ಚಿತ್ರದುರ್ಗ | ವಿವಾದಾತ್ಮಕ ಹೇಳಿಕೆ ಹಿನ್ನೆಲೆ; ಸಂಘಪರಿವಾರದ ಮುಖಂಡ ಶರಣ್ ಪಂಪ್‌ವೆಲ್ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ

Date:

ಹಿರಿಯೂರಿನಲ್ಲಿ ಹಿಂದೂ ಮಹಾ ಗಣಪತಿ ವಿಸರ್ಜನೆಯ ದಿಕ್ಸೂಚಿ ಭಾಷಣ ಮಾಡಬೇಕಾಗಿದ್ದ ಹಿಂದೂ ಕಾರ್ಯಕರ್ತ ಶರಣ್ ಪಂಪ್‌ವೆಲ್‌ಗೆ ಚಿತ್ರದುರ್ಗ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೊರಡಿಸಿದ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮೂಲದ ವಿಶ್ವ ಹಿಂದೂ ಪರಿಷತ್‌ನ ಕರ್ನಾಟಕ ಪ್ರಾಂತ್ಯ ಸಹ ಕಾರ್ಯದರ್ಶಿಯಾಗಿರುವ ಶರಣ್ ಪಂಪ್‌ವೆಲ್‌ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿಯ ವಿಸರ್ಜನಾ ಸಭೆಗೆ ಭಾಗವಹಿಸಿ ದಿಕ್ಸೂಚಿ ಭಾಷಣ ಮಾಡುವ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಕಾನೂನು ಸುವ್ಯವಸ್ಥೆಯ ಕಾರಣದಿಂದ ಕಾರ್ಯಕರ್ತ ಶರಣ್ ಪಂಪ್‌ವೆಲ್‌ಗೆ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಿಲ್ಲೆಗೆ ಪ್ರವೇಶ ನಿರಾಕರಿಸಿ ನಿರ್ಬಂಧ ಹೊರಡಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸೆಪ್ಟೆಂಬರ್‌ 22ರ ಸಂಜೆ ಚಿತ್ರದುರ್ಗದ ಹಿಂದೂ ಮಹಾಗಣಪತಿ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿತ್ತು. ಆದರೆ ಜಿಲ್ಲಾ ಪ್ರವೇಶ ನಿರ್ಬಂಧದಿಂದ ಎರಡೂ ಕಾರ್ಯಕ್ರಮಗಳಿಗೆ ಅವರು ಆಗಮಿಸುವುದು ಬಹುತೇಕ ಅಸಾಧ್ಯವಾಗಿದೆ.

ಈ ಸುದ್ದಿ ಓದಿದ್ದೀರಾ? ಮಂಡ್ಯ | ನಾಗಮಂಗಲ ಗಲಭೆಗೆ ಸಂಘ ಪರಿವಾರದ ಸಂಚು: ಸಿಪಿಐಎಂ ಆರೋಪ

ಹಿರಿಯೂರಿನ ಹಿಂದೂ ಮಹಾಗಣಪತಿ ವಿಸರ್ಜನೆ ಆಗಲಿದೆ. ಸೆಪ್ಟೆಂಬರ್ 28ರಂದು ಚಿತ್ರದುರ್ಗದ ಹಿಂದೂ ಮಹಾಗಣಪತಿಯ ಶೋಭಾಯಾತ್ರೆ ನಡೆಯಲಿದ್ದು, ವಿಸರ್ಜನೆ ಕಾರ್ಯಕ್ರಮ ಮತ್ತು ಶೋಭಾಯಾತ್ರೆಗೆ ರಾಜ್ಯದ ಹಲವಡೆಯಿಂದ ಲಕ್ಷಾಂತರ ಜನ ಭಾಗವಹಿಸುತ್ತಾರೆ. ಶರಣ್ ಪಂಪ್‌ವೆಲ್ ವಿರುದ್ಧ ರಾಜ್ಯದ ಹಲವಾರು ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...