ಚಿತ್ರದುರ್ಗ | ಸ್ವಚ್ಛತಾ ಸಪ್ತಾಹ, ಕುಡಿಯುವ ನೀರಿನ ಸಮಸ್ಯೆ, ಸಾಂಕ್ರಾಮಿಕ ರೋಗ ತಡೆಗೆ ಮುಂಜಾಗೃತ ಕ್ರಮ: ಜಿ.ಪಂ ಸಿಇಒ

Date:

ಚಿತ್ರದುರ್ಗ ಜಿಲ್ಲೆಯ 189 ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛತಾ ಸಪ್ತಾಹ, ಕುಡಿಯುವ ನೀರಿನ ಸಮಸ್ಯೆ, ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ವಿಶೇಷ ಗ್ರಾಮಸಭೆಗಳನ್ನು ಆಯೋಜಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಸ್‌ ಜೆ ಸೋಮಶೇಖರ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸ್ವಚ್ಛತೆ ಸಪ್ತಾಹ, ಕುಡಿಯುವ ನೀರಿನ ಸಮಸ್ಯೆ, ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಕೈಗೊಳ್ಳುವ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಜಿಲ್ಲೆಯಲ್ಲಿ ಜನಜಾಗೃತಿ ಸಪ್ತಾಹದ ಅಂಗವಾಗಿ ವೈಯಕ್ತಿಕ ಸ್ವಚ್ಛತೆ, ಶುದ್ಧ ಕುಡಿಯುವ ನೀರು ಹಾಗೂ ಪರಿಸರ ನೈರ್ಮಲ್ಯದ ನಿರ್ವಹಣೆ ಕುರಿತು ಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಿಶೇಷ ಗ್ರಾಮ ಸಭೆಗಳನ್ನು ಆಯೋಜಿಸಿ, ಗ್ರಾಮಗಳ ಮುಖಂಡರುಗಳಿಗೆ, ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಹಾಗೂ ನೈರ್ಮಲ್ಯದ ಕುರಿತು ಅರಿವು ಮೂಡಿಸಬೇಕು” ಎಂದು ಸೂಚಿಸಿದರು.

“ಕುಡಿಯಲು ಕಾಯಿಸಿ ಆರಿಸಿದ ನೀರನ್ನು ಉಪಯೋಗಿಸುವಂತೆ ಹೆಚ್ಚಿನ ಪ್ರಚಾರ ನೀಡಬೇಕು. ಕುಡಿಯುವ ನೀರಿನ ಮೂಲಗಳಿಂದ ಗ್ರಾಮಾಂತರ ಪ್ರದೇಶಗಳಲ್ಲಿ ನೀರಿನ ಮಾದರಿಗಳನ್ನು ನಿರಂತರವಾಗಿ ಸಂಗ್ರಹಿಸಿ, ಪರೀಕ್ಷಿಸಿ, ಕಲುಷಿತವಾಗಿರುವ ಮೂಲಗಳನ್ನು ತಕ್ಷಣ ಕ್ಲೋರಿನೇಷನ್‌ ಮಾಡಿಸಬೇಕು. ಶುದ್ಧ ಕುಡಿಯುವ ನೀರು ಹಾಗೂ ಸಮರ್ಪಕ ನೈರ್ಮಲ್ಯ ನಿರ್ವಹಣೆಯಲ್ಲಿ ಅಗತ್ಯವಿರುವ ದುರಸ್ಥಿ ಕಾರ್ಯಗಳನ್ನು ಪೂರ್ವಭಾವಿಯಾಗಿ ಗುರುತಿಸಿ ಸರಿಪಡಿಸಬೇಕು. ನೀರು ಸಂಗ್ರಹಿಸುವ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸಿ ನೀರು ಶೇಖರಿಸಬೇಕು” ಎಂದು ತಾಕೀತು ಮಾಡಿದರು.

ಈ ಸುದ್ದಿ ಓದಿದ್ದೀರಾ? ಮಣಿಪುರ ಹಿಂಸಾಚಾರ ತಡೆಯುವಲ್ಲಿ ರಾಜ್ಯ, ಕೇಂದ್ರ ಸರ್ಕಾರ ಸಂಪೂರ್ಣ ವಿಫಲ; ದಸಂಸ ಕಿಡಿ

ನೀರು ಪೂರೈಕೆ ಸೋರುವಿಕೆ ಗುರುತಿಸಿ ಕುಡಿಯುವ ನೀರು ಕಲುಷಿತವಾಗದಂತೆ ತಕ್ಷಣ ದುರಸ್ಥಿಗೊಳಿಸಬೇಕು. ಗ್ರಾಮದಲ್ಲಿ ಸಮರ್ಪಕವಾಗಿ ನೈರ್ಮಲ್ಯ ನಿರ್ವಹಿಸಬೇಕು. ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಅನುಪಸ್ಥಿತಿಯಲ್ಲಿ ಕ್ಲೋರಿನೇಷನ್ ಕಾರ್ಯ ಕೈಗೊಳ್ಳಬೇಕು. ಈ ಕುರಿತು ತುರ್ತಾಗಿ ಕ್ರಮವಹಿಸಿ ವಾರದೊಳಗೆ ವರದಿ ಸಲ್ಲಿಸಬೇಕು” ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ, ಗ್ರಾಮೀಣ ನೀರು ಸರಬರಾಜು ಇಲಾಖೆ ಕಾರ್ಯಪಾಲಕ ಎಂಜಿನಿಯರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕಾಶಿ ಹಾಗೂ ಆರು ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ನೀರು ಸರಬರಾಜು ಸಹಾಯಕ ನಿರ್ವಾಹಕ ಅಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...