ಚಿತ್ರದುರ್ಗ | ಇನ್ನೊವಾ ಕಾರು ಮತ್ತು ಲಾರಿ ನಡುವೆ ಬೀಕರ ಅಪಘಾತ. ಐವರು ಸಾವು.

Date:

ಇನ್ನೊವಾ ಕಾರು ಮತ್ತು ಲಾರಿ ನಡುವಿನ ಭೀಕರ ಅಪಘಾತಕ್ಕೆ ಬೆಂಗಳೂರಿನ ಮೂಲದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಬಳಿ ರಾಷ್ಟ್ರೀಯ ಹೆದ್ದಾರಿ 48ರ ರಿಂಗ್ ರಸ್ತೆಯ ಹೊರವಲಯದ ಸಿಬಾರ ಬಳಿ ನಡೆದಿದೆ.

- Advertisement -

ಬೆಂಗಳೂರು ಮೂಲದ ಬಿ ಎಂ ಟಿ ಸಿ ನಿವೃತ್ತ ನೌಕರ ಶಾಂತಮೂರ್ತಿ, ರುದ್ರಸ್ವಾಮಿ, ಮಲ್ಲಿಕಾರ್ಜುನ ಹಾಗೂ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಎಲ್ಲರೂ ಧಾರವಾಡದ ಬಳಿ ಇರುವ ಸೌದತ್ತಿ ರೇಣುಕಾ ಎಲ್ಲಮ್ಮ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಪಡೆದು ವಾಪಸ್ ಬೆಂಗಳೂರಿಗೆ ಹಿಂತಿರುಗುತ್ತಿದ್ದರು ಎನ್ನಲಾಗಿದೆ. ಅತಿ ವೇಗವಾಗಿ ಚಲಿಸುತ್ತಿದ್ದ ಇನೋವಾ ಕಾರು ಚಾಲಕನ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಯಲ್ಲಿ ನಿಲ್ಲಿಸಿದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು ಸಂಪೂರ್ಣ ನುಜ್ಜುಗುಜ್ಜಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
1001661419
ಬೆಂಗಳೂರು ಮೂಲದ ಇನ್ನೊವಾ ಕಾರು

“ಘಟನೆ ಚಿತ್ರದುರ್ಗ ಸಿಬಾರ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅತಿ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣಕ್ಕೆ ಸಿಗದೇ ರಸ್ತೆ ಬದಿಯಲ್ಲಿ ನಿಲ್ಲಿಸಿದ ಲಾರಿಗೆ ಬಂದು ಅಪ್ಪಳಿಸಿದ್ದು ಅಪಘಾತದ ತೀವ್ರತೆಗೆ ಐವರು ಕೂಡ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಲಾರಿ ಚಾಲಕರು ರಸ್ತೆ ಬದಿಯಲ್ಲಿ ಅಲ್ಲಲ್ಲಿ ಲಾರಿಗಳನ್ನು ನಿಲ್ಲಿಸುವುದು ಈ ತರಹದ ಘಟನೆಗಳಿಗೆ ಕಾರಣವಾಗಿದೆ. ಇದೇ ಸ್ಥಳದಲ್ಲಿ ವಾರದ ಹಿಂದೆಯಷ್ಟೇ ಅಪಘಾತವಾಗಿ ಮೂರು ಜನ ಸಾವನ್ನಪ್ಪಿದ್ದರು.‌ ರಸ್ತೆ ಬದಿಯಲ್ಲಿ ವಾಹನಗಳನ್ನು ನಿಲ್ಲಿಸುವುದನ್ನು ತಡೆಯಬೇಕು. ಈ ಬಗ್ಗೆ ರಸ್ತೆ ಹೆದ್ದಾರಿ ಗಸ್ತು ವಾಹನದವರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ” ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬಜೆಟ್ ನಲ್ಲಿ ನೇರಪಾವತಿಗೊಳಿಸದೆ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರಿಗೆ ಅನ್ಯಾಯ; ಪ್ರತಿಭಟನೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಭದ್ರ ನೀರು ಹರಿಸಲು ಅನುಮತಿ ಸ್ವಾಗತಾರ್ಹ: ಜಿಲ್ಲೆಯ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ

ಐದು ದಶಕಗಳ ಹೋರಾಟದ ಫಲವಾಗಿ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೊಂಡಿದ್ದು, ಕಾಮಗಾರಿ...

ಚಳ್ಳಕೆರೆ ಶಾಸಕ ಟಿ. ರಘುಮೂರ್ತಿಗೆ ಒಲಿದ ಸಚಿವ ಸ್ಥಾನ

 ರಾಜ್ಯ ಕಾಂಗ್ರೆಸ್ ಸರ್ಕಾರದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಚಿತ್ರದುರ್ಗ...

ಚಿತ್ರದುರ್ಗ | ನೀರು ಮತ್ತು ನೈರ್ಮಲ್ಯ ವಿಭಾಗದ 80 ಕಾಮಗಾರಿಗಳಲ್ಲಿ 28 ಕಡತ ಮಾತ್ರ ಲಭ್ಯ!

ಚಿತ್ರದುರ್ಗ ಜಿಲ್ಲೆಗೆ 2023-24 ಮತ್ತು 2024-25ನೇ ಸಾಲಿನಲ್ಲಿ ಕುಡಿಯುವ ನೀರು ಹಾಗೂ...