ಚಿತ್ರದುರ್ಗ | ಹೆದ್ದಾರಿ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; 10 ಅಡಿಗೂ ಅಧಿಕ ಎತ್ತರಕ್ಕೆ ಹಾರಿಬಿದ್ದ ಮಹಿಳೆ ಸಾವು

Date:

ಕುಟುಂಬದವರೊಂದಿಗೆ ಹೆದ್ದಾರಿ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿಯಾದ ಪರಿಣಾಮ ಮಹಿಳೊಯೊಬ್ಬರು 10 ಅಡಿಗೂ ಅಧಿಕ ಎತ್ತರಕ್ಕೆ ಹಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆಸಿದೆ.

- Advertisement -

ಚಿತ್ರದುರ್ಗದ ಹೆದ್ದಾರಿ ದಾಟುತ್ತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಈ ಭೀಕರ ದೃಶ್ಯ ಸೆರೆಯಾಗಿದ್ದು, ಸ್ಥಳದಲ್ಲೇ ಆಕೆ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಚಿತ್ರದುರ್ಗದ ಹೆದ್ದಾರಿಯಲ್ಲಿ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳು ರಸ್ತೆ ದಾಟಲು ಪ್ರಯತ್ನಿಸುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರೊಂದು ಆಕೆಗೆ ಡಿಕ್ಕಿಯಾಗಿದ್ದು, ಕಾರು ಡಿಕ್ಕಿಯಾದ ರಭಸಕ್ಕೆ ಮಹಿಳೆ ಸುಮಾರು 10 ಅಡಿಗಳಷ್ಚು ಎತ್ತರಕ್ಕೆ ಹಾರಿ ಸುಮಾರು 20 ಅಡಿಗಳಷ್ಟು ದೂರದಲ್ಲಿ ಬಿದಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ 30 ಸೆಕೆಂಡುಗಳ ಕ್ಲಿಪ್‌ ಸೆರೆಯಾಗಿದೆ. ಕೆಳಕ್ಕೆ ಬಿದ್ದ ರಭಸಕ್ಕೆ ಅವರ ತಲೆಗೆ ತೀವ್ರ ಪೆಟ್ಟಾಗಿದ್ದು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಡಿಯೊದಲ್ಲಿ ಮತ್ತೊಬ್ಬ ವ್ಯಕ್ತಿ ಆಕೆಯನ್ನು ಪರೀಕ್ಷಿಸಲು ಧಾವಿಸುತ್ತಿರುವುದನ್ನು ತೋರಿಸಲಾಗಿದೆ.

ಮಹಿಳೆ ಮತ್ತು ಮಕ್ಕಳು ಹೆದ್ದಾರಿಯ ವಿಭಜಕದಿಂದ ಎರಡನೇ ಲೇನ್ ತಲುಪಿದಾಗ ಕಾರು ಅವರಿಗೆ ಡಿಕ್ಕಿ ಹೊಡೆದು ಅತಿ ವೇಗದಲ್ಲಿ ಪರಾರಿಯಾಗಿದೆ. ಡಿಕ್ಕಿಯಾಗುತ್ತಿದ್ದಂತೆಯೇ ಮಹಿಳೆ ಗಾಳಿಯಲ್ಲಿ ಹಾರಿ ಮೂರು ಲೇನ್‌ಗಳ ದೂರದಲ್ಲಿ ನೆಲಕ್ಕೆ ಬಿದ್ದಿದ್ದು, ಆಕೆಯನ್ನು ಹಿಂಬಾಲಿಸುತ್ತಿದ್ದ ಇನ್ನೊಬ್ಬ ಮಹಿಳೆ ಮತ್ತು ಮಕ್ಕಳು ಸಾವಿನಿಂದ ಪಾರಾಗಿದ್ದಾರೆ. ಡಿಕ್ಕಿ ಬಳಿಕ ಕಾರು ಚಾಲಕ ಪರಾರಿಯಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾಸನ | ಆನೆ ದಾಳಿಗೆ ಕಾರ್ಮಿಕ ಬಲಿ

ಪೊಲೀಸ್ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಕಾರು ಮತ್ತು ಚಾಲಕನನ್ನು ಗುರುತಿಸಲು ಪ್ರಯತ್ನಗಳು ನಡೆಯುತ್ತಿವೆ. ಈ ಕಾರು ಡಿಕ್ಕಿಯಾದ ವಿಡಿಯೊ ವ್ಯಾಪಕ ವೈರಲ್ ಆಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...