ವಿಭಿನ್ನ ಫೋಟೋಶೂಟ್ ಹುಚ್ಚಿನಲ್ಲಿ ವೈದ್ಯರೊಬ್ಬರು ಆಪರೇಷನ್ ಥಿಯೇಟರ್‌ನಲ್ಲಿ ಪ್ರಿವೆಡ್ಡಿಂಗ್ ವಿಡಿಯೋ ಶೂಟ್ ಮಾಡಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಘಟನೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಜಿಲ್ಲಾಸ್ಪತ್ರೆಯ ಗುತ್ತಿಗೆ ವೈದ್ಯ ಡಾ.ಅಭಿಷೇಕ್ ಯಡವಟ್ಟಿಗೆ ಆಕ್ರೋಶ ವ್ಯಕ್ತವಾಗಿದೆ. ವೈದ್ಯ ಅಭೀಷೇಕ್, ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಪ್ರಿವೆಡ್ಡಿಂಗ್ ವಿಡಿಯೋ ಶೂಟ್ ಮಾಡಿಸಿದ್ದಾರೆ. ವ್ಯಕ್ತಿಗೆ ಆಪರೇಷನ್ ಮಾಡುತ್ತಿರುವಂತೆ ವಿಡಿಯೋ ಶೂಟ್ ಮಾಡಿಸಿದ್ದು ಡಾ.ಅಭಿಷೇಕ್ ಜೋಡಿಯ ಪ್ರಿವೆಡ್ಡಿಂಗ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಈ ಬಗ್ಗೆ ಟೀಕೆಗಳು ಕೇಳಿಬಂದಿವೆ. ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ದುರ್ಬಳಕೆಯಾಗಿದೆ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ.
ಘಟನೆ ಸಂಬಂಧ ಸುದ್ದಿ ಮಾದ್ಯಮಗಳಿಗೆ ಪ್ರತಿಕ್ರಿಯಿಸಿರುವ ಚಿತ್ರದುರ್ಗ ಡಿಎಚ್ಒ ಡಾ. ರೇಣುಪ್ರಸಾದ್, ಆಸ್ಪತ್ರೆ ಆಪರೇಷನ್ ಥಿಯೇಟರ್ ದುರ್ಬಳಕೆಯಾಗಿದೆ. ಭರಮಸಾಗರ ಆಸ್ಪತ್ರೆ ವೈದ್ಯಾಧಿಕಾರಿಗೆ ನೋಟಿಸ್ ಜಾರಿ ಮಾಡಿದ್ದೇವೆ. ಒಂದು ತಿಂಗಳ ಹಿಂದೆ ಡಾ.ಅಭಿಷೇಕ್ ನೇಮಕವಾಗಿದ್ದು, ಗುತ್ತಿಗೆ ಆಧಾರದಲ್ಲಿ ವೈದ್ಯಾಧಿಕಾರಿದ್ದಾರೆ.ಘಟನೆಯಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.