ಚಿತ್ರದುರ್ಗ | ಪುನೀತ್ ಸ್ಮರಣಾರ್ಥ ಆರ್ಯ ಈಡಿಗ ಸಂಘದಿಂದ ಪುಷ್ಪನಮನ ಹಾಗೂ ಉಪಹಾರ ವಿತರಣೆ

Date:

ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗ ಚಿತ್ರದುರ್ಗ ಹಾಗೂ ತಾಲ್ಲೂಕು ಆರ್ಯ ಈಡಿಗ ಸಂಘದ ವತಿಯಿಂದ ಇಂದು ಚಿತ್ರದುರ್ಗ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥವಾಗಿ ಭಾವಪೂರ್ಣ ಪುಷ್ಪ ನಮನ ಹಾಗೂ ಉಪಹಾರ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

- Advertisement -
1002994205

ಕಾರ್ಯಕ್ರಮದಲ್ಲಿ ನಟ ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥವಾಗಿ ತಾಲ್ಲೂಕು ಆರ್ಯ ಈಡಿಗರ ಸಂಘದಿಂದ ಸಮಾಜಸೇವಾ ಚಟುವಟಿಕೆಗಳನ್ನು ಕೈಗೊಂಡು ಕಾರ್ಯಕ್ರಮದ ಅಂಗವಾಗಿ ಆಸ್ಪತ್ರೆಯ ಸಿಬ್ಬಂದಿ, ರೋಗಿಗಳು ಹಾಗೂ ಅವರ ಬಂಧುಗಳಿಗೆ ಉಚಿತ ಉಪಹಾರ ವಿತರಣೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...
1002994201

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಸಿ. ಎಸ್ ರವೀಂದ್ರ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಉಪವಿಭಾಗದ ಡಿ.ವೈ.ಎಸ್.ಪಿ ಶ್ರೀನಿವಾಸ್ ಆಗಮಿಸಿ ಭಾಗವಹಿಸಿ ಮಾತನಾಡಿದರು.

1002994204

ಅತಿಥಿಗಳು ಮಾತನಾಡಿ “ಪುನೀತ್ ರಾಜ್ ಕುಮಾರ್ ಅವರ ಮಾನವೀಯತೆ, ಸಮಾಜಸೇವೆ ಹಾಗೂ ಯುವಕರಿಗೆ ನೀಡಿದ ಪ್ರೇರಣೆ ಕುರಿತು ಮಾತನಾಡಿ, “ಸಮಾಜಕ್ಕಾಗಿ ಕೆಲಸ ಮಾಡುವ ಮನಸ್ಸು ಇರಬೇಕು. ಪುನೀತ್ ಅವರ ಜೀವನವೇ ಅದಕ್ಕೆ ಮಾದರಿ. ಎಲ್ಲರೂ ತಮ್ಮ ಆರೋಗ್ಯದ ಕಡೆ ಗಮನಹರಿಸಿ.‌ ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಅನೇಕರಿಗೆ ದಾರಿ ದೀಪವಾಗಿ ಸ್ಫೂರ್ತಿಯಾಗಿದ್ದಾರೆ” ಎಂದು ಸ್ಮರಿಸಿದರು.‌

1002994203

ಆರ್ಯ ಈಡಿಗ ಸಂಘದ ಮುಖಂಡರು ಮಾತನಾಡಿ “ನಮ್ಮ ಸಂಘವು ಸಮಾಜ ಸೇವೆಯನ್ನು ಧ್ಯೇಯವನ್ನಾಗಿ ಮಾಡಿಕೊಂಡು, ಪುನೀತ್ ರಾಜ್ ಕುಮಾರ್ ಅವರ ದಾನಶೀಲತೆಯಿಂದ ಪ್ರೇರಣೆ ಪಡೆದುಕೊಂಡಿದೆ” ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಅವರ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವಿಸಲಾಯಿತು. ಸಂಘದ ಸದಸ್ಯರು ಅವರ ಸ್ಮರಣಾರ್ಥ ಆಸ್ಪತ್ರೆಯ ಪರಿಸರದಲ್ಲಿ ಸಾವಿರಾರು ಜನರಿಗೆ ಉಪಹಾರ ವಿತರಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ನವೆಂಬರ್ 08ಕ್ಕೆ ಕನಕದಾಸರ ಜಯಂತಿ: ತಯಾರಿಗೆ ಜಿಲ್ಲಾಧಿಕಾರಿ ವೆಂಕಟೇಶ್ ಸೂಚನೆ

ಈ ಸಂದರ್ಭದಲ್ಲಿ ಸಂಘದ ಮುಖಂಡರುಗಳಾದ ಈ ಎನ್.ಲಕ್ಷ್ಮಿ ಕಾಂತ್, ಲಕ್ಷ್ಮಿನಾರಾಯಣ್, ಶ್ರೀನಿವಾಸ್, ಶಿವಕುಮಾರ್, ಉದಯ್, ಗುರು, ಗುರು ಕೊಳಲು, ಮಂಜುನಾಥ್ ಜೆ, ಯೋಗೇಶ್, ಚಂದ್ರು, ಮೃತ್ಯುಂಜಯ, ನವೀನ್, ಸಂತೋಷ್, ಸುರೇಶ್, ಅಭಿ, ನಿಂಗೇಶ್ ಎಲ್. ಶ್ರೀನಿವಾಸ್, ಪ್ರಸನ್ನ ಬಾಬು, ಡಿ. ಮಂಜುನಾಥ್, ಹಾಗೂ ಅಭಿಮಾನಿ ಬಳಗದ ಸುರೇಂದ್ರ, ರಾಘವೇಂದ್ರ ಎಸ್ ಹಾಗೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...

ಹಾಸನ | SIR ವಿರೋಧ: ಚುನಾವಣಾ ಆಯೋಗ ಅಕ್ರಮವಾಗಿ ಕಾರ್ಯನಿರ್ವಹಿಸಿದೆ; ನಟ ಪ್ರಕಾಶ್ ರಾಜ್ 

SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...