ಚಿತ್ರದುರ್ಗ | ವಿದ್ಯಾರ್ಥಿಗಳು ಜ್ಞಾನಾರ್ಜನೆಗೆ ಒತ್ತು ಕೊಡಬೇಕು

Date:

Advertisements

ಹದಿಹರೆಯದ ವಿದ್ಯಾರ್ಥಿಗಳು ಜ್ಞಾನಾರ್ಜನೆ ಪಡೆಯುವ ಕಡೆಗೆ ಮಾತ್ರ ಹೆಚ್ಚಿನ ಗಮನಹರಿಸಬೇಕು. ಆಸೆ, ಆಕರ್ಷಣೆಗಳಿಗೆ ಬಲಿಯಾಗಬಾರದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಎಂ ವಿಜಯ್‌ ಸಲಹೆ ನೀಡಿದ್ದಾರೆ.

ಚಿತ್ರದುರ್ಗದ ಬಾಲಕರ ಪದವಿಪೂರ್ವ ಕಾಲೇಜಿನಲ್ಲಿ ಸರ್ಕಾರಿ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಪದವಿಪೂರ್ವ ಶಿಕ್ಷಣ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ ‘ಪೋಕ್ಸೋ ಕಾಯ್ದೆ ಮತ್ತು ಮಕ್ಕಳ ಹಕ್ಕುಗಳು’ ಕಾನೂನು ಅರಿವು- ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಹದಿಹರೆಯದ ವಿದ್ಯಾರ್ಥಿಗಳ ಮನಸ್ಥಿತಿ ಯಾವಾಗಲೂ ಓದುವ ಕಡೆಗೆ ಮಾತ್ರ ಇರಬೇಕು. ಬೇರೆ ಯಾವುದೇ ಆಕರ್ಷಣೆ, ಆಸೆ- ಆಮಿಷಗಳಿಗೆ ಒಳಗಾಗಬಾರದು. ಉತ್ತಮ ಶಿಕ್ಷಣ ಪಡೆದು ತಂದೆ-ತಾಯಿ, ಸಮಾಜಕ್ಕೆ ಕೀರ್ತಿತರುವ ಮೂಲಕ ಸ್ವಾಸ್ಥ್ಯ ಜೀವನ ನಡೆಸಬೇಕು” ಎಂದು ಹೇಳಿದರು.

Advertisements

“ವಿದ್ಯಾರ್ಥಿಗಳಲ್ಲಿ ದೈಹಿಕ ಹಾಗೂ ಮಾನಸಿಕವಾಗಿ ಬದಲಾವಣೆಗಳಾಗುತ್ತವೆ. 16 ರಿಂದ 18 ವರ್ಷದ ವಿದ್ಯಾರ್ಥಿಗಳು ಈ ವಯಸ್ಸಿನಲ್ಲಿ ತಪ್ಪು ದಾರಿ ಹಿಡಿದರೆ ಪೊಲೀಸ್ ಠಾಣೆ, ನ್ಯಾಯಾಲಯಕ್ಕೆ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ” ಎಂದು ತಿಳಿಸಿದರು.

ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್‌.ರಾಜು ಮಾತನಾಡಿ, “ಹದಿಹರೆಯದ ವಯಸ್ಸಿನ ವಿದ್ಯಾರ್ಥಿಗಳು ಪಠ್ಯ, ಪಠ್ಯೇತರ, ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಯಂತಹ ಸ್ಪರ್ಧೆಗಳಲ್ಲಿ ಹೆಚ್ಚು ತೊಡಗಿಕೊಳ್ಳಬೇಕು. ಆಮಿಷಗಳಿಗೆ ಒಳಗಾಗಿ ಜೀವನ ಹಾಳುಮಾಡಿ ಕೊಳ್ಳಬಾರದು” ಎಂದು ಸಲಹೆ ನೀಡಿದರು.

“ವಿದ್ಯಾರ್ಥಿಗಳು ಬೇರೆ ಯಾವುದೇ ಆಸೆಗಳಿದ್ದರೂ, ತಂದೆ-ತಾಯಿಗಳ ವಿಶ್ವಾಸಕ್ಕೆ ಧಕ್ಕೆ ತರುವ ಕೆಲಸ ಮಾಡಬಾರದು. ಕಲಿಕೆಗೆ ಹೆಚ್ಚು ಕಟ್ಟು, ಉತ್ತಮ ಪ್ರಜೆಗಳಾಗಿ ಭವ್ಯ ಭಾರತದ ನಿರ್ಮಾಣದಲ್ಲಿ ತೊಡಗಬೇಕು. ಸನ್ಮಾರ್ಗಗಳ ಬೆಳೆವಣಿಗೆ ದೆಸೆಯಲ್ಲಿ ವಿದ್ಯಾರ್ಥಿಗಳು ಯೋಚಿಸಬೇಕು” ಎಂದರು.

ಪೋಕ್ಸೋ ಮತ್ತು ಮಕ್ಕಳ ಹಕ್ಕುಗಳ ಬಗ್ಗೆ ವಕೀಲ ಡಿ.ಎಂ.ಬಸವರಾಜ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ಬಿ.ಎಂ.ಅನಿಲ್ ಕುಮಾರ್, ಕಾರ್ಯದರ್ಶಿ ಆರ್.ಗಂಗಾಧರ್, ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾದ ಡಾ.ಬಿ.ಕೃಷ್ಣಪ್ಪ, ಉಪನ್ಯಾಸಕರಾದ ಡಾ. ಬಿ.ಎಂ ಹೇಮಂತರಾಜು, ಕೆ ರೇಣುಕಾ, ಆರ್. ಚಂದ್ರಕಲಾ ಸೇರಿದಂತೆ ಮತ್ತಿತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X