ಚಿತ್ರದುರ್ಗ | ವಾಣಿವಿಲಾಸ ಸಾಗರ ಜಲಾಶಯದ ನೀರು ಆಂಧ್ರಕ್ಕೆ; ರೈತರಿಂದ ಅಧಿಕಾರಿಗಳಿಗೆ ಘೆರಾವ್

Date:

Advertisements

ವಾಣಿವಿಲಾಸ ಸಾಗರ ಜಲಾಶಯದಿಂದ ಚಳ್ಳಕೆರೆಗೆ ನೀರು ಹರಿಸುವುದು ಬಿಟ್ಟು ಆಂಧ್ರಕ್ಕೆ ಕಳುಹಿಸುತ್ತಿರುವುದನ್ನು ಖಂಡಿಸಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ನೀರಾವರಿ ಇಲಾಖೆ ಮುಂದೆ ಪ್ರತಿಭಟನೆ ಮಾಡಿದ ರೈತರು, ಬಾಗಿಲು ಬಂದ್ ಮಾಡಿ ಇಲಾಖೆ ಅಧಿಕಾರಿಗಳಿಗೆ ಘೆರಾವ್ ಹಾಕಿದರು.

ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಕಸವನಹಳ್ಳಿ ರಮೇಶ್ ಮಾತನಾಡಿ, ಕಳೆದ 15 ದಿನಗಳಿಂದ ವಾಣಿವಿಲಾಸ ಸಾಗರದಿಂದ ವೇದಾವತಿ ನದಿ ಮೂಲಕ ಚಳ್ಳಕೆರೆ ತಾಲೂಕಿನ ಬ್ಯಾರೇಜ್‌ಗಳಿಗೆ ನೀರು ಬಿಡುವಂತೆ ಸರ್ಕಾರದ ಆದೇಶ ಇದ್ದರು ಕೂಡ, ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ. ಕಾಣದ ಕೈಗಳ ಕೈವಾಡಕ್ಕೆ ಬಲಿಯಾಗಿ ವಾಣಿವಿಲಾಸ ಸಾಗರ ಜಲಾಶಯದ ನೀರನ್ನು ಪಕ್ಕದ ಆಂಧ್ರಕ್ಕೆ ಪೋಲು ಮಾಡುತ್ತಿದ್ದಾರೆ. ಇದನ್ನು ತಕ್ಷಣ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ರೈತ ಸಂಘದ ಕೆ.ಟಿ. ತಿಪ್ಪೇಸ್ವಾಮಿ ಮಾತನಾಡಿ, ಸರ್ಕಾರದ ಆದೇಶ ಇದ್ದರೂ ಕೂಡ ಭದ್ರಾ ಜಲಾಶಯದಿಂದ ವಿವಿ ಸಾಗರಕ್ಕೆ ಹನಿ ನೀರು ಹರಿಸಲು ಸಾಧ್ಯವಾಗಲಿಲ್ಲ. ಆದರೆ, ಈಗ ಸರ್ಕಾರದ ಆದೇಶ ಇದೆ ಎಂದು ಯದ್ವಾ ತದ್ವಾ ನೀರು ಹರಿಸಲಾಗಿದೆ ಎಂದು ಆರೋಪಿಸಿದರು.

Advertisements

ಆಲೂರ್ ಸಿದ್ದರಾಮಣ್ಣ ಮಾತನಾಡಿ, ಇದೇ ರೀತಿ ನೀರು ಹರಿಸಿದರೆ ಜಲಾಶಯದ ನೀರು ಒಂದು ವರ್ಷದಲ್ಲಿ ಖಾಲಿಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ವಿಶ್ವೇಶ್ವರ ಜಲ ನಿಗಮದ ಮುಖ್ಯ ಇಂಜಿನಿಯರ್ ಪ್ರತಿಭಟನಾಕಾರರ ಜೊತೆ ದೂರವಾಣಿ ಮೂಲಕ ಮಾತನಾಡಿದಾಗ, ಇಂದೇ ನೀರು ನಿಲ್ಲಿಸಬೇಕು ಎಂದು ಒತ್ತಾಯಿಸಿದರು. ಅದಕ್ಕೆ, ಅರ್ಧ ದಿನ ನಿಲ್ಲಿಸಲಾಗುವುದು ಉಳಿದ ಇನ್ನರ್ಧವನ್ನು ನಾಳೆ ನಿಲ್ಲಿಸಲಾಗುವುದು ಎಂದು ಹೇಳಿದರು. ಇದಕ್ಕೆ ಹೋರಾಟಗಾರರು ಒಪ್ಪದೆ, ಇಂದೇ ನೀರು ಬಿಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿ ಧರಣಿ ಮುಂದುವರಿಸಿದರು. ಬಳಿಕ ಮುಖ್ಯ ಇಂಜಿನಿಯರ್ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಇಂದಿನಿಂದಲೇ ನೀರು ನಿಲ್ಲಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಲೂರಿನ ನಾಗರಾಜ್, ರವಿ, ಅಜ್ಜಯ್ಯ ರಾಮಾಂಜಿನಪ್ಪ, ಸತೀಶ್, ರಾಮ್ ಕುಮಾರ್, ಮಸ್ಕಲ್ ತಿಪ್ಪೇಸ್ವಾಮಿ, ತಿಮ್ಮರೆಡ್ಡಿ, ರಂಗಸ್ವಾಮಿ ಇತರರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X