ಚಿತ್ರದುರ್ಗ | ಬಸ್‌ ನಿಲ್ದಾಣದ ಅವ್ಯವಸ್ಥೆಗೆ ಉಪಲೋಕಾಯುಕ್ತ ನ್ಯಾ. ಫಣೀಂದ್ರ ಆಕ್ರೋಶ

Date:

ಚಿತ್ರದುರ್ಗ ನಗರದ ಬಸ್‌ ನಿಲ್ದಾಣಕ್ಕೆ ಅನಿರೀಕ್ಷಿತ ಭೇಟಿ ನೀಡಿದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ ಎನ್‌ ಫಣೀಂದ್ರ, ಅಲ್ಲಿನ ಅವ್ಯವಸ್ಥೆ ಕಂಡು ವಿಭಾಗೀಯ ನಿಯಂತ್ರಣಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

- Advertisement -

“ಮೂರು ದಿನಗಳ ಕಾಲ ಜಿಲ್ಲೆಗೆ ಲೋಕಾಯುಕ್ತರು ಭೇಟಿ ನೀಡುತ್ತಿರುವುದು ತಿಳಿದಿದ್ದರೂ ಬಸ್ ನಿಲ್ದಾಣ ಸ್ವಚ್ಛವಾಗಿಟ್ಟುಕೊಳ್ಳದವರು ಬೇರೆ ಸಮಯದಲ್ಲಿ ಹೇಗಿಟ್ಟುಕೊಳ್ಳುತ್ತೀರಿ? ಇಷ್ಟು ಅವ್ಯವಸ್ಥೆ, ಅನೈರ್ಮಲ್ಯದ ಬಸ್ ನಿಲ್ದಾಣವನ್ನು ನಾನು ಎಲ್ಲೂ ನೋಡಿಲ್ಲ, ಜಿಲ್ಲಾ ಕೇಂದ್ರದಲ್ಲೇ ಇಷ್ಟು ಅವ್ಯವಸ್ಥೆಯಿದ್ದರೆ ಇನ್ನು ಗ್ರಾಮಾಂತರ ನಿಲ್ದಾಣಗಳ ಪರಿಸ್ಥಿತಿ ಹೇಗಿದೆಯೋ” ಎಂದು ತೀವ್ರ ಅಸಮಾಧಾನಗೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸ್ವಚ್ಛತೆಗಾಗಿ ಏಜೆನ್ಸಿ ನೇಮಿಸಿರುವ ಬಗ್ಗೆ ಮಾಹಿತಿ ಪಡೆದ ಅವರು “ಬಸ್‌ ನಿಲ್ದಾಣದ ಸ್ವಚ್ಛತೆ ಬಗ್ಗೆ ಇಷ್ಟು ನಿರ್ಲಕ್ಷ್ಯ ತೋರಿರುವ ಏಜೆನ್ಸಿ ವಿರುದ್ಧ ಇನ್ನೂ ಏಕೆ ಕ್ರಮ ಕೈಗೊಂಡಿಲ್ಲ, ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಏನು ನಿಯಂತ್ರಣ ಮಾಡಿದ್ದೀರಿ?. ಅವ್ಯವಸ್ಥೆ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಾಗಿದೆ ಉತ್ತರ ನೀಡಿ” ಎಂದು ತಾಕೀತು ಮಾಡಿದರು.

ಉಪಲೋಕಾಯುಕ್ತರು ಬಸ್‌ ನಿಲ್ದಾಣ ಪರಿಶೀಲನೆ ಮಾಡುವುದನ್ನು ನೋಡಿ ಸಾರ್ವಜನಿಕರು ಹಾಗೂ ಪ್ರಯಾಣಿಕರು ನಿಲ್ದಾಣದ ಹಾಗೂ ಬಸ್‌ಗಳ ನಿರ್ವಹಣೆಯ ಅವ್ಯವಸ್ಥೆ ಬಗ್ಗೆ ದೂರುಗಳ ಸುರಿಮಳೆಗೈದಿದ್ದು, “ಹೊಸದುರ್ಗ ಮಾರ್ಗದಲ್ಲಿ ಸಂಚರಿಸಲು ಮುಂಜಾನೆ ಯಾವುದೇ ಬಸ್ ಇಲ್ಲ. ಹಾಸನಕ್ಕೆ ಹೋಗುವ ಮಾರ್ಗದಲ್ಲಿ ಬಸ್‌ಗಳು ವಿಳಂಬವಾಗುತ್ತಿವೆ. ವ್ಯವಸ್ಥಾಪಕರು ಹಾಗೂ ನಿಯಂತ್ರಣಾಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ” ಎಂದು ಶಿಕ್ಷಕರು ಸೇರಿದಂತೆ ಇತರೆ ನೌಕರರು ಅಳಲು ತೋಡಿಕೊಂಡರು.

ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಪೊಲೀಸ್ ಉಪಠಾಣೆ, ಮಹಿಳಾ ವಿಶ್ರಾಂತಿ ಗೃಹ, ಮಾತೃ ಮನೆ, ಪುರುಷರ ಶೌಚಾಲಯ, ಹೋಟೆಲ್ ಸೇರಿದಂತೆ ನಿಲ್ದಾಣದ ಆವರಣದಲ್ಲಿ ಸಂಚರಿಸಿ ನ್ಯಾ. ಕೆ ಎನ್ ಫಣೀಂದ್ರ ವೀಕ್ಷಣೆ ನಡೆಸಿದರು. ಈ ವೇಳೆ ಡ್ರೈನೇಜ್ ತುಂಬಿ ಹರಿಯುತ್ತಿರುವುದನ್ನು ಗಮನಿಸಿದರು.

“ನೀವು ಪ್ರತಿನಿತ್ಯವೂ ವೀಕ್ಷಣೆ ನಡೆಸಿ, ಕ್ರಮ ಕೈಗೊಂಡಿದ್ದರೆ, ಇಷ್ಟೊಂದು ಅವ್ಯವಸ್ಥೆ ಇರುತ್ತಿರಲಿಲ್ಲ. ಕಣ್ಣುಮುಚ್ಚಿ ಕುಳಿತ್ತಿದ್ದೀರಿ, ಕರ್ತವ್ಯಲೋಪ ಮೆಲ್ನೋಟಕ್ಕೆ ಎದ್ದು ಕಾಣುತ್ತಿದೆ. ನಾಳೆ ಸಂಜೆಯೊಳಗೆ ಮತ್ತೊಮ್ಮೆ ಬಸ್ ನಿಲ್ದಾಣಕ್ಕೆ ಭೇಟಿ ನೀಡುತ್ತೇನೆ. ನಿಲ್ದಾಣದಲ್ಲಿ ವ್ಯವಸ್ಥೆ ಅಚ್ಚುಕಟ್ಟಾಗಿ ಇರದಿದ್ದರೆ, ನಿಮ್ಮನ್ನೂ ಕೆಲಸದಿಂದ ತೆಗೆಯಲು ಸರ್ಕಾರಕ್ಕೆ ಶಿಫಾರಸು ಮಾಡುತ್ತೇನೆ” ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗೆ ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ಧೀರಾ? ಹಾವೇರಿ | ಗಾಂಜಾ, ಮಟ್ಕಾ, ಇಸ್ಪೀಟ್ ಕ್ಲಬ್ ಹೆಸರಲ್ಲಿ ಯುವಕರು ಬಲಿಪಶು: ಕಡಿವಾಣ ಹಾಕುವಂತೆ ಕರವೇ ಗಜಪಡೆ ಆಗ್ರಹ

ಉಪ ಲೋಕಾಯುಕ್ತ ಭೇಟಿ ವೇಳೆ ಜಿಲ್ಲಾಧಿಕಾರಿ ಟಿ ವೆಂಕಟೇಶ್, ಜಿಪಂ ಸಿಇಓ ಎಸ್ ಜೆ ಸೋಮಶೇಕರ್, ಲೋಕಾಯುಕ್ತದ ಅಪರ ನಿಬಂಧಕ ಪೃಥ್ವಿರಾಜ್ ವರ್ಣೇಕರ್, ಜಿ ವಿ ವಿಜಯಾನಂದ, ಉಪಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಹಾಗೂ ಸಿವಿಲ್ ನ್ಯಾಯಾಧೀಶ ಕಿರಣ್ ಪಿ ಎಂ ಪಾಟೀಲ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾ. ಎಂ ವಿಜಯ್, ಅಪರ ಜಿಲ್ಲಾಧಿಕಾರಿ ಬಿ ಟಿ ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್ ಜೆ ಕುಮಾರಸ್ವಾಮಿ, ಲೋಕಾಯುಕ್ತ ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್ ವಾಸುದೇವರಾಮ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...