ಚಿತ್ರದುರ್ಗ | ವಿಚ್ಛೇದನ ಕೇಳಿದ್ದ ಪತ್ನಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ದುರುಳ ಪತಿ

Date:

Advertisements

ಚಳ್ಳಕೆರೆ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದು ಬರುತ್ತಿದ್ದ ಪತ್ನಿ ಮೇಲೆ ಪತಿಯೊಬ್ಬ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚೆನ್ನಮ್ಮನಾಗತಿಹಳ್ಳಿ ಗ್ರಾಮದ 30ವರ್ಷದ ಕುಮಾರ್, ಆತನ ಪತ್ನಿ ಆಶಾ (25) ಕಳೆದ ಮೂರು ವರ್ಷದ ಹಿಂದೆ ವಿವಾಹವಾಗಿದ್ದರು. ಎರಡು ವರ್ಷದ ದಾಂಪತ್ಯ ಜೀವನ ನಡೆಸಿದ ನಂತರ ದಾಂಪತ್ಯದಲ್ಲಿ ಒಡಕು‌ ಮೂಡಿ ಹೆಂಡತಿ ಆಶಾ, ವಿವಾಹ ವಿಚ್ಚೇದನಕ್ಕೆ ಕೋರ್ಟ್ ಮೊರೆ ಹೊಗಿದ್ದರು.

ನ.24ರಂದು ವಿಚ್ಛೇದನ ಮೊಕದ್ದಮೆ ಸಂಭಂದ ಚಳ್ಳಕೆರೆ ನ್ಯಾಯಾಲಯಕ್ಕೆ ಹಾಜರಾಗಬೇಕಿದ್ದ, ಮುಂಜಾನೆ ಬಸ್ ನಿಲ್ದಾಣದಲ್ಲಿ ಆಶಾ ಬಸ್ ನಿಂದು ಇಳಿದು ಬರುತ್ತಿದ್ದ. ಈ ವೇಳೆ ಕಾದು‌ ಕುಳಿತಿದ್ದ ಗಂಡ ಕುಮಾರ್ ಆಕೆಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ.

Advertisements

ಹಲ್ಲೆಗೊಳಗಾದ ಆಶಾ ತಲೆಗೆ ಮತ್ತು ಕೈಗೆ ತೀವ್ರ ಗಾಯಗಳಾಗಿದ್ದು, ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ್ದು. ಸಾವು ಬದುಕಿನ ಮದ್ಯೆ ಹೋರಾಟ ನಡೆಸಿದ್ದ ಆಕೆಯನ್ನು ನಂತರ ಹೆಚ್ಚಿನ ಚಿಕಿತ್ಸೆಗೆ‌ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ..

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿ ಕಾರ್ಯಪ್ರವೃತ್ತರಾದ  ಚಳ್ಳಕೆರೆ ಪೊಲೀಸರು ಆರೋಪಿ ಗಂಡನನ್ನು ಪತ್ತೆ ಹಚ್ಚಿ ತಮ್ಮ ವಶಕ್ಕೆ ಪಡೆದಿದ್ದಾರೆ. ಇನ್ನೂ ಹೆಚ್ಚಿನ ಮಾಹಿತಿ ತನಿಖೆ‌ ನಂತರ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X