ಚಿತ್ರದುರ್ಗ | ಮುಖ್ಯ ನ್ಯಾಯಾಧೀಶರ ಮೇಲೆ ಹಲ್ಲೆ ಯತ್ನ: ಕ್ರಮಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

Date:

ಸುಪ್ರೀಂ ಕೋರ್ಟ್ ಕಲಾಪ ನಡೆಯುತ್ತಿರುವ ಸಂದರ್ಭದಲ್ಲಿ ವಕೀಲನೊಬ್ಬ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿಯವರ ಮೇಲೆ ಶೂ ಎಸೆದ ಪ್ರಕರಣವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ ಕೃಷ್ಣಪ್ಪ) ತೀವ್ರವಾಗಿ ಖಂಡಿಸಿ ಪ್ರತಿಭಟಿಸುತ್ತದೆ. ಇದು ಕೇವಲ ಮುಖ್ಯ ನ್ಯಾಯಮೂರ್ತಿಯವರ ಮೇಲೆ ನಡೆದ ದಾಳಿಯಲ್ಲ. ಇದು ಭಾರತದ ಸಂವಿಧಾನದ ಮೇಲೆ ನಡೆದ ದಾಳಿಯಾಗಿದೆ. ಬಿ.ಆರ್ ಗವಾಯಿ ಯವರ ಮೇಲೆ ಶೂ ಎಸೆದ ವಕೀಲನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ದಸಂಸ ಚಿತ್ರದುರ್ಗ ಜಿಲ್ಲಾ ಹಾಗೂ ಹೊಳಲ್ಕೆರೆ ತಾಲೂಕು ಘಟಕದ ಮುಖಂಡರು ಹೊಳಲ್ಕೆರೆ ತಹಶೀಲ್ದಾರ್ ರವರಿಗೆ ಮನವಿ ನೀಡಿ ಆಗ್ರಹಿಸಿದರು.‌

- Advertisement -

ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, “ದಲಿತನೊಬ್ಬ ಮುಖ್ಯ ನ್ಯಾಯಾಧೀಶರ ಪೀಠದಲ್ಲಿ ಕೂತು ನ್ಯಾಯ ಕೊಡುವುದನ್ನು ಸನಾತನವಾದಿಗಳು ಯಾವತ್ತೂ ಒಪ್ಪಿಕೊಳ್ಳುವುದಿಲ್ಲ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಇತ್ತೀಚೆಗೆ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾ. ಬಿ.ಆರ್ ಗವಾಯಿಯವರು ತಾವು ಅಂಬೇಡ್ಕರ್ ವಾದಿಗಳು ಆರ್.ಎಸ್.ಎಸ್ ನಂತಹ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಇದರ ಬೆನ್ನಲ್ಲೆ ಸೋಮವಾರ ವಿಚಾರಣೆಯಲ್ಲಿ ವಕೀಲನೊಬ್ಬ ಶೂ ಎಸೆದಿದ್ದಾನೆ”ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಸನಾತನ ಧರ್ಮಕ್ಕೆ ಅಪಮಾನ ಮಾಡಿದರೆ ಸಹಿಸುವುದಿಲ್ಲವೆಂದು ಉದ್ದಟತನದಿಂದ ವಕೀಲ ಮಾತನಾಡಿರುವುದು ಸನಾತನವಾದಿಗಳ ಮುಖವಾಡ ಕಳಚಿದಂತಾಗಿದೆ. ಸಿಜೆಐ ಗವಾಯಿಯವರು ಉತ್ತರ ಪ್ರದೇಶದ ಸರ್ಕಾರದ ಬುಲ್ಲೋಜರ್ ಕಾರ್ಯಾಚರಣೆಗೆ ತಡೆ ನೀಡಿದ್ದಲ್ಲದೇ, ಯಾವುದೇ ಪ್ರಕರಣವಿದ್ದರೂ ಸಂವಿಧಾನದಡಿಯಲ್ಲೇ ಆದೇಶ ನೀಡುತ್ತಿರುವುದು ಸನಾತನವಾದಿಗಳಿಗೆ ಬಿಸಿತುಪ್ಪವಾಗಿದೆ. ಆದ್ದರಿಂದ ಬಿ.ಆರ್ ಗವಾಯಿ ಯವರ ಮೇಲೆ ಶೂ ಎಸೆದ ವಕೀಲನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು” ಎಂದು ಚಿತ್ರದುರ್ಗದ ಜಿಲ್ಲಾ ಹಾಗೂ ತಾಲೂಕು ದಸಂಸ ಮುಖಂಡರು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆತ: ಕಾನೂನಿನ ಶಿಷ್ಟತೆ ಕಾಪಾಡುವವರಿಂದಲೇ ಸಂವಿಧಾನದ ಕಗ್ಗೊಲೆ

ಈ ವೇಳೆ ದಲಿತ ಸಂಘರ್ಷ ಸಮಿತಿ ಜಿಲ್ಲಾ ಮತ್ತು ತಾಲೂಕು ಮುಖಂಡರಾದ ಕೆಂಗುಂಟೆ ಜಯ್ಯಣ್ಣ, ಸುಂದರ್ ಮೂರ್ತಿ, ನವೀನ್ ಮದ್ದೇರು, ಶ್ರೀನಿವಾಸ್, ರಾಮಚಂದ್ರಪ್ಪ, ನಾಗರಾಜಪ್ಪ, ಪ್ರಭಾಕರ್ ಹಾಗೂ ಇತರ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಭದ್ರ ನೀರು ಹರಿಸಲು ಅನುಮತಿ ಸ್ವಾಗತಾರ್ಹ: ಜಿಲ್ಲೆಯ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ

ಐದು ದಶಕಗಳ ಹೋರಾಟದ ಫಲವಾಗಿ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೊಂಡಿದ್ದು, ಕಾಮಗಾರಿ...

ಹಾವನೂರು ವರದಿ ಅನುಷ್ಠಾನ, ಅರಸರ ಐತಿಹಾಸಿಕ ಕ್ರಮ ಎಂದ ರವಿವರ್ಮಕುಮಾರ್

ಇಂದು ದೇವರಾಜ ಅರಸು ಜನ್ಮದಿನ. ಆ ನೆಪದಲ್ಲಿ ಹಿಂದುಳಿದ ವರ್ಗಗಳ ಪಾಲಿನ...

ಪತ್ರಿಕಾ ಸ್ವಾತಂತ್ರ್ಯವನ್ನು ದುರುಪಯೋಗ ಮಾಡಬಾರದು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಜಾವಾಣಿಯ ನಿವೃತ್ತ ಸಹಾಯಕ ಸಂಪಾದಕ ಉದಯ್‌ಕುಮಾರ್‌ಗೆ ಖಾದ್ರಿ ಶಾಮಣ್ಣ ಪ್ರಶಸ್ತಿ ಪ್ರದಾನ ಪತ್ರಿಕೋದ್ಯಮ...

ಚಿತ್ರದುರ್ಗ | ನೀರು ಮತ್ತು ನೈರ್ಮಲ್ಯ ವಿಭಾಗದ 80 ಕಾಮಗಾರಿಗಳಲ್ಲಿ 28 ಕಡತ ಮಾತ್ರ ಲಭ್ಯ!

ಚಿತ್ರದುರ್ಗ ಜಿಲ್ಲೆಗೆ 2023-24 ಮತ್ತು 2024-25ನೇ ಸಾಲಿನಲ್ಲಿ ಕುಡಿಯುವ ನೀರು ಹಾಗೂ...