ಚಿತ್ರದುರ್ಗ | ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಹಾಯಧನ, ಕೃಷಿ ಘಟಕಗಳಿಗೆ ರೈತರ ಅರ್ಜಿ ಆಹ್ವಾನ.‌

Date:

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆ ವಿಸ್ತರಣೆ, ಕೃಷಿ ಪರಿಕರ, ಕೃಷಿ ಘಟಕಗಳಿಗೆ ಸಹಾಯಧನ ಪಡೆಯಲು ಆಸಕ್ತ ರೈತ ಫಲಾನುಭವಿಗಳಿಂದ 2025-26ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ರೈತರು 2025 ಜೂನ್ 20ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
1002057458
ರೈತರಿಗೆ ಸಹಾಯಧನ, ಕೃಷಿ ಘಟಕಗಳಿಗೆ ಚಿತ್ರದುರ್ಗ ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿಯಲ್ಲಿ ದಾಳಿಂಬೆ, ಕಂದು ಬಾಳೆ/ಅಂಗಾಂಶ ಬಾಳೆ, ಪಪ್ಪಾಯ, ಡ್ರಾಗನ್ ಪ್ರೂಟ್ ಹಣ್ಣಿನ ಬೆಳೆಗಳು, ಹೈಬ್ರೆಡ್ ತರಕಾರಿ, ಕಟ್ ಪ್ಲವರ್ಸ್ (ಗುಲಾಬಿ, ಜೆರ್ಬೆರಾ, ಕಾರ್ನೇಷನ್) ಸುಗಂಧರಾಜ, ಇತರೆ ಹೂವುಗಳು ಮತ್ತು ಕರಿಮೆಣಸು ಸೇರಿದಂತೆ ಹಲವು ತೋಟಗಾರಿಕೆ ಬೆಳೆಗಳಿಗೆ ಸಹಾಯಧನ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ಅಣಬೆ ಉತ್ಪಾದನಾ ಘಟಕ, ಬಹುವಾರ್ಷಿಕ ಸಾಂಬಾರು ಬೆಳೆಗಳ ಪ್ರದೇಶ ವಿಸ್ತರಣೆ ಕಾರ್ಯಕ್ರಮಕ್ಕೆ ಮತ್ತು  ಪುನಶ್ಚೇತನ ಕಾರ್ಯಕ್ರಮ, ಪಾಲಿಥೀನ್ ನರ್ಸರಿ ಘಟಕ, ಪಕ್ಷಿ ನಿರೋದಕ ಬಲೆ, ವೈಯಕ್ತಿಕ ನೀರು ಸಂಗ್ರಹಣಾ ಘಟಕ, ಪಾಲಿಹೌಸ್, ಪ್ಲಾಸ್ಟಿಕ್ ಮಲ್ಚಿಂಗ್, ಕಳೆ ನಿಯಂತ್ರಕ ಮ್ಯಾಟ್ (ವೀಡ್ ಮ್ಯಾಟ್), ತರಕಾರಿ ಬೆಳೆಗಳಿಗೆ ಆಧಾರ ನೀಡುವ ವ್ಯವಸ್ಥೆ, ಎರೆಹುಳು ಗೊಬ್ಬರ ಘಟಕ, ಜೇನು ಪೆಟ್ಟಿಗೆಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಲದೇ ಕೃಷಿ ಉಪಕರಣಗಳಾದ 20 ಹೆಚ್.ಪಿ ವರೆಗಿನ ಟ್ರ್ಯಾಕ್ಟರ್, ಪವರ್ ಟ್ರಿಲ್ಲರ್, ಭೂಮರ್ ಸ್ಪ್ರೆಯರ್, ಶೀಥಲಗೃಹ ಘಟಕ, ಪ್ರಾಥಮಿಕ ಸಂಸ್ಕರಣಾ ಘಟಕ, ಸೋಲಾರ್ ಕ್ರಾಪ್ ಡ್ರೈಯರ್, ಪ್ಯಾಕ್‍ಹೌಸ್ ಹಾಗೂ ಈರುಳ್ಳಿ ಶೇಖರಣ ಘಟಕಗಳಿಗೆ ಸಹಾಯಧನ ಪಡೆಯಲು ಆಸಕ್ತ ರೈತ ಫಲಾನುಭವಿಗಳಿಂದ ಅರ್ಜಿ ಅಹ್ವಾನಿಸಲಾಗಿರುತ್ತದೆ.

ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಗೆ 2025ರ ಜೂನ್ 20 ರೊಳಗೆ ನಿಯಮಾನುಸಾರ ಸಲ್ಲಿಸಲು ಕೋರಿದೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಫಲಿತಾಂಶ ಕುಂಠಿತ ಸರ್ಕಾರಿ ಶಾಲೆ, ಖಾಸಗಿ ಶಿಕ್ಷಣ ಸಂಸ್ಥೆಗಳ ದುಬಾರಿ ಶುಲ್ಕದ ಮೇಲೆ ಕ್ರಮಕ್ಕೆ ರೈತ ಸಂಘ ಆಗ್ರಹ.

ಹೆಚ್ಚಿನ ಮಾಹಿತಿಗಾಗಿ ರೈತರು ಆಯಾ ತಾಲ್ಲೂಕಿನ ಸಂಬಂಧಪಟ್ಟ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ, ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಜಂಟಿನಿರ್ದೇಶಕರು ತಿಳಿಸಿದ್ದಾರೆ.

IMG 20250205 WA0034
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಣೇಹಳ್ಳಿಯಲ್ಲಿ ಆರು ದಿನಗಳ ರಾಷ್ಟ್ರೀಯ ನಾಟಕೋತ್ಸವ : ನ.6ರಂದು ಸಮಾರೋಪ

ಕನ್ನಡ ರಾಜ್ಯೋತ್ಸವದ ಸಂಭ್ರಮದ ಬೆನ್ನಲ್ಲೇ ಸಾಣೇಹಳ್ಳಿಯಲ್ಲಿ ಆರು ದಿನಗಳ ರಾಷ್ಟ್ರೀಯ ನಾಟಕೋತ್ಸವದ...

ಕಬ್ಬು ಬೆಳೆಗಾರರ ಬದುಕಿಗೆ ಸಿಹಿಯಾಗದ ಕಬ್ಬಿನ ಬೆಲೆ!

ಕರ್ನಾಟಕದ ಕೃಷಿ ಆರ್ಥಿಕತೆಯಲ್ಲಿ ಕಬ್ಬು ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಸಾವಿರಾರು ರೈತ...

ಚಿತ್ರದುರ್ಗ | ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಚಿವ ಟಿ.ರಘುಮೂರ್ತಿ

ಭದ್ರಾ ಮೇಲ್ದಂಡೆ ಯೋಜನೆಯನ್ನು ಅನುಷ್ಠಾನಗೊಳಿಸಿ, ಮಧ್ಯ ಕರ್ನಾಟಕದ ಬರಪೀಡಿತ ಪ್ರದೇಶಗಳಿಗೆ ನೀರು...

ಚಿತ್ರದುರ್ಗ ಜಿಲ್ಲೆಯ 35 ಸಾಧಕರಿಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಜಿಲ್ಲೆಯ 35 ಮಂದಿ ಸಾಧಕರನ್ನು ಜಿಲ್ಲಾ...