ಚಿತ್ರದುರ್ಗ | ಮಹಿಳೆಯರು, ಮಕ್ಕಳ ಮೇಲಿನ ಅಪರಾಧಗಳ ವಿರುದ್ಧ ಎಐಎಂಎಸ್ಎಸ್ ಆಂದೋಲನ

Date:

ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳ ವಿರುದ್ಧ 25 ನವೆಂಬರ್ 2025ರಿಂದ 25 ಮಾರ್ಚ್ 2026ರವರೆಗೆ ರಾಜ್ಯವ್ಯಾಪಿ ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಭಾಗವಾಗಿ ಎಐಎಂಎಸ್ಎಸ್ (AIMSS) ಚಿತ್ರದುರ್ಗ ಜಿಲ್ಲಾ ಸಮಿತಿ ಇಂದು ಪತ್ರಿಕಾಗೋಷ್ಠಿ ನಡೆಸಿತು.

- Advertisement -

ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ (ಎಐಎಂಎಸ್ಎಸ್) ರಾಜ್ಯ ಜಂಟಿ ಕಾರ್ಯದರ್ಶಿ ಶ್ರೀಮತಿ ಕಲ್ಯಾಣಿ ಮಾತನಾಡಿ, “ಒಂದೆಡೆ ಮಹಿಳೆಯರು ವಿಜ್ಞಾನ, ಕ್ರೀಡೆ, ಕಲೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವಾಗ, ಮತ್ತೊಂದೆಡೆ ಲಕ್ಷಾಂತರ ಮಹಿಳೆಯರು ಮತ್ತು ಮಕ್ಕಳು ಪ್ರತಿದಿನವೂ ಅತ್ಯಾಚಾರ, ದೌರ್ಜನ್ಯ, ಹಿಂಸೆಗೆ ಬಲಿಯಾಗುತ್ತಿರುವುದು ಆತಂಕಕಾರಿ ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...
1003436564

“ಮಹಿಳೆಯರು–ಮಕ್ಕಳ ಮೇಲಿನ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಠಿಣ ಕಾನೂನು ಜಾರಿಯಲ್ಲಿ ಸರ್ಕಾರದ ವ್ಯವಸ್ಥೆಗಳ ನಿಷ್ಕ್ರಿಯತೆ ಅಪರಾಧಿಗಳಿಗೆ ಧೈರ್ಯ ತುಂಬುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಹಾಗೂ ದೇಶದಾದ್ಯಂತ ನಡೆದ ಭೀಕರ ಪ್ರಕರಣಗಳು, ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ ದ(NCRB) ಅಂಕಿ–ಅಂಶಗಳ ವರದಿಯ ಪ್ರಕಾರ 2022ರಲ್ಲಿ 4.45 ಲಕ್ಷ ಮಹಿಳೆಯರ ಮೇಲಿನ ಅಪರಾಧಗಳು, 2019-2024ರ ಮೇ ವರೆಗೆ ಒಟ್ಟು 2.99 ಲಕ್ಷ ಮಕ್ಕಳ ಮೇಲಿನ ದೌರ್ಜನ್ಯ (POCSO) ಪ್ರಕರಣಗಳು ದಾಖಲಾಗಿವೆ. ಇನ್ನು ಕರ್ನಾಟಕದಲ್ಲಿ 2023-2025 ಜುಲೈ ವರೆಗಿನ ಅವಧಿಯಲ್ಲಿ 16,273 ಲೈಂಗಿಕ ದೌರ್ಜನ್ಯ, 5,456 ವರದಕ್ಷಿಣೆ ಕಿರುಕುಳ, 10,510 ಪೋಕ್ಸೋ, 417 ಬಾಲ್ಯ ವಿವಾಹಗಳ ಜೊತೆಗೆ ಇತರೆ ಸೇರಿದಂತೆ ಒಟ್ಟು 43,052 ಪ್ರಕರಣಗಳು ದಾಖಲಾಗಿವೆ. ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಪೋರ್ಟಲ್ ಪ್ರಕಾರ 80,813 ಬಾಲ ಗರ್ಭಿಣಿ ಪ್ರಕರಣಗಳು ದಾಖಲಾಗಿವೆ. ರಾಜ್ಯ ರಾಜಧಾನಿಯೇ ಬಾಲ ಗರ್ಭಿಣಿಯರ ಪ್ರಕರಣಗಳಲ್ಲಿ ಮುಂಚೂಣಿಯಲ್ಲಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಮಕ್ಕಳೇ ಈ ಸಮಾಜದ ಭವಿಷ್ಯವನ್ನು ರೂಪಿಸುವವರು. ದುರಂತವೆಂದರೆ ಅವರ ಭವಿಷ್ಯವೇ ನಾಶವಾಗುತ್ತಿದೆ. 2019-2021ರ ವರೆಗೆ ಕೇವಲ ಎರಡು ವರ್ಷಗಳಲ್ಲಿ 40 ಸಾವಿರ ಹೆಣ್ಣು ಮಕ್ಕಳು ಕಾಣೆಯಾಗಿದ್ದಾರೆ. ಇನ್ನು ದಾಖಲಾಗದ ಪ್ರಕರಣಗಳು ಎಷ್ಟೋ ಇವೆ” ಎಂದು ಆತಂಕ ವ್ಯಕ್ತಪಡಿಸಿದರು.

“ಬಾಲ ಗರ್ಭಿಣಿ, ಹೆಣ್ಣು ಭ್ರೂಣ ಹತ್ಯೆ, ಪೋಕ್ಸೋ ಪ್ರಕರಣಗಳ ಹೆಚ್ಚಳ ಸಮಾಜದ ವ್ಯವಸ್ಥೆಯನ್ನು ಹಾಳುಮಾಡುತ್ತಿದೆ. ಮೊಬೈಲ್, ಚಲನಚಿತ್ರ, ಟಿವಿ, ಸಾಮಾಜಿಕ ಮಾಧ್ಯಮಗಳಲ್ಲಿನ ಅಶ್ಲೀಲತೆ, ಕ್ರೌರ್ಯ, ಹಿಂಸೆ , ದೌರ್ಜನ್ಯ, ಮದ್ಯ–ಮಾದಕ ವಸ್ತುಗಳು ಅಪರಾಧ ಪ್ರವೃತ್ತಿಗೆ ಕಾರಣವಾಗುತ್ತಿವೆ” ಎಂದು ಕಳವಳಪಟ್ಟರು.

1003436566

“ಈ ಹಿನ್ನೆಲೆಯಲ್ಲಿ AIMSS ಕರ್ನಾಟಕ ರಾಜ್ಯ ಸಮಿತಿ ಸಹಿ ಸಂಗ್ರಹಣೆ, ಪ್ರತಿಭಟನೆ, ಸಭೆ–ಸಮಾವೇಶ, ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಮಹಿಳೆಯರನ್ನು ಜಾಗೃತಗೊಳಿಸುವ ಕಾರ್ಯ ಕೈಗೊಂಡಿದೆ. ಇದರ ಭಾಗವಾಗಿ ಜನವರಿ 7, 2026ರಂದು ಬೆಂಗಳೂರಿನ ಗಾಂಧಿಭವನದಲ್ಲಿ ರಾಜ್ಯಮಟ್ಟದ ಸಮಾವೇಶ ನಡೆಯಲಿದೆ. ವಿವಿಧ ಕ್ಷೇತ್ರಗಳ ಹಿರಿಯ ವಕೀಲರು, ಬರಹಗಾರರಾದ ಶ್ರೀಮತಿ ಹೇಮಲತಾ ಮಹಿಷಿ, ನಿಮ್ಹಾನ್ಸ್ ಮನಶಾಸ್ತ್ರ ವಿಭಾಗ ವೈದ್ಯೆ ಡಾ ಶ್ರೀದೇವಿ ಕುಮಾರ್, ವೈದ್ಯೆ ಡಾ.ಸುಧಾಕಾಮತ್,
ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಪ್ರೊ. ಸಬಿಹಾ ಭೂಮಿಗೌಡ, ಪ್ರಸಿದ್ಧ ರಂಗಕರ್ಮಿ ಪ್ರೊ. ರಾಮೇಶ್ವರಿ ವರ್ಮಾ ಹಾಗೂ ಗಣ್ಯರು ಭಾಗವಹಿಸಲಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಮಹಿಳೆಯರು ಸೇರಲಿದ್ದಾರೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕೆಆರ್ ಎಸ್ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ: ಕಾನೂನು ಕ್ರಮಕ್ಕೆ ಒತ್ತಾಯ

“ಈ ನಿಟ್ಟಿನಲ್ಲಿ ಅತ್ಯಾಚಾರ, ದೌರ್ಜನ್ಯ ತಡೆಗಟ್ಟಲು ಮಹಿಳೆ–ಮಕ್ಕಳ ಭದ್ರತೆಗೆ ಕಟ್ಟುನಿಟ್ಟಿನ ಕ್ರಮ, ಫಾಸ್ಟ್‌ಟ್ರ್ಯಾಕ್ ಕೋರ್ಟ್‌ಗಳು, ಅಪರಾಧಿಗಳಿಗೆ ಕಠಿಣ ಶಿಕ್ಷೆ, ಅಶ್ಲೀಲತೆ–ಮಾದಕ ವಸ್ತುಗಳ ನಿಷೇಧ, ಶಿಕ್ಷಣ–ಆರೋಗ್ಯ ಖಾಸಗೀಕರಣ ನಿಲ್ಲಿಸುವುದು ಸೇರಿದಂತೆ ಹಲವು ಹಕ್ಕೊತ್ತಾಯಗಳನ್ನು ಸಂಘಟನೆ ಮುಂದಿಡುತ್ತದೆ” ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಂಚಾಲಕಿ ಸುಜಾತ ಡಿ, ಸಹಸಂಚಾಲಕಿ ಕುಮುದ, ಬಿಂದು, ಜ್ಯೋತಿ ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...

ರಾಜ್ಯದಲ್ಲಿ ಭೀಕರ ಬರ: 46,000 ಕೋಟಿ ರೂ. ನಷ್ಟ; ಜಿಎಸ್‌ಟಿ ಆದಾಯದ ಮೇಲೆ ಪರಿಣಾಮ

ಕರ್ನಾಟಕದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ‌....

ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆ ಆರ್ಭಟ; 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು...

ದೆಹಲಿ ಪತ್ರಕರ್ತೆಗೆ ಪೊಲೀಸರಿಂದ ಲೈಂಗಿಕ ಕಿರುಕುಳ: ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಖಂಡನೆ

ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...