ಚಿತ್ರದುರ್ಗ | ಗ್ರಾಮಗಳಿಗಿಲ್ಲ ಸರಿಯಾದ ಬಸ್‌ ವ್ಯವಸ್ಥೆ; ಹೆದ್ದಾರಿಯಲ್ಲಿ ಬಸ್‌ಗಾಗಿ ಕಾಯುವ ವಿದ್ಯಾರ್ಥಿಗಳು

Date:

ಚಿತ್ರದುರ್ಗ ಜಿಲ್ಲೆಯ ಅದೆಷ್ಟೋ ಹಳ್ಳಿಗಳ ವಿದ್ಯಾರ್ಥಿಗಳು ಸರಿಯಾದ ಬಸ್‌ ವ್ಯವಸ್ಥೆ ಇಲ್ಲದ ಕಾರಣ ಪ್ರತೀ ನಿತ್ಯ ಪರದಾಡುವ ಸ್ಥಿತಿ ಇದೆ.

ಸಮಯಕ್ಕೆ ಸರಿಯಾಗಿ ಬಸ್‌ ಸಿಗದೆ, ವಿದ್ಯಾರ್ಥಿಗಳು ವಾರದಲ್ಲಿ ಎರಡು-ಮೂರು ದಿನ ಮೊದಲ ತರಗತಿ ತಪ್ಪಿಸಿಕೊಳ್ಳುವುದು ಸಾಮಾನ್ಯವಾಗಿದೆ. ಹೆದ್ದಾರಿಗಳಲ್ಲಿ ಜೀವ ಕೈಯಲ್ಲಿ ಹಿಡಿದು ನಿಲ್ಲುವ ಸ್ಥಿತಿ ಈ ಮಕ್ಕಳದ್ದು. ಮಳೆಗಾಲದಲ್ಲಿ ಈ ಸಂಕಷ್ಟ ಇನ್ನೂ ಹೆಚ್ಚುತ್ತದೆ.

ಗ್ರಾಮೀಣ ಭಾಗಗಳಿಂದ ನಿತ್ಯ ಸಾವಿರಾರು ವಿದ್ಯಾರ್ಥಿಗಳು ನಗರದ ಶಾಲಾ-ಕಾಲೇಜುಗಳಿಗೆ ಬರುತ್ತಾರೆ. ಗ್ರಾಮೀಣ ಸಾರಿಗೆ ಬಸ್‌ಗಳು ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್‌ ರಸ್ತೆಯಲ್ಲಿ ಸಾಗಬೇಕು. ಆದರೆ, ಚಿತ್ರದುರ್ಗ-ದಾವಣಗೆರೆ, ಚಿತ್ರದುರ್ಗ- ಹಿರಿಯೂರು, ಹಿರಿಯೂರು-ಚಳ್ಳಕೆರೆ, ಚಳ್ಳಕೆರೆ-ಮೊಳಕಾಲ್ಮೂರು ಭಾಗದಲ್ಲಿ ಸಂಚರಿಸುವ ಬಹುತೇಕ ಬಸ್‌ಗಳು ಹೆದ್ದಾರಿಯಲ್ಲೇ ಸಾಗುತ್ತಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಿಜಾಪುರ-ಗೊಲ್ಲರಹಟ್ಟಿ, ಹಿರೇಕಬ್ಬಿಗೆರೆ-ಗೊಲ್ಲರಹಟ್ಟಿ, ಕಬ್ಬಿಗೆರೆ, ಅಡವಿಗೊಲ್ಲರಹಳ್ಳಿ, ಜಾಲಿಕಟ್ಟೆ, ಈರಜ್ಜನಹಟ್ಟಿ, ಸಿರಿಗೆರೆ, ಸೊಲ್ಲಾಪುರ, ಹಿರಿಯೂರು, ಹುಳಿಯೂರು ಮಾರ್ಗದ ಗ್ರಾಮಗಳಲ್ಲಿ ಬೆಳಗ್ಗೆ 8ಕ್ಕೆ ಬಸ್‌ ವ್ಯವಸ್ಥೆ ಇಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ.

ನಿತ್ಯ ಮುಂಜಾನೆ ಶಾಲೆ-ಕಾಲೇಜಿಗೆ ಬರಲು ಸೂಕ್ತ ಬಸ್ ಸೌಲಭ್ಯ ಇಲ್ಲ. ಬರುವ ಕೆಲ ಬಸ್‌ಗಳನ್ನೂ ನಿಲುಗಡೆ ಮಾಡುವುದಿಲ್ಲ. ಕೆಲವರು ವಿದ್ಯಾರ್ಥಿಗಳನ್ನು ಬಸ್‌ಗೆ ಹತ್ತಿಸಿಕೊಳ್ಳುವುದಿಲ್ಲ. ಇದರಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಕೆಎಸ್‌ಆರ್‌ಟಿಸಿ ಬಸ್ ಸಿಗದಿದ್ದರೆ, ಖಾಸಗಿ ಬಸ್‌ಗೆ ಹೆಚ್ಚಿನ ಹಣ ತೆತ್ತು ಹೋಗಬೇಕು. ಹೆಚ್ಚಿನ ಹಣ ಪಾವತಿಸಲಾಗದೆ ಅನೇಕ ವಿದ್ಯಾರ್ಥಿಗಳು ಮನೆಗೆ ವಾಪಸ್ ಹೋಗುತ್ತಿದ್ದಾರೆ. ಬಸ್ ಸಮಸ್ಯೆಯಿಂದ ವಿದ್ಯಾರ್ಥಿಗಳು ಮುಂಜಾನೆ 6 ಗಂಟೆಯಿಂದಲೇ ಬಸ್‌ಗಾಗಿ ಕಾಯುತ್ತಿದ್ದಾರೆ.

ಚಿತ್ರದುರ್ಗ, ಚಳ್ಳಕೆರೆ, ಹೊಸದುರ್ಗ ಹಾಗೂ ಪಾವಗಡ ಘಟಕಗಳಿವೆ. ಹೊಳಲ್ಕೆರೆ, ಮೊಳಕಾಲ್ಮೂರು ಹಾಗೂ ಹಿರಿಯೂರು ಘಟಕಗಳು ಕಾರ್ಯರಂಭದ ಹಂತದಲ್ಲಿವೆ. ಆದಷ್ಟು ಬೇಗ ನಮ್ಮ ಊರುಗಳಿಗೆ ಸಮಪರ್ಕ ಬಸ್‌ ವ್ಯವಸ್ಥೆ ಕಲ್ಪಿಸಿ ಎಂದು ವಿದ್ಯಾರ್ಥಿಗಳು ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನಲ್ಲಿ ನೀರು ಸೋರಿಕೆ ಪತ್ತೆ ಹಚ್ಚಲಿವೆ ರೊಬೋಟ್‌ಗಳು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ನೀರಿನ ಸಮಸ್ಯೆ ತಲೆದೂರಿದೆ. ಈ ಹಿನ್ನೆಲೆ,...

ದಾವಣಗೆರೆ | ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಆಗ್ರಹ

ದಾವಣಗೆರೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಹಲವಾರು ವರ್ಷಗಳಿಂದ ಬೇಡಿಕೆ ಇಡಲಾಗಿದೆ. ಸರ್ಕಾರ...

ಕಲಬುರಗಿ | ‘ಅಂಬೇಡ್ಕರ್ ಮತ್ತು ಗಾಂಧೀಜಿ – ಒಂದು ನದಿಯ ಎರಡು ದಡಗಳು’

ಬಾಬಾ ಸಾಹೇಬ್ ಅವರ 133ನೇ ಜಯಂತಿಯ ದಿನದಂದ ನಾವು ಹೆಚ್ಚೆಚ್ಚು ಎಷ್ಟೇ...

ಗದಗ | ದೊಡ್ಡೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್...