ಚಿತ್ರದುರ್ಗ | ಡೆಂಗ್ಯೂ ರೋಗ ತಡೆಗೆ ಜಾಗೃತಿ ಜಾಥಾ

Date:

ಪರಿಸರ, ಡೆಂಗ್ಯೂ ರೋಗ ತಡೆ ಹಾಗೂ ಶುದ್ಧ ಕುಡಿಯುವ ನೀರಿನ ಕುರಿತು ಚಿತ್ರದುರ್ಗದ ರಾಮದಾಸ್ ಕಾಂಪೌಂಡ್ ಪ್ರದೇಶದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಜಾಗೃತಿ ಕಾರ್ಯಕ್ರಮ ನಡೆಸಿದ್ದಾರೆ. ಸ್ವಚ್ಛತೆ ಮತ್ತು ನೈರ್ಮಲ್ಯ ಸಂಬಂಧಿತ ಕರಪತ್ರಗಳನ್ನು ಹಂಚಿ, ಗುಂಪು ಸಭೆ ನಡೆಸಿದ್ದಾರೆ.

- Advertisement -

ಸಭೆಯಲ್ಲಿ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಎನ್‌.ಎಸ್‌. ಮಂಜುನಾಥ್‌, “ಮನೆಗಳ ಸುತ್ತ-ಮುತ್ತ ನೀರು ನಿಲ್ಲದಂತೆ, ನೀರಿನಲ್ಲಿ ಲಾರ್ವ, ಹುಳಗಳು ಬೆಳೆಯದಂತೆ ಎಚ್ಚರವಹಿಸಬೇಕು. ಸ್ವಚ್ಛತೆ ಕಾಪಾಡುವುದರಿಂದ ಡೆಂಗ್ಯೂ ಜ್ವರದಿಂದ ಪಾರಾಗಬೇಕು. ಕೀಟ ಜನ್ಯ ರೋಗಗಳು ನಮ್ಮನ್ನು ಆಳುವ ಮುನ್ನ, ಸಾರ್ವಜನಿಕರು ಎಚ್ಚರವಹಿಸಿ ಜಾಗೃತರಾಬೇಕು. ಪರಿಸರ ಸ್ವಚ್ಛತೆ, ಘನ ತ್ಯಾಜ್ಯ ವಸ್ತುಗಳ ಸರಿಯಾದ ವಿಲೇವಾರಿ, ವೈಯಕ್ತಿಕ ಸ್ವಚ್ಛತೆಯ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಆರೋಗ್ಯ ನಿರೀಕ್ಷಣಾಧಿಕಾರಿ ಗಂಗಾಧರ್ ರೆಡ್ಡಿ ಮಾತನಾಡಿ, “ಕಲುಷಿತ ನೀರು ಮತ್ತು ಆಹಾರದಿಂದ ಹರಡಬಹುದಾದ ಕರುಳು ಬೇನೆ, ಕಾಮಾಲೆ, ವಿಷಮಶೀತ ಜ್ವರ, ಇತ್ಯಾದಿಗಳು ನಮ್ಮನ್ನು ಬಾಧಿಸುವ ಮುನ್ನ ಮುನ್ನೆಚ್ಚರಿಕೆ ಕ್ರಮಗಳನ್ನು ನಾವು ಪಾಲಿಸಬೇಕು” ಎಂದರು. ಶುದ್ಧ ನೀರು ಆಹಾರ ಸೇವನೆ, ಸಾಬೂನು ಬಳಸಿ ಕೈತೊಳೆದುಕೊಳ್ಳುವುದು, ನೊಣಗಳಿಂದ ಆಹಾರ ಸಂರಕ್ಷಣೆ, ಕೈ ತೊಳೆಯೋ ವಿಧಾನದ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ ಮೂಗಪ್ಪ ಮಾತನಾಡಿ, “ಸಮರ್ಪಕ ಘನತ್ಯಾಜ್ಯ ಸಮರ್ಪಕ ಘನತ್ಯಾಜ್ಯ ವಸ್ತುಗಳ ವಿಲೇವಾರಿ ನೀರು ಪೂರೈಕೆ ಸುರಕ್ಷಿತ ನೀರು ಶೇಖರಣೆ ಆರೋಗ್ಯಕರ ಪರಿಸರವನ್ನು ನಿರ್ಮಾಣ ಸಂಸ್ಥೆ ಮಾಡುವ ಜವಾಬ್ದಾರಿ ಎಲ್ಲರದ್ದಾಗಿದೆ” ಎಂದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರಾದ ಫಾರೂಕ್, ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀಧರ್ ರಂಗಾರೆಡ್ಡಿ, ಸುಪ್ರೀತಾ, ರೂಪಾ ಸೇರಿದಂತೆ ಆಶಾ ಕಾರ್ಯಕರ್ತೆಯರು ಬಡಾವಣೆಯ ಸಾರ್ವಜನಿಕರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಬಡಾವಣೆಯ 300 ಮನೆಗಳ ಲಾರ್ವ ಸಮೀಕ್ಷೆ ಕೈಗೊಂಡು ಕಲುಷಿತಗೊಂಡಿರುವ ನೀರಿನ ಮೂಲಗಳನ್ನು ಪತ್ತೆ ಹಚ್ಚಿ, ಖಾಲಿ ನಿವೇಶನಗಳಲ್ಲಿ ಕಳೆ ಮತ್ತು ಸ್ವಚ್ಛತೆ ಇಲ್ಲದಿರುವ ಅಂಶವನ್ನು ನಗರಸಭೆಗೆ ಸರಿಪಡಿಸಲು ತಿಳಿಸಲಾಯಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿರಿಯ ಕಾದಂಬರಿಕಾರ್ತಿ ಸಿ.ಎನ್. ಮುಕ್ತಾ ನಿಧನ

ಪ್ರಸಿದ್ಧ ಕಾದಂಬರಿಕಾರ್ತಿ ಹಾಗೂ ಜನಪ್ರಿಯ ಲೇಖಕಿ ಸಿ.ಎನ್. ಮುಕ್ತಾ (77) ಅವರು...

ಹಿರಿಯೂರು | ಬೈ-ಎಲೆಕ್ಷನ್ ಪೈಪೋಟಿ: ಮೈತ್ರಿಕೂಟದಲ್ಲಿ ಟಿಕೆಟ್ ಕಸರತ್ತು!

ಸಚಿವ ಹಾಗೂ ಹಿರಿಯೂರು ಶಾಸಕ ಡಿ ಸುಧಾಕರ್ ಅವರ ನಿಧನದಿಂದ ಎದುರಾಗಿರುವ...

ಮೊಳಕಾಲ್ಮೂರು | ವಿಂಡ್ ಫ್ಯಾನ್ ಕಾಮಗಾರಿ ಸ್ಥಗಿತಕ್ಕೆ ರೈತ ಸಂಘ ಪ್ರತಿಭಟನೆ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನಲ್ಲಿ ವಾಸದ ಮನೆಗಳ ಸಮೀಪ ಅಕ್ರಮವಾಗಿ ವಿಂಡ್...

ಹಿರಿಯೂರು | ಕಲ್ಲುವಳ್ಳಿ ಭಾಗದ 17 ಕೆರೆಗಳಿಗೆ ನೀರು ತುಂಬಿಸುವಂತೆ ಒತ್ತಾಯಿಸಿ ಪ್ರತಿಭಟನೆ

 ಕಲ್ಲುವಳ್ಳಿ ಭಾಗದ ರೈತರು ಗಾಯತ್ರಿ ಅಣೆಕಟ್ಟೆ ಒಳಗೊಂಡು 17 ಕೆರೆಗಳಿಗೆ ವಾಣಿವಿಲಾಸ...