ಚಿತ್ರದುರ್ಗ | ಗ್ಯಾರಂಟಿ ಯೋಜನೆಗೆ ಎಸ್‌ಸಿಪಿ, ಟಿಎಸ್‌ಪಿ ಹಣ ಬಳಕೆ; ಸಾವಿತ್ರಿ ಬಾಫುಲೆ ಮಹಿಳಾ ಸಂಘ ಖಂಡನೆ

Date:

Advertisements

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗೆ ಎಸ್‌ಸಿಪಿ, ಟಿಎಸ್‌ಪಿ ಹಣ ಬಳಸದಂತೆ ಸಾವಿತ್ರಿ ಬಾಫುಲೆ ಮಹಿಳಾ ಸಂಘಟನೆಯ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಘಟಕದಿಂದ ಚಿತ್ರದುರ್ಗ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.

ಚಿತ್ರದುರ್ಗದಲ್ಲಿ ಮನವಿ ಸಲ್ಲಿಸಿ ಮಾತನಾಡಿದ ಮಹಿಳಾ ಮುಖಂಡರು, “1980ರಲ್ಲಿ ವಿಶೇಷ ಘಟಕ ಯೋಜನೆ(ಎಸ್‌ಸಿಪಿ), ಬುಡಕಟ್ಟ ಉಪ ಯೋಜನೆ(ಟಿಎಸ್‌ಪಿ) ಜಾರಿಗೋಳಿಸಿದ್ದು, ಪರಿಶಿಷ್ಟ ಜಾತಿ/ಪಂಗಡದವರು ಸಾಮಾನ್ಯ ಜಾತಿಯವರಂತೆ ನಿಗಧಿತ ಸಮಯದೊಳಗೆ ಅಭಿವೃದ್ಧಿ ಆಗಬೇಕೆಂದು ರೂಪಿಸಿದ ಯೋಜನೆಯಾಗಿದೆ. ಈ ಯೋಜನೆ ಜಾರಿಯಾಗಿ ಸುಮಾರು 44 ವರ್ಷ ಕಳೆದರೂ ಪರಿಶಿಷ್ಟ ಜಾತಿ/ಪಂಗಡಗಳು ಸಾಮಾನ್ಯ ಜಾತಿಯವರಂತೆ ಯಾವುದೇ ವಿಷಯದಲ್ಲಿ ಅಭಿವೃದ್ಧಿಯಾಗಿಲ್ಲ. ಆದರೆ ಪ್ರತಿ ವರ್ಷ ಹಣ ಮಾತ್ರ ದುರ್ಬಳಕೆಯಾಗುತ್ತಿದೆ. ಇದನ್ನು ಸಂಪೂರ್ಣವಾಗಿ ಇದೇ ಯೋಜನೆಗಳಿಗೆ ಬಳಸಬೇಕು” ಎಂದು ಆಗ್ರಹಿಸಿದರು.

ದಾವಣಗೆರೆಯಲ್ಲಿ ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿದ ಸಂಘಟನೆಯ ನಾಯಕಿ ರೇಣುಕಾ ಮಾತನಾಡಿ, “ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದು, ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣವನ್ನು ಬಳಸುತ್ತಿದೆ. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣ ಬಳಸಬೇಡಿ” ಎಂದು ಮನವಿ ಮಾಡಿದರು.

Advertisements

“ಪರಿಶಿಷ್ಟ ಜಾತಿ/ಪಂಗಡದವರ ಅಭಿವೃದ್ಧಿಗೆ ಮಾರಕವಾಗುತ್ತಿರುವ 2013ರ ಕಾಯಿದೆಯ 7ಬಿ ಮತ್ತು 7ಸಿ ರದ್ದುಪಡಿಸಿ, ಕಾಯಿದೆಯಲ್ಲಿ ಆಡಳಿತಾತ್ಮಕ ವೆಚ್ಚಗಳನ್ನು ಹೊರತುಪಡಿಸಿ ಎಂದು ತಿಳಿಸಿದರೂ, ಮೀಸಲಿರುವ ಹಣದಲ್ಲಿ ಆಡಳಿತಾತ್ಮಕ ವೆಚ್ಚಗಳನ್ನು ಮಾಡಿರುವ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಬೊಮ್ಮನಕಟ್ಟೆ ವಾರ್ಡ್‌ಗೆ ಆಧುನಿಕ ಚಿತಾಗಾರ ವ್ಯವಸ್ಥೆ ಕಲ್ಪಿಸಿಕೊಡಲು ಮನವಿ

ಸಾವಿತ್ರಿ ಬಾಫುಲೆ ಮಹಿಳಾ ಸಂಘಟನೆಯ ಕಾರ್ಯದರ್ಶಿ ಡಿ ಸುಧಾ, ಪದಾಧಿಕಾರಿಗಳಾದ ಪಿ. ಉಮಾ, ಭಾಗ್ಯಮ್ಮ, ಅನ್ನಪೂರ್ಣ, ರುದ್ರಮ್ಮ, ಕವನ, ಮಂಜುಳಾ, ಶಂಶಿದಾಬಾನು, ಜ್ಯೋತಿ, ರಜಿಯಾ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X