ಚಿತ್ರದುರ್ಗ | ಅಕ್ರಮವಾಗಿ ವಾಸ: ಗಾರ್ಮೆಂಟ್ಸ್ ಕೆಲಸದಲ್ಲಿದ್ದ ಇಬ್ಬರು ಬಾಂಗ್ಲಾ ಪ್ರಜೆಗಳ ಬಂಧನ

Date:

Advertisements

ಉಡುಪು ತಯಾರಿಕಾ ಕೈಗಾರಿಕಾ ಘಟಕದಲ್ಲಿ (ಗಾರ್ಮೆಂಟ್ಸ್) ಕೆಲಸ ಮಾಡುತ್ತಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಚಿತ್ರದುರ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ಡಿವೈಎಸ್ಪಿ ದಿನಕರ್ ನೇತೃತ್ವದಲ್ಲಿ ಗಾರ್ಮೆಂಟ್ಸ್ ಗಳ ಮೇಲೆ ದಾಳಿ ನಡೆದಿದ್ದು, ಬಾಂಗ್ಲಾ ಪ್ರಜೆಗಳನ್ನ ವಶಕ್ಕೆ ಪಡೆಯಲಾಗಿದೆ‌.

ಆರು ಜನ ನುಸುಳುಕೋರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಇವರಲ್ಲಿ ಶೇಕ್ ಶೈಪುರ್ ರೆಹಮಾನ್ ಹಾಗೂ ಸುಮನ್ ಹುಸೇನ್ ಎಂಬುವವರು ಬಾಂಗ್ಲಾದೇಶದಿಂದ ಭಾರತಕ್ಕೆ ಅಕ್ರಮವಾಗಿ ನುಸುಳಿರುವ ಮಾಹಿತಿ ಖಚಿತವಾಗಿರುವ ಮಾಹಿತಿ ಇದೆ. ಬಹುತೇಕರ ಬಳಿ ಪಶ್ಚಿಮ ಬಂಗಾಳದ ಆಧಾರ್ ಕಾರ್ಡ್ ಪತ್ತೆಯಾಗಿದೆ.

Advertisements
ಚಿತ್ರದುರ್ಗ 14

ಚಿತ್ರದುರ್ಗ ಡಿವೈಎಸ್ಪಿ ದಿನಕರ್, ಸಿಪಿಐ ಗುಡ್ಡಪ್ಪ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಕೋಟೆ ಪೊಲೀಸ್ ಠಾಣೆ, ಗ್ರಾಮಾಂತರ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಚಿತ್ರದುರ್ಗ ಎಸ್ಪಿ ರಂಜಿತ್ ಕುಮಾರ್ ಬಂಡಾರು ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ.

ಕರ್ನಾಟಕದ ಪೊಲೀಸರು ಕಳೆದ ಹಲವು ತಿಂಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದು, ನಾಡಿನಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಬಾಂಗ್ಲಾದೇಶ ಪ್ರಜೆಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ. ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದ ನಾಲ್ವರು ಬಾಂಗ್ಲಾದೇಶ ಪ್ರಜೆಗಳನ್ನು ಇದೇ ವರ್ಷ ಎಪ್ರಿಲ್ ನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇವರ ಬಳಿ ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ, ರೇಷನ್ ಕಾರ್ಡ್, ಆಯುಷ್ಮಾನ್ ಕಾರ್ಡ್, ಮಜ್ದೂರ್ ಕಾರ್ಡ್, ವೋಟರ್ ಐಡಿ ಪತ್ತೆಯಾಗಿದ್ದವು.

ಇದನ್ನು ಓದಿದ್ದಿರಾ? ದಾವಣಗೆರೆ | ವಿವಿಧ ಬೇಡಿಕೆಗಳ ಅನುಷ್ಠಾನಕ್ಕೆ ಒತ್ತಾಯಿಸಿ ಎಐಕೆಕೆಎಂಎಸ್ ಪ್ರತಿಭಟನೆ

ಶಿವಮೊಗ್ಗದ ಜಯನಗರ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿದ್ದ ಏಳು ಮಂದಿ ಬಾಂಗ್ಲಾದೇಶಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಏಳು ಜನರ ಬಳಿ ಮಂಗಳೂರು ವಿಳಾಸದ ಗುರುತಿನ ಚೀಟಿಗಳು ಪತ್ತೆಯಾಗಿದ್ದವು. ಅಲ್ಲದೇ, ಉಡುಪಿಯಲ್ಲೂ ಮೀನಿನ ಬಂದರು ದಕ್ಕೆಯಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದ ಕೆಲವು ಮಂದಿಯನ್ನು ಇತ್ತೀಚೆಗೆ ಬಂಧಿಸಲಾಗಿತ್ತು.

Irshad Venoor
Website |  + posts

ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಇರ್ಷಾದ್ ವೇಣೂರು
ಇರ್ಷಾದ್ ವೇಣೂರುhttps://eedina.com
ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X