ಚಿತ್ರದುರ್ಗ | ಮತದಾನ ಪ್ರಮಾಣ ಹೆಚ್ಚಿಸಲು ವಾಕಥಾನ್ ಜಾಥಾ

Date:

Advertisements

ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ಕಡಿಮೆ ಮತದಾನವಾಗಿರುವ ಮತಗಟ್ಟೆ ಪ್ರದೇಶಗಳಲ್ಲಿ ಮತದಾನ ಹೆಚ್ಚಳ ಮಾಡುವ ಸಲುವಾಗಿ ಗುರುವಾರ (ಮಾ.28) ವಾಕಥಾನ್ ಜಾಥಾ ಮೂಲಕ ಜಾಗೃತಿ ಮೂಡಿಸಲಾಯಿತು.

ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಚಿತ್ರದುರ್ಗ ನಗರದ ನಗರಸಭಾ ವ್ಯಾಪ್ತಿಯ ಕಡಿಮೆ ಮತದಾನವಾಗಿರುವ ನಗರದ ದೊಡ್ಡಪೇಟೆ, ಕರುವಿನಕಟ್ಟೆ, ಜೋಗಿಮಟ್ಟಿ ರಸ್ತೆ ಮತಗಟ್ಟೆ ಪ್ರದೇಶಗಳಲ್ಲಿ ವಾಕಥಾನ್ ಮೂಲಕ ಮತದಾನದ ಕುರಿತು ಅರಿವು ಮೂಡಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಎಸ್.ಜೆ.ಸೋಮಶೇಖರ್, ಚಿತ್ರದುರ್ಗ ನಗರದ ನಗರಸಭಾ ವ್ಯಾಪ್ತಿಯ ಕಡಿಮೆ ಮತದಾನ ಪ್ರಮಾಣ ದಾಖಲಾಗಿರುವ ಮತಗಟ್ಟೆ ಪ್ರದೇಶಗಳಲ್ಲಿ ಮತದಾನ ಜಾಗೃತಿಗಾಗಿ ವಾಕ್‌ಥಾನ್, ಮ್ಯಾರಥಾನ್ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ, ಮನೆ ಮನೆಗೆ ತೆರಳಿ ಮತದಾನದ ಪ್ರಮಾಣ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.

Advertisements

ಮತದಾನ ಜಾಗೃತಿಗಾಗಿ ಹಮ್ಮಿಕೊಂಡಿದ್ದ ವಾಕಥಾನ್ ಜಾಥಾ ಕಾರ್ಯಕ್ರಮದಲ್ಲಿ ಮತ ಚಲಾಯಿಸೋಣ ಪ್ರಜಾಪ್ರಭುತ್ವ ಗಟ್ಟಿಗೊಳಿಸೋಣ. ಮತದಾನ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ, ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಪ್ರಜಾಪ್ರಭುತ್ವ ಬಲಗೊಳಿಸಿ. ಮತ ಚಲಾಯಿಸಿ ಪ್ರಜಾಪ್ರಭುತ್ವ ಉಳಿಸಿ. ಓದು ವ್ಯಕ್ತಿತ್ವವನ್ನು ರೂಪಿಸುತ್ತದೆ. ಮತದಾನ ದೇಶವನ್ನು ರೂಪಿಸುತ್ತದೆ. ನೇತ್ರದಾನ ಮಹಾದಾನ, ಮತದಾನ ಶ್ರೇಷ್ಟದಾನ ಎಂಬಿತ್ಯಾದಿ ಜಾಗೃತಿ ಫಲಕಗಳು ಗಮನ ಸೆಳೆದವು.

ಚಿತ್ರದುರ್ಗ ನಗರದ ಐತಿಹಾಸಿಕ ಕೋಟೆ ಮುಂಭಾಗದ ಪ್ರಾರಂಭವಾದ ವಾಕಥಾನ್, ಫಿಲ್ಟರ್ ಹೌಸ್, ಸಂಪಿಗೆ ಸಿದ್ದೇಶ್ವರ ಶಾಲೆ, ದೊಡ್ಡಪೇಟೆ, ರಂಗಯ್ಯನಬಾಗಿಲು, ಉಜ್ಜಿನಿ ಮಠದ ರಸ್ತೆ, ಕರುವಿನಕಟ್ಟೆ ವೃತ್ತ, ಜೋಗಿಮಟ್ಟಿ ರಸ್ತೆ, ಪಟ್ಟದ ಪರಮೇಶ್ವರ ಶಾಲೆಯ ಮೂಲಕ ಜಿಲ್ಲಾ ಕ್ರೀಡಾಂಗಣದವರೆಗೂ ಜಾಥಾ ನಡೆಯಿತು.

ಜಾಥಾದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಎಸ್.ಜೆ. ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ತಾಲೂಕು ಆರೋಗ್ಯಾಧಿಕಾರಿ ಡಾ. ಬಿ.ವಿ.ಗಿರೀಶ್, ನಗರಸಭೆ ಪೌರಾಯಕ್ತರು ಎಂ.ರೇಣುಕಾ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಒ.ಪರಮೇಶ್ವರಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X