ಚಿತ್ರದುರ್ಗ | ಚಂದ್ರಾ ಲೇಔಟ್‌ಗೆ ಶೀಘ್ರ ರಸ್ತೆ ಸಂಪರ್ಕ ಕಲ್ಪಿಸಿ; ನಾಗರೀಕ ಹಿತರಕ್ಷಣಾ ಸಮಿತಿ ಒತ್ತಾಯ

Date:

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಟೌನ್ ವೇದಾವತಿ ನಗರದ 3ನೇ ವಾರ್ಡ್ ಚಂದ್ರಾ ಲೇಔಟ್‌ನಲ್ಲಿ  ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಿ ಸಂಚಾರಕ್ಕೆ ಮುಕ್ತಗೊಳಿಸಬೇಕೆಂದು ನಾಗರೀಕ ಹಿತರಕ್ಷಣಾ ಸಮಿತಿಯ ಗೌರವಾಧ್ಯಕ್ಷ ಎಸ್.ವಿ. ರಂಗನಾಥ್ ಒತ್ತಾಯ ಮಾಡಿದ್ದಾರೆ.

ಈಗಾಗಲೇ ಒತ್ತುವರಿಯಾಗಿದ್ದ ರಸ್ತೆ ತೆರವು ಮಾಡಿ ಬಾಕ್ಸ್ ಚರಂಡಿ ನಿರ್ಮಿಸಿದ್ದು, ರಸ್ತೆ ಮಧ್ಯದಲ್ಲಿರುವ ವಿದ್ಯುತ್ ಮಾರ್ಗ ಮತ್ತು ಪರಿವರ್ತಕ ಸ್ಥಳಾಂತರ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಿಕೊಡಲು ಸಂಬಂಧಿಸಿದ ನಗರಸಭೆ ಮತ್ತು ಬೆಸ್ಕಾಂ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಚಂದ್ರಾ ಲೇಔಟ್ ನಾಗರಿಕರಿಗೆ ಯಾವುದೇ ದಿಕ್ಕಿನಿಂದ ಸಮರ್ಪಕ ಶಾಶ್ವತ ರಸ್ತೆ ಇರುವುದಿಲ್ಲ, ಅರ್ಧ ಕಿಲೋ ಮೀಟರ್‌ನಲ್ಲಿ ಸಿಗುವ ಮುಖ್ಯರಸ್ತೆ ತಲುಪಲು ಸುತ್ತಿಕೊಂಡು ಬಳಸಿ 2ಕಿಲೋ ಮೀಟರ್ ಕ್ರಮಿಸಿ ಮುಖ್ಯ ರಸ್ತೆ ತಲುಪುವಂತಾಗಿದೆ. ಒಂದು ಬಡಾವಣೆ ಸಂಪರ್ಕ ರಸ್ತೆಗಾಗಿ ಇನ್ನೂ ಎಷ್ಟು ದಿನ ಹೋರಾಟ ಮಾಡಬೇಕು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಚಂದ್ರಾ ಲೇಔಟ್‌ನಲ್ಲಿರುವ ಉದ್ಯಾನವನ ಜಾಗವನ್ನು ನಗರಸಭೆ ದಾಖಲೆಗಳ ಪ್ರಕಾರ ಅಳತೆ ಮಾಡಿಸಿ ಗಡಿ ಗುರುತು ಮಾಡಿ, ಗಿಡ ನೆಡುವ ಮೂಲಕ ಉದ್ಯಾನವನ ಜಾಗ, ನರ್ಸರಿ ಶಾಲೆ, ಆಟದ ಮೈದಾನದ ಜಾಗವನ್ನು ನಾಗರೀಕರಿಗೆ ಉಳಿಸಿಕೊಡಬೇಕೆಂದು ನಗರಸಭೆ ಪೌರಾಯುಕ್ತರಾದ ಮಹಾಂತೇಶ್‌ಅವರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಾಗರೀಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಸಂತೋಷ ರಾಥೋಡ್, ಉಪಾಧ್ಯಕ್ಷ ಸ್ವಾಮಿ, ಕಾರ್ಯದರ್ಶಿ ಸಿ.ಜಿ. ಗೌಡ ಇತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ರಾಯಚೂರು | ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧೆ: ಬಿ.ವಿ ನಾಯಕ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ರಾಯಚೂರು ಕ್ಷೇತ್ರದಲ್ಲಿ ಸ್ಪರ್ಧಿಸಲು ನಾನು ಆಕಾಂಕ್ಷಿಯಾಗಿದ್ದೇನೆ....

ತುಮಕೂರು | ಕಲೆಯ ಗ್ರಹಿಕೆ ಮೇಲೆ ನಿರ್ಬಂಧ ಹೇರುವುದು ಅಪಾಯಕಾರಿ: ವಿಮರ್ಶಕ ರಾಘವೇಂದ್ರರಾವ್

ಕಲೆಯ ಗ್ರಹಿಕೆ ಮೇಲೆ ನಿರ್ಬಂಧಗಳನ್ನು ಹೇರುವುದು ಅಪಾಯಕಾರಿಯಾಗಿದೆ. ಗ್ರಹಿಕೆಯು ನಿಯಮಬದ್ಧವಾಗಿದ್ದರೂ ನಿರ್ಬಂಧ...

ಗದಗ | ಪ್ರತಿಯೊಬ್ಬರಿಗೂ ಮುಖ್ಯವಾದ ಸಂಪತ್ತು ಆರೋಗ್ಯ; ಎಂಎಲ್‌ಸಿ ಸಂಕನೂರ

ಪ್ರತಿಯೊಬ್ಬರಿಗೂ ಆರೋಗ್ಯ ಸಂಪತ್ತು ಮುಖ್ಯವಾದ ಸಂಪತ್ತಾಗಿದೆ. ನೌಕರರು ತಮ್ಮ ಆರೋಗ್ಯ ಸಂರಕ್ಷಣೆಗೆ...

ತುಮಕೂರಿನಲ್ಲಿ ನೊಳಂಬ ಲಿಂಗಾಯತರಿಗೆ ಟಿಕೆಟ್ ನೀಡುವಂತೆ ಸ್ವಾಮೀಜಿಗಳ ಒತ್ತಾಯ

ಮುಂದಿನ ಲೋಕಸಭಾ ಚುನಾವಣೆಗೆ ತುಮಕೂರು ಕ್ಷೇತ್ರದಲ್ಲಿ ನೊಳಂಬ ಲಿಂಗಾಯತರಿಗೆ ಟಿಕೆಟ್ ಕೊಡುವಂತೆ...