ಹಿರಿಯೂರಿನಲ್ಲಿ ಹಿಂದೂ ಮಹಾ ಗಣಪತಿ ವಿಸರ್ಜನೆಯ ದಿಕ್ಸೂಚಿ ಭಾಷಣ ಮಾಡಬೇಕಾಗಿದ್ದ ಹಿಂದೂ ಕಾರ್ಯಕರ್ತ ಶರಣ್ ಪಂಪ್‌ವೆಲ್‌ಗೆ ಚಿತ್ರದುರ್ಗ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೊರಡಿಸಿದ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮೂಲದ ವಿಶ್ವ ಹಿಂದೂ ಪರಿಷತ್‌ನ ಕರ್ನಾಟಕ ಪ್ರಾಂತ್ಯ ಸಹ ಕಾರ್ಯದರ್ಶಿಯಾಗಿರುವ ಶರಣ್ ಪಂಪ್‌ವೆಲ್ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿಯ ವಿಸರ್ಜನಾ ಸಭೆಗೆ ಭಾಗವಹಿಸಿ ದಿಕ್ಸೂಚಿ ಭಾಷಣ ಮಾಡುವ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಕಾನೂನು ಸುವ್ಯವಸ್ಥೆಯ ಕಾರಣದಿಂದ ಕಾರ್ಯಕರ್ತ ಶರಣ್ ಪಂಪ್‌ವೆಲ್‌ಗೆ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಿಲ್ಲೆಗೆ ಪ್ರವೇಶ ನಿರಾಕರಿಸಿ ನಿರ್ಬಂಧ ಹೊರಡಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಸೆಪ್ಟೆಂಬರ್ 22ರ ಸಂಜೆ ಚಿತ್ರದುರ್ಗದ ಹಿಂದೂ ಮಹಾಗಣಪತಿ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿತ್ತು. ಆದರೆ ಜಿಲ್ಲಾ ಪ್ರವೇಶ ನಿರ್ಬಂಧದಿಂದ ಎರಡೂ ಕಾರ್ಯಕ್ರಮಗಳಿಗೆ ಅವರು ಆಗಮಿಸುವುದು ಬಹುತೇಕ ಅಸಾಧ್ಯವಾಗಿದೆ.
ಈ ಸುದ್ದಿ ಓದಿದ್ದೀರಾ? ಮಂಡ್ಯ | ನಾಗಮಂಗಲ ಗಲಭೆಗೆ ಸಂಘ ಪರಿವಾರದ ಸಂಚು: ಸಿಪಿಐಎಂ ಆರೋಪ
ಹಿರಿಯೂರಿನ ಹಿಂದೂ ಮಹಾಗಣಪತಿ ವಿಸರ್ಜನೆ ಆಗಲಿದೆ. ಸೆಪ್ಟೆಂಬರ್ 28ರಂದು ಚಿತ್ರದುರ್ಗದ ಹಿಂದೂ ಮಹಾಗಣಪತಿಯ ಶೋಭಾಯಾತ್ರೆ ನಡೆಯಲಿದ್ದು, ವಿಸರ್ಜನೆ ಕಾರ್ಯಕ್ರಮ ಮತ್ತು ಶೋಭಾಯಾತ್ರೆಗೆ ರಾಜ್ಯದ ಹಲವಡೆಯಿಂದ ಲಕ್ಷಾಂತರ ಜನ ಭಾಗವಹಿಸುತ್ತಾರೆ. ಶರಣ್ ಪಂಪ್‌ವೆಲ್ ವಿರುದ್ಧ ರಾಜ್ಯದ ಹಲವಾರು ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
ಬರ್ಲಿ ಬಿಡ್ರಿ ಮಂಗಳೂರು ನವರು ಇಲ್ಲಿಗೆ ಬಂದ್ರೆ sariyogadu