿಂದ ಒತ್ತಡಕ್ಕೊಳಗಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಅನುಮಾನಗಳು ಅಲ್ಲಿನ ಸ್ಥಳೀಯರು, ಪತ್ನಿ ಮತ್ತು ಕುಟುಂಬದವರಿಂದ ಕೇಳಿಬಂದಿದ್ದು ಈಗ ಎಲ್ಲ ಕಾರಣಗಳಿಂದ ಪ್ರಕರಣವನ್ನು ವಿವಿಧ ಆಯಾಮಗಳಲ್ಲಿ ಪರಿಶೀಲಿಸಿ ಸೂಕ್ತ ತನಿಖೆ ನಡೆಸಿ ಅವರ ಸಾವಿಗೆ ನ್ಯಾಯ ಕೊಡಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪ್ರಕರಣದಲ್ಲಿ ಹೆಸರಿಸಿರುವ ಆರೋಪಿಗಳನ್ನು ಕೂಡಲೇ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆಯಲ್ಲಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ದಲಿತರು, ದಲಿತ ಮಹಿಳೆಯರು ಮತ್ತು ದಲಿತ ಅಧಿಕಾರಿಗಳ ಮೇಲೆ ಪದೇ ಪದೆ ದೌರ್ಜನ್ಯದಂತಹ ಪ್ರಕರಣಗಳು ವರದಿಯಾಗುತ್ತಿದ್ದು, ರಕ್ಷಣೆ ಇಲ್ಲದ ಪರಿಸ್ಥಿತಿ ಉಂಟಾಗಿದೆ. ಇವರಿಗೆ ಸೂಕ್ತ ರಕ್ಷಣೆ ನೀಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಪಿಎಸ್‌ಐ ಪರಶುರಾಮ್ ಸಾವು ಪ್ರಕರಣ; ಆರೋಪಿಗಳ ಬಂಧನಕ್ಕೆ ಛಲವಾದಿ ಮಹಾಸಭಾ ಆಗ್ರಹ

ಈ ಸಂದರ್ಭದಲ್ಲಿ ರಾಜ್ಯಕಾರ್ಯದರ್ಶಿ ಹಾಗೂ ಚಿತ್ರದುರ್ಗ ಜಿಲ್ಲಾಧ್ಯಕ್ಷ ರಾಮಚಂದ್ರ ಕೆ, ಹಿರಿಯೂರು ತಾಲೂಕು ಅಧ್ಯಕ್ಷ ರಾಘವೇಂದ್ರ ಆರ್, ಜಿಲ್ಲಾ ಉಪಾಧ್ಯಕ್ಷ ಶಿವರಾಜಕುಮಾರ್, ತಾ. ಗೌರವಾಧ್ಯಕ್ಷ ಗೋವಿಂದಪ್ಪ, ತಾ. ಕಾರ್ಯಾಧ್ಯಕ್ಷ ಸಾಧಿಕ್ (ಚನ್ನಗಿರಿ) ತಾ. ಉಪಾಧ್ಯಕ್ಷರುಗಳಾದ ಲಕ್ಷ್ಮಣ್ ರಾವ್, ಗಿರೀಶ್, ಹೊಸಹಳ್ಳಿ ಗ್ರಾಮ ಶಾಖೆ ಅಧ್ಯಕ್ಷ ವೀರೇಂದ್ರ, ದಲಿತ ಮುಖಂಡರುಗಳಾದ ರಾಘವೇಂದ್ರ ವಿ, ಮಂಜುನಾಥ್, ಬುಡೆನ್ ಅಲಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...