ಚಿತ್ರದುರ್ಗ | ಚೆಕ್ ಪೋಸ್ಟ್‌ನಲ್ಲಿ ದಾಖಲೆಯಿಲ್ಲದ ಬರೋಬ್ಬರಿ ₹1.44 ಕೋಟಿ ಹಣ ವಶ

Date:

Advertisements

ಹಿರಿಯೂರಿನ ಜವನಗೊಂಡನಹಳ್ಳಿ ಚೆಕ್ ಪೋಸ್ಟ್‌ನಲ್ಲಿ ಎಟಿಎಂಗಳಿಗೆ ಹಣ ತುಂಬಲು ತೆಗೆದುಕೊಂಡು ಹೋಗುವ ವಾಹನದಲ್ಲಿದ್ದ ಅನಧಿಕೃತ ₹1.44 ಕೋಟಿಯನ್ನು ಹಿರಿಯೂರು ತಹಶೀಲ್ದಾ‌ರ್ ಹಾಗೂ ಸರ್ಕಲ್ ಇನ್ಸ್‌ಪೆಕ್ಟರ್‌ ಮತ್ತು ಎಸ್‌ಎಸ್‌ಟಿ ತಂಡದವರು ವಶಪಡಿಸಿಕೊಂಡಿದ್ದಾರೆ.

ತುಮಕೂರು ಮತ್ತು ಶಿರಾ ಭಾಗದ ವಾಹನವಾಗಿದ್ದು, ಇದರಲ್ಲಿ ₹1.44 ಲಕ್ಷ ಹೇಗೆ ಬಂತು ಹಾಗೂ ಈ ವಾಹನ ಚಿತ್ರದುರ್ಗದ ಕಡೆಗೆ ಏಕೆ ಬಂತು ಎನ್ನುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದು, ಹಣವನ್ನು ವಶಕ್ಕೆ ಪಡೆದುಕೊಂಡಿರುವ ಸ್ಥಳಕ್ಕೆ ಅಧಾಯ ತೆರಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಎಟಿಎಂಗಳ ಹಣ ನಿರ್ವಹಣೆ ಮಾಡುವ ಸಿಎಂಎಸ್ ಕಂಪನಿಯು ತುಮಕೂರಿನಿಂದ ಶಿರಾ ತಾಲೂಕಿನವರೆಗೆ ಮಾತ್ರ ಎಟಿಎಂಗಳಿಗೆ ಹಣ ತುಂಬಲು ಅನುಮತಿ ಪಡೆದಿತ್ತು. ಆದರೆ ಶಿರಾ ತಾಲೂಕು ಹೊರತು ಪಡಿಸಿ ಹಿರಿಯೂರು ತಾಲೂಕು ಗಡಿ ಪ್ರವೇಶಿಸಿದೆ. ಈ ಕುರಿತು ಪರಿಶೀಲನೆ ನಡೆಸಿದಾಗ ಹಿರಿಯೂರು ಗಡಿ ಪ್ರವೇಶಿಸಿದ್ದಕ್ಕೆ ಯಾವುದೇ ಸೂಕ್ತ ದಾಖಲೆ ಪ್ರಸ್ತುತ ಪಡಿಸಿರುವುದಿಲ್ಲ. ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಎಟಿಎಂಗಳಿಗೆ ಹಣ ತುಂಬಲು ಜಿಲ್ಲೆಯ ಜಿಲ್ಲಾಧಿಕಾರಿ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಆದ್ದರಿಂದ ₹1.44 ಕೋಟಿ ಹಣ ಹಾಗೂ ವಾಹನ ಜಪ್ತಿ ಮಾಡಿ ವಶಪಡಿಸಿಕೊಂಡಿದ್ದಾಗಿ ತಹಶೀಲ್ದಾರ್ ರಾಜೇಶ್ ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ಬೇರೆಯವರು ಬೆಳೆಯಬಾರದೆಂದು ಸಚಿವ ಈಶ್ವರ ಖಂಡ್ರೆ ತನ್ನ ಮಗನಿಗೆ ಟಿಕೆಟ್ ಕೊಡಿಸಿದ್ರಾ : ಸಚಿವ ಭಗವಂತ ಖೂಬಾ

ದಾಖಲೆಗಳ ಪರಿಶೀಲನೆ ನಡೆಯುತ್ತಿದ್ದು, ವಶ ಪಡಿಸಿಕೊಂಡ ಹಣವನ್ನು ಸೂಕ್ತ ವಿಚಾರಣೆಯ ಬಳಿಕ ಜಿಲ್ಲಾ ಪಂಚಾಯತ್‌ ಸಿಇಒ ನೇತೃತ್ವದಲ್ಲಿ ನಗದು ಜಪ್ತಿ ಸಮಿತಿ ವಶಕ್ಕೆ ನೀಡುವುದಾಗಿ ಮಾಹಿತಿ ನೀಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X