ಚಿತ್ರದುರ್ಗ | ಆಶ್ರಮದ ಕಾರ್ಯಕ್ರಮಕ್ಕೆ ಟ್ರಸ್ಟ್ ಸದಸ್ಯರು ಭಾಗವಹಿಸಲು ಆಶ್ರಮ ರಕ್ಷಣಾ ಸಮಿತಿ ಆಕ್ಷೇಪ

Date:

ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಟ್ರಸ್ಟಿಗಳ‌ ಅವ್ಯವಹಾರದ ವಿರುದ್ಧ ಎಂಟು ದಿನಗಳ ಹೋರಾಟ ನೆಡೆಸಿ, ತನಿಖೆಯ ಭರವಸೆ ನಂತರ ಮುಂದೂಡಿದ್ದ ಆಶ್ರಮ ರಕ್ಷಣಾ ಸಮಿತಿಯು ಮತ್ತೆ ಹೋರಾಟ ಪ್ರಾರಂಭಿಸಿದ್ದು, ಕೆಲವರು ಅಕ್ರಮವಾಗಿ ಟ್ರಸ್ಟಿಗಳಾಗಿ ಸೇರಿಕೊಂಡಿದ್ದಾರೆ. ಅವರು ಟ್ರಸ್ಟ್‌ನ ಸಮಾರಂಭಗಳಲ್ಲಿ ಪಾಲ್ಗೊಳ್ಳಲು ಅವರಿಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿ ಆಕ್ಷೇಪ ವ್ಯಕ್ತಪಡಿಸಿ ಆಶ್ರಮ ರಕ್ಷಣಾ ಸಮಿತಿಯ ಸದಸ್ಯರು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿಯ ಆಶ್ರಮದ ಹೊರಗೆ ಪ್ರತಿಭಟನೆ ನಡೆಸಿದರು.

- Advertisement -
1002203542

ಟ್ರಸ್ಟ್‌ನ ನೂತನ ಅಧ್ಯಕ್ಷ ಮಾದಾರ ಚನ್ನಯ್ಯ ಸ್ವಾಮೀಜಿ ಅವರು ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಬಂದಾಗ ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ವೇಳೆ ಮಾತನಾಡಿದ ಮುಖಂಡರು “ಆಶ್ರಮಕ್ಕೆ ಅಕ್ರಮವಾಗಿ ಟ್ರಸ್ಟಿಗಳನ್ನು ನೇಮಕ ಮಾಡಲಾಗಿದೆ. ಟ್ರಸ್ಟಿನ ಸದಸ್ಯರು ಹಣಕಾಸು ಅವ್ಯವಹಾರಗಳು ನಡೆಸಿದ್ದು, ಈ ಬಗ್ಗೆ ತನಿಖೆ ಆಗಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆಶ್ರಮ ಉಳಿಸಲು ಸುತ್ತಲಿನ ಹಳ್ಳಿಗಳ ಗ್ರಾಮಸ್ಥರು ಸೇರಿ ಹೋರಾಟ ಮಾಡಿದ್ದೇವೆ. ಸರ್ಕಾರ ಏಪ್ರಿಲ್ ತಿಂಗಳಲ್ಲಿ ಜಿಲ್ಲಾಧಿಕಾರಿ, ಎಸಿ, ತಹಶೀಲ್ದಾರ್ ನೇತೃತ್ವದಲ್ಲಿ ತನಿಖಾ ತಂಡ ರಚಿಸಿದ್ರು. ಮೂರು ತಿಂಗಳ ಒಳಗೆ ವರದಿ ಸಲ್ಲಿಸುವಂತೆ ಆದೇಶ ನೀಡಿದೆ. ತನಿಖೆ ಮುಗಿದು ಆದೇಶ ಬರುವವರೆಗೆ ಆಶ್ರಮದ ಒಳಗೆ ಟ್ರಸ್ಟಿಗಳನ್ನು ಬಿಡಬಾರದು’ ಎಂದು ಮನವಿ ಮಾಡಿದರು.

1002203544

‘ನಮಗೆ ಮಾದಾರ ಚನ್ನಯ್ಯ ಶ್ರೀಗಳ ಮೇಲೆ ಭಕ್ತಿ ಇದೆ. ಆದರೆ, ಇಲ್ಲಿನ ಟ್ರಸ್ಟಿಗಳು ತಮ್ಮ ಭ್ರಷ್ಟಾಚಾರಗಳನ್ನು ಮುಚ್ಚಿ ಹಾಕಿಕೊಳ್ಳಲು ವಿವಿಧ ರೀತಿಯ ಷಡ್ಯಂತ್ರ ರೂಪಿಸುತ್ತಿದ್ದಾರೆ’ ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಳೆ ಬಂದರೆ ಸೋರುವ ಬೀಳುವ ಹೆಂಚು ಪ್ರಾಣಿಗಳ ವಾಸಸ್ಥಾನವಾದ ಅಮರಾವತಿ ಶಾಲೆ; ಶಿಕ್ಷಣಾಸಕ್ತರ ಆರೋಪ

‘ತನಿಖೆಗೆ ನನ್ನ ಸಂಪೂರ್ಣ ಸಹಮತ ಇದೆ. ಜಿಲ್ಲಾಧಿಕಾರಿ ನೇತೃತ್ವದ ತಂಡ ಪರಿಶೀಲನೆ ನಡೆಸಿ ವರದಿ ಕೊಡಲಿ. ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ತಪ್ಪು ಮಾಡಿದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಗೊಂದಲಗಳಿದ್ದರೆ ಕೂತು ಬಗೆಹರಿಸಿಕೊಳ್ಳೋಣ. ಆಶ್ರಮದ ಆಡಳಿತ ಸ್ವಚ್ಛವಾಗಿರಬೇಕು. ಅದಕ್ಕೆ ಸ್ವಾಮೀಜಿ ಸಹಕಾರ ನೀಡಬೇಕು’ ಎಂದು ಒತ್ತಾಯಿಸಿದರು.

ಮುಖಂಡರಾದ ಸಂತೋಷ್, ವಿನೋದ್. ಉಮೇಶ್, ದುಮ್ಮಿ ಬಸವರಾಜಪ್ಪ, ಎ.ಚಿತ್ತಪ್ಪ ಸೇರಿದಂತೆ ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....