ಚಿತ್ರದುರ್ಗ | ಚುನಾವಣೆ ನಡೆಸದೆ ಆಡಳಿತಾಧಿಕಾರಿ ನೇಮಕ: ಪರಿಶಿಷ್ಟ ಹಿಂದುಳಿದವರಿಗೆ ಅಧಿಕಾರ ನಿರಾಕರಣೆ

Date:

ಜಿಲ್ಲಾ, ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸದೆ 5 ವರ್ಷ ಕಳೆದಿದೆ, ಗ್ರಾಮ ಪಂಚಾಯತ್ ಅವಧಿ ಮುಗಿದು ಒಂದು ತಿಂಗಳಾದರೂ ಚುನಾವಣೆ ನಡೆಸದೆ ಆಡಳಿತಾಧಿಕಾರಿಗಳನ್ನು ಸರ್ಕಾರ ನೇಮಕ ಮಾಡಿದೆ. ಮೂರು ಹಂತದ ಪಂಚಾಯತ್ ಚುನಾವಣೆಗಳನ್ನು ಮುಂದೂಡಿ ಆಡಳಿತಾಧಿಕಾರಿ ನೇಮಿಸಿ, ಶಾಸಕ ಕೇಂದ್ರಿತ ಆಡಳಿತಕ್ಕೆ ಸರ್ಕಾರ ಸಜ್ಜಾಗಿದೆ. ಮಹಿಳೆಯರಿಗೆ, ಪ.ಜಾತಿ, ಪಂಗಡ ಹಾಗು ಹಿಂದುಳಿದ ವರ್ಗಗಳಿಗೆ ರಾಜಕೀಯ ಅಧಿಕಾರದಿಂದ ದೂರವಿಡುವುದು ಸಾಮಾಜಿಕ ನ್ಯಾಯದ ವಿರೋಧಿ ನಡೆ ಎಂದು ವಿರೋಧಿಸಿ ಚಿತ್ರದುರ್ಗ ತಾಲೂಕು ಯಳಗೋಡು ಗ್ರಾಮ ಪಂಚಾಯತಿ ಕಛೇರಿ ಮುಂಬಾಗ ಗ್ರಾಮ ಪಂಚಾಯತ ಸದಸ್ಯರ ಮಹಾ ಒಕ್ಕೂಟದ ಸದಸ್ಯರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದರು.‌

- Advertisement -

“ಅವಧಿ ಮುಗಿದರೂ ಗ್ರಾಮ ಪಂಚಾಯತ್ ಸೇರಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಮಾಡದೇ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ, ಗ್ರಾಮ ಸರ್ಕಾರಗಳನ್ನು ನಾಶ ಮಾಡುವ ಮೂಲಕ ಸ್ಥಳೀಯ ಅಧಿಕಾರದ ಮೂಲಕ ರಾಜಕೀಯ ಶಕ್ತಿ ಪಡೆಯುತ್ತಿದ್ದ ಪರಿಶಿಷ್ಟ ಜಾತಿ ಮತ್ತು ಪಂಗಡದ ಹಾಗೂ ಹಿಂದುಳಿದ ವರ್ಗಗಳ ರಾಜಕೀಯ, ಸಾಮಾಜಿಕ ನ್ಯಾಯವನ್ನು ತುಳಿಯಲಾಗುತ್ತಿದೆ” ಎಂದು ಆರೋಪಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ವ್ಯವಸ್ಥೆ ಇಲ್ಲದೆ ಕೇಂದ್ರ ಸರ್ಕಾರದಿಂದ ಬರಬೇಕಾದ 15 ನೇ ಹಣಕಾಸಿನ ಅನುದಾನ 5 ಸಾವಿರ ಕೋಟಿ ಬರದಿರುವದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ. ನಿಗದಿತ ಸಮಯದಲ್ಲಿ ಚುನಾವಣೆ ನಡಸದಿರುವುದೇ ಅನುದಾನ ಬರದಿರಲು ಕಾರಣ. ಸರ್ಕಾರ ಶೀಘ್ರದಲ್ಲೇ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪೌರ ಕಾರ್ಮಿಕರ ಮೇಲೆ ಹಲ್ಲೆ: ರಕ್ಷಣೆ ಸೂಕ್ತ ಕ್ರಮಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

ಯಳಗೋಡು ಗ್ರಾಮ ಪಂಚಾಯತಿಯ ಸರ್ವ ಸದಸ್ಯರುಗಳಾದ ಅನಿತಾ, ಕವಿತಾ, ಜಿಎಸ್ ರೂಪ, ಬಸಮ್ಮ, ಬಾನು, ನಿರ್ಮಲ, ಶಾಂತಮ್ಮ, ಹನುಮಂತಪ್ಪ, ರುದ್ರೇಶ್, ಪಾಲಯ್ಯ, ಬಸವರಾಜಪ್ಪ ಹಾಗೂ ಗ್ರಾಮಸ್ಥರು, ಚಿತ್ರದುರ್ಗ ಜಿಲ್ಲಾಧ್ಯಕ್ಷ ರಹಮತ್ ಉಲ್ಲಾ ಸೇರಿದಂತೆ ಇತರರು ಹಾಜರಿದ್ದರು.‌
.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...